ಭಾರತ-ಪಾಕ್ ಅಭಿಮಾನಿಗಳಿಗೆ ಬಿಗ್ ನ್ಯೂಸ್! ವಿಶ್ವಕಪ್ ಸಂಬಂಧ ಮಹತ್ವದ ನಿರ್ಧಾರ ಕೈಗೊಂಡ PCB
World Cup 2023 India vs Pakistan: ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ವಿಶ್ವಕಪ್ ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮೋದನೆ ಕೋರಿ ಪಿಸಿಬಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಆಂತರಿಕ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.
World Cup 2023 India vs Pakistan: ಏಕದಿನ ವಿಶ್ವಕಪ್ 2023 ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಅಕ್ಟೋಬರ್ 5 ರಿಂದ ಟೂರ್ನಿ ಆರಂಭವಾಗಲಿದೆ. ಆದರೆ ಈ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬರಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದೀಗ ಈ ಟೂರ್ನಿ ಸಂಬಂಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ದೊಡ್ಡ ಹೆಜ್ಜೆ ಇಟ್ಟಿದೆ.
ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಈ ರಾಶಿಗಳ ಮೇಲಿರಲಿದೆ ಶಿವನ ಶ್ರೀರಕ್ಷೆ: ರಾಜವೈಭೋಗ ಸಿದ್ಧಿ-ಸಂಪತ್ತಿನಿಂದ ತಿಜೋರಿ ತುಂಬುವುದು!
ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ವಿಶ್ವಕಪ್ ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮೋದನೆ ಕೋರಿ ಪಿಸಿಬಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಆಂತರಿಕ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.
ಪತ್ರದಲ್ಲಿ ಪಾಕಿಸ್ತಾನ ತಂಡಕ್ಕೆ ಭಾರತಕ್ಕೆ ಪ್ರಯಾಣಿಸಲು ಅವಕಾಶ ನೀಡಬೇಕೇ? ಪಾಕಿಸ್ತಾನದ ಪಂದ್ಯಗಳಿಗೆ ಆಯ್ಕೆ ಮಾಡಿದ ಐದು ಸ್ಥಳಗಳಲ್ಲಿ ಯಾವುದಾದರೂ ಆಕ್ಷೇಪಣೆಗಳಿವೆಯೇ? ಎಂಬ ಬಗ್ಗೆ ಸಲಹೆ ಕೇಳಲಾಗಿದೆ.
ಪಾಕ್ ತಂಡ ಭಾರತಕ್ಕೆ ಬರಲಿದೆಯೇ ಅಥವಾ ಇಲ್ಲವೇ ಎಂಬುದು ಪಾಕಿಸ್ತಾನ ಸರ್ಕಾರದ ಉತ್ತರದ ನಂತರವಷ್ಟೇ ಸ್ಪಷ್ಟವಾಗಲಿದೆ. ಸರ್ಕಾರಕ್ಕೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಮಿತಿಯನ್ನೂ ಸಹ ನೀಡಿಲ್ಲ. ಆದರೆ ಸರ್ಕಾರದ ಅನುಮೋದನೆಯಿಲ್ಲದೆ ಪಿಸಿಬಿ ಪ್ರಯಾಣಿಸುವುದಿಲ್ಲ ಎಂಬುದು ಮಾತ್ರ ಸ್ಪಷ್ಟ.
ವಿಶ್ವಕಪ್ ನ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ, ಪಿಸಿಬಿ ತನ್ನ ಆಟವು ಸರ್ಕಾರದಿಂದ ಅನುಮೋದನೆ ಪಡೆಯುವುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. :ಇದು ಸೂಕ್ಷ್ಮ ವಿಷಯವಾಗಿದೆ, ಆದ್ದರಿಂದ ಮಂಡಳಿಯು ತನ್ನ ಸರ್ಕಾರದಿಂದ ಸ್ಪಷ್ಟ ಸೂಚನೆಗಳನ್ನು ಪಡೆದ ನಂತರವೇ ಮುಂದುವರಿಯಬಹುದು” ಎಂದು ಪಿಸಿಬಿ ಅಧಿಕಾರಿ ಹೇಳಿದ್ದರು.
ಇದನ್ನೂ ಓದಿ: High BP: ಅಧಿಕ ರಕ್ತದೊತ್ತಡ ಸಮಸ್ಯೆ ನಿವಾರಣೆಗೆ ಆಹಾರದಲ್ಲಿರಲಿ ಬಾಳೆಕಾಯಿ!
ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ ಪಂದ್ಯ:
ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ನಡುವಿನ ಬಹುಚರ್ಚಿತ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್ ನಲ್ಲಿ ನಡೆಯಲಿದೆ. ಪಾಕಿಸ್ತಾನ ಕೊನೆಯದಾಗಿ 2016ರ ಟಿ20 ವಿಶ್ವಕಪ್ ನಲ್ಲಿ ಭಾರತದಲ್ಲಿ ಆಡಿತ್ತು. ಉಭಯ ದೇಶಗಳ ನಡುವಿನ ಪರಸ್ಪರ ಸಂಬಂಧದಲ್ಲಿನ ಉದ್ವಿಗ್ನತೆಯಿಂದಾಗಿ, ಎರಡೂ ತಂಡಗಳು ಐಸಿಸಿ ಟೂರ್ನಿಗಳು ಅಥವಾ ಏಷ್ಯಾ ಕಪ್‌ನಲ್ಲಿ ಮಾತ್ರ ಪರಸ್ಪರ ಆಡುತ್ತವೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.