ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ 4ನೇ ಮತ್ತು ಅಂತಿಮ ಟೆಸ್ ಪಂದ್ಯವು ಮಾರ್ಚ್ 9ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು 2-2ರಿಂದ ಸಮಬಲ ಮಾಡುವ ತವಕದಲ್ಲಿದೆ. ಈ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದರ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪ್ರವೇಶಿಸಲು ಟೀಂ ಇಂಡಿಯಾ ಸಜ್ಜಾಗಿದೆ.
4ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬೀಳುತ್ತಿದೆ. ಅಂತಿಮ ಟೆಸ್ಟ್‌ನಲ್ಲಿಯೂ ಸಹ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡದ ನಾಯಕರಾಗಲಿದ್ದಾರೆ. ಪ್ಯಾಟ್ ಕಮ್ಮಿನ್ಸ್ ತಮ್ಮ ತಾಯಿಯ ಅನಾರೋಗ್ಯದ ಕಾರಣ ಆಸ್ಟ್ರೇಲಿಯಾದಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಕೊನೆಯ ಟೆಸ್ಟ್‍ಗೆ ನಾಯಕರಾಗಲಿದ್ದಾರೆ.
ಇದನ್ನೂ ಓದಿ: IND vs PAK: ಭಾರತಕ್ಕೆ ಮತ್ತೆ ಪಾಕಿಸ್ತಾನ ಎಂಟ್ರಿ! ಮಹಾ ಸುಳಿವು ನೀಡಿದ ಪಾಕ್ ನಾಯಕ ಬಾಬರ್ ಅಜಂ
ಟೆಸ್ಟ್ ಪಂದ್ಯಕ್ಕೂ ಮೊದಲೇ ಬಿಗ್ ಅಪ್ಡೇಟ್!
ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಇಂದೋರ್ ಟೆಸ್ಟ್‌ನಲ್ಲೂ ತಂಡದ ಜವಾಬ್ದಾರಿ ವಹಿಸಿಕೊಂಡಿದ್ದರು. ದೆಹಲಿ ಟೆಸ್ಟ್ ಮುಗಿದ ನಂತರ ಪ್ಯಾಟ್ ಕಮ್ಮಿನ್ಸ್ ತಮ್ಮ ತಾಯಿಯ ಅನಾರೋಗ್ಯದ ಕಾರಣ ತವರಿಗೆ ತೆರಳಿದ್ದರು. ಪ್ಯಾಟ್ ಕಮ್ಮಿನ್ಸ್ ಇನ್ನೂ ಸಿಡ್ನಿಯಲ್ಲಿದ್ದಾರೆಂದು ವರದಿಯಾಗಿದೆ. ಕೊನೆಯ ಟೆಸ್ಟ್ ಬಳಿಕ 3 ಏಕದಿನ ಪಂದ್ಯಗಳು ನಡೆಯಲಿದ್ದು, ನಂತರ ಕಮಿನ್ಸ್ ಆಡುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಸ್ಮಿತ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಇಂದೋರ್ ಟೆಸ್ಟ್ ಅನ್ನು 9 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯಲು ಕೊನೆಯ ಟೆಸ್ಟ್‌ನಲ್ಲಿ ಜಯ ಗಳಿಸಬೇಕಾದ ಒತ್ತಡದಲ್ಲಿದೆ. ಜೂನ್‌ನಲ್ಲಿ ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಆಸ್ಟ್ರೇಲಿಯಾ ಅರ್ಹತೆ ಪಡೆದಿದೆ.
ಮಾರ್ಚ್ 17ರಿಂದ ಪ್ರಾರಂಭವಾಗುವ ODI ಸರಣಿಯಲ್ಲಿ ಗಾಯಗೊಂಡಿರುವ ಝೈ ರಿಚರ್ಡ್ಸನ್ ಬದಲಿಗೆ ನಾಥನ್ ಎಲ್ಲಿಸ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಬಾರ್ಡರ್- -ಗವಾಸ್ಕರ್ ಸರಣಿ ಗೆಲ್ಲಲು ಟೀಂ ಇಂಡಿಯಾ ಅಹಮದಾಬಾದ್‌ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯ ಗೆಲ್ಲಬೇಕಿದೆ. ಟೀಂ ಇಂಡಿಯಾ ಈ ಪಂದ್ಯ ಗೆದ್ದರೆ ತವರಿನಲ್ಲಿ ಸತತ 16ನೇ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (WTC) ಫೈನಲ್‌ಗೆ ಭಾರತ ತಂಡ ಅರ್ಹತೆ ಪಡೆಯಲಿದೆ.
ಇದನ್ನೂ ಓದಿ: “AB de Villiers ಶ್ರೇಷ್ಠ ಆಟಗಾರನಲ್ಲ, ಚಿನ್ನಸ್ವಾಮಿಯಲ್ಲಿ ಯಾರು ಬೇಕಾದ್ರೂ ರನ್ ಗಳಿಸಬಹುದು…!” ‘ಗಂಭೀರ’ ಹೇಳಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.