ಐಪಿಎಲ್‌ನ ಮೊದಲ ಓವರ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳು: ನಂ.1 ಸ್ಥಾನದಲ್ಲಿ ಯಾರು ಇದ್ದಾರೆ ಗೊತ್ತಾ?

Written by - Puttaraj K Alur | Last Updated : Apr 1, 2025, 10:18 PM IST
  • ಐಪಿಎಲ್ ಇತಿಹಾಸದಲ್ಲಿ ಮೊದಲ ಓವರ್‌ನಲ್ಲಿ 30 ವಿಕೆಟ್ ಪಡೆದ ಮೊದಲ ಬೌಲರ್ ಟ್ರೆಂಟ್ ಬೌಲ್ಟ್
  • ಟ್ರೆಂಟ್ ಬೌಲ್ಟ್ 96 ಪಂದ್ಯಗಳಲ್ಲಿ 30 ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ
  • ಭುವನೇಶ್ವರ್ ಕುಮಾರ್ 126 ಪಂದ್ಯಗಳಲ್ಲಿ 27 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ
ಐಪಿಎಲ್‌ನ ಮೊದಲ ಓವರ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳು: ನಂ.1 ಸ್ಥಾನದಲ್ಲಿ ಯಾರು ಇದ್ದಾರೆ ಗೊತ್ತಾ?

ಐಪಿಎಲ್ 2025ರ 12ನೇ ಪಂದ್ಯವು ಮಾರ್ಚ್ 31ರಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಿತು. ಉಭಯ ತಂಡಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಸಮಯದಲ್ಲಿ ಮುಂಬೈನ ಎಡಗೈ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನು ನಿರ್ಮಿಸಿದರು. ಈ ಪಂದ್ಯದ ಮೊದಲ ಓವರ್ ಬೌಲ್ಟ್ ಬೌಲಿಂಗ್ ಮಾಡುತ್ತಿದ್ದರು. ಆ ಓವರ್‌ನ ನಾಲ್ಕನೇ ಎಸೆತದಲ್ಲಿ ಅವರು ಸುನಿಲ್ ನರೈನ್‌ರನ್ನು ಬೌಲ್ಡ್ ಮಾಡಿದರು. ನರೈನ್ ವಿಕೆಟ್ ಪಡೆಯುವ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ ಮೊದಲ ಓವರ್‌ನಲ್ಲಿ 30 ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡರು. ಇಂದು ನಾವು ಐಪಿಎಲ್‌ನಲ್ಲಿ ಮೊದಲ ಓವರ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಆ 5 ಬೌಲರ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ...

Add Zee News as a Preferred Source

ಐಪಿಎಲ್‌ನ ಮೊದಲ ಓವರ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಟ್ರೆಂಟ್ ಬೌಲ್ಟ್ ನಂಬರ್ 1 ಸ್ಥಾನದಲ್ಲಿದ್ದಾರೆ. ಬೌಲ್ಟ್ 96 ಪಂದ್ಯಗಳಲ್ಲಿ 30 ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಭುವಿ ಐಪಿಎಲ್ 2025ರಲ್ಲಿ ಆರ್‌ಸಿಬಿ ತಂಡದ ಭಾಗವಾಗಿದ್ದಾರೆ. ಭುವನೇಶ್ವರ್ ಕುಮಾರ್ 126 ಪಂದ್ಯಗಳಲ್ಲಿ 27 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಇದೇ ಕೊನೆ ಪಂದ್ಯ... "ಇದು ಅದ್ಭುತ ಭಾವನೆ" ಎನ್ನುತ್ತಾ ನಿವೃತ್ತಿ ಘೋಷಿಸುವ ದಿನಾಂಕ ಬಹಿರಂಗಪಡಿಸಿದ ವಿರಾಟ್‌ ಕೊಹ್ಲಿ

ಈ ಪಟ್ಟಿಯಲ್ಲಿ ಮಾಜಿ ವೇಗಿ ಪ್ರವೀಣ್ ಕುಮಾರ್ ಹೆಸರು ಮೂರನೇ ಸ್ಥಾನದಲ್ಲಿದೆ. ಈ ಆಟಗಾರನ ಅತ್ಯಂತ ವಿಶೇಷ ವಿಷಯವೆಂದರೆ ಹೆಚ್ಚಿನ ಸಮಯ ಅವರು ತಮ್ಮ ತಂಡಕ್ಕೆ ಮೊದಲ ಓವರ್‌ನಲ್ಲಿಯೇ ಯಶಸ್ಸನ್ನು ನೀಡುತ್ತಿದ್ದರು. ಪ್ರವೀಣ್ 89 ಪಂದ್ಯಗಳಲ್ಲಿ 15 ವಿಕೆಟ್‌ಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿರುವ ಮುಂದಿನ ಹೆಸರು ಸಂದೀಪ್ ಶರ್ಮಾ. ಸಂದೀಪ್ ಈ ಋತುವಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಅವರು ಐಪಿಎಲ್‌ನಲ್ಲಿ 78 ಪಂದ್ಯಗಳಲ್ಲಿ 13 ಬಾರಿ ಮೊದಲ ಓವರ್‌ನಲ್ಲಿ ವಿಕೆಟ್ ಪಡೆದಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಪಟ್ಟಿಯಲ್ಲಿರುವ ಕೊನೆಯ ಹೆಸರು ದೀಪಕ್ ಚಹಾರ್. ಚಾಹರ್ ಐಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ. ಚಾಹರ್ 77 ಪಂದ್ಯಗಳಲ್ಲಿ 13 ಬಾರಿ ಮೊದಲ ಓವರ್‌ನಲ್ಲಿ ವಿಕೆಟ್ ಪಡೆದಿದ್ದಾರೆ. ಅವರು ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಕಾವ್ಯ ಮಾರನ್‌ ಅಲ್ಲ... IPL ನಲ್ಲಿ ಸಂಚಲನ ಸೃಷ್ಟಿಸಿದ ಈ ಮಿಸ್ಟ್ರಿ ಗರ್ಲ್‌ ಯಾರು ಗೊತ್ತಾ... ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಆದವರು ಇವ್ರೇ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News