ನವದೆಹಲಿ: ಐಪಿಎಲ್ 2021ರ ಉಳಿದ ಪಂದ್ಯಗಳ ಆಯೋಜನೆಗೆ ಯುಎಇ ಸಿದ್ಧವಾಗಿದೆ. ಐಪಿಎಲ್‌ನ ಉಳಿದ ಪಂದ್ಯಗಳು ಸೆಪ್ಟೆಂಬರ್ 17 ರಿಂದ ನಡೆಯಲಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಅವರ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.


COMMERCIAL BREAK
SCROLL TO CONTINUE READING

ಐಪಿಎಲ್ ಮೊದಲು ತೂಕ ಇಳಿಸಿಕೊಂಡ ಧೋನಿ:
ಇತ್ತೀಚೆಗೆ ಎಂ.ಎಸ್.ಧೋನಿ (MS Dhoni) ತಮ್ಮ ಲುಕ್ ಬದಲಾಯಿಸಿಕೊಂಡಿದ್ದಾರೆ. ಅವರ ರೌಡಿ ಮೀಸೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಆಷ್ಟೇ ಅಲ್ಲ ಧೋನಿಯ ಈ ಹೊಸ ಲುಕ್ ಅನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಿದ್ದಾರೆ. ಅದೇ ಸಮಯದಲ್ಲಿ, ನೀವು ಧೋನಿಯ ಚಿತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ತಮ್ಮ ತೂಕ ಇಳಿಸಿಕೊಂಡಿರುವುದು ತಿಳಿಯುತ್ತದೆ.


T20 World Cup 2021 : ಎದುರು ಬದುರಾಗಲಿದೆ ಭಾರತ ಪಾಕಿಸ್ತಾನ , ಯಾವ ಗ್ರೂಪ್ ನಲ್ಲಿ ಯಾವ ತಂಡ ಸಂಪೂರ್ಣ ಮಾಹಿತಿ ಇಲ್ಲಿದೆ


ವಾಸ್ತವವಾಗಿ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಇತ್ತೀಚಿಗೆ  ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಸಿಂಗರ್ ರಾಹುಲ್ ವೈದ್ಯ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ಬಂದರು. ಈ ಸಂದರ್ಭದಲ್ಲಿ ಅವರ ಹೊಸ ಲುಕ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.


ಸೆಪ್ಟೆಂಬರ್ 17 ರಿಂದ ಐಪಿಎಲ್ ಪ್ರಾರಂಭವಾಗಲಿದೆ:
ಮೇ 4 ರಂದು ಕರೋನಾದ ಕಾರಣ ಮುಂದೂಡಲ್ಪಟ್ಟ ಐಪಿಎಲ್ 2021 (IPL 2021) ಈಗ ಸೆಪ್ಟೆಂಬರ್‌ನಲ್ಲಿ ಪುನರಾರಂಭಗೊಳ್ಳಲಿದ್ದು, ಅಂತಿಮ ಪಂದ್ಯ ಅಕ್ಟೋಬರ್‌ನಲ್ಲಿ ನಡೆಯಲಿದೆ. ಐಪಿಎಲ್ 2021 ರ ಉಳಿದ ಪಂದ್ಯಗಳು ಸೆಪ್ಟೆಂಬರ್ 17 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವನ್ನು ಅಕ್ಟೋಬರ್ 15 ರಂದು ಆಡಬಹುದು ಎಂದು ಹೇಳಲಾಗುತ್ತಿದೆ.


Shivam Dube: ಬಹುಕಾಲದ ಗೆಳತಿ ಅಜುಂ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಿವಂ ದುಬೆ


ಧೋನಿ ಅವರ ಕ್ರಿಕೆಟ್ ವೃತ್ತಿಜೀವನ:
2019 ರ ಜುಲೈನಲ್ಲಿ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಎಂ.ಎಸ್. ಧೋನಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದರು. ಧೋನಿ 15 ಆಗಸ್ಟ್ 2020 ರಂದು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು. ಧೋನಿ ನಾಯಕತ್ವದಲ್ಲಿ ಭಾರತ ಐಸಿಸಿ ವಿಶ್ವ ಟಿ 20 (2007), ಕ್ರಿಕೆಟ್ ವಿಶ್ವಕಪ್ (2011) ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿ (2013) ಪ್ರಶಸ್ತಿಯನ್ನು ಗೆದ್ದಿದೆ. ಇದಲ್ಲದೆ ಭಾರತ 2009 ರಲ್ಲಿ ಮೊದಲ ಬಾರಿಗೆ ಟೆಸ್ಟ್‌ನಲ್ಲಿ ಪ್ರಥಮ ಸ್ಥಾನ ಗಳಿಸಿತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.