ಬೆಂಗಳೂರು: ಬಿಟಿಎಂ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಸ್ವಾಧೀನಪಡಿಸಿಕೊಳ್ಳಲಾಗಿದ್ದ ಮುಕ್ಕಾಲು ಎಕರೆ ಪ್ರದೇಶದ ಅತಿಕ್ರಮಣವನ್ನು ಶುಕ್ರವಾರ ತೆರವುಗೊಳಿಸಿರುವ ಬಿಡಿಎ ಅಧಿಕಾರಿಗಳು ಸದರಿ ಜಾಗವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಿಳೇಕಹಳ್ಳಿಯ ಸರ್ವೆ ಸಂಖ್ಯೆ 172/2ಎ ನಲ್ಲಿ ಬಿಟಿಎಂ ಬಡಾವಣೆ ನಿರ್ಮಾಣಕ್ಕೆಂದು ಜಾಗವನ್ನು ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು.


COMMERCIAL BREAK
SCROLL TO CONTINUE READING

ಈ ಪೈಕಿ ಸುಮಾರು ಮುಕ್ಕಾಲು ಎಕರೆ ಪ್ರದೇಶದಲ್ಲಿ ಒತ್ತುವರಿದಾರರು ಒಂದು ತಾತ್ಕಾಲಿಕ ಶೆಡ್, ನರ್ಸರಿ ಮತ್ತು ಕಟ್ಟಡ ನಿರ್ಮಾಣ ಸರಕುಗಳನ್ನು ತುಂಬಿದ್ದರು. ಹಲವು ಬಾರಿ ಬಿಡಿಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಒತ್ತುವರಿದಾರರು ಶೆಡ್ ಮತ್ತು ಇತರೆ ನಿರ್ಮಾಣಗಳನ್ನು ತೆರವುಗೊಳಿಸಿರಲಿಲ್ಲ. ಇತ್ತೀಚೆಗೆ ಸುಪ್ರೀಂಕೋರ್ಟ್ ಬಿಡಿಎ ಪರ ತೀರ್ಪು ನೀಡಿ ಸದರಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳಲು ಅನುಮತಿ ನೀಡಿತ್ತು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.