ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದಿದ್ದರೆ, ದ್ವಿಗೇಶ್ ಇದೀಗ ಸ್ಥಳೀಯ ಟಿ-20 ಪಂದ್ಯದಲ್ಲಿ ಐದು ವಿಕೆಟ್ಗಳನ್ನ ಪಡೆದ ಸಾಧನೆ ಮಾಡಿದ್ದಾರೆ.

Bowling Sensation Digvesh Rathi: ಪ್ರಸಕ್ತ ಸಾಲಿನ ಐಪಿಎಲ್ 2025 ಟೂರ್ನಿಯಲ್ಲಿ ತನ್ನ ವಿಶೇಷ ಸಂಭ್ರಮಾಚರಣೆಯಿಂದಲೇ ಗಮನ ಸೆಳೆದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ದಿಗ್ವೇಶ್ ರಾಥಿ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಐಪಿಎಲ್ ಹರಾಜಿನಲ್ಲಿ ಗಳಿಸಿದ ಹಣಕ್ಕಿಂತಲೂ ತನ್ನ ನೋಟ್ಬುಕ್ ಸಂಭ್ರಮಾಚರಣೆಗೆ ಹೆಚ್ಚಿನ ದಂಡ ಪಾವತಿಸಿದ್ದ. ಪದೇ ಪದೇ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಈ ಆಟಗಾರನಿಗೆ ದಂಡಗಳ ಮೇಲೆ ದಂಡ ವಿಧಿಸಲಾಗಿತ್ತು. ತನ್ನ ವಿಚಿತ್ರ ವರ್ತನೆಯಿಂದಲೇ ಮೈದಾನದಲ್ಲಿ ಎದುರಾಳಿ ತಂಡದ ಆಟಗಾರರನ್ನ ಕೆಣಕುತ್ತಿದ್ದ ದಿಗ್ವೇಶ್ಗೆ ಒಂದು ಪಂದ್ಯದ ನಿಷೇಧವನ್ನು ಸಹ ವಿಧಿಸಲಾಗಿತ್ತು.
ಐಪಿಎಲ್ನ 18ನೇ ಋತುವಿನಲ್ಲಿ ಸಿಗ್ನೇಚರ್ ಸ್ಟಾರ್ ಎಂದೇ ಖ್ಯಾತಿಯಾದ ದಿಗ್ವೇಶ್ ತನ್ನ ಅದ್ಭುತ ಬೌಲಿಂಗ್ನಿಂದ ಗಮನ ಸೆಳೆದಿದ್ದ. ಸನ್ರೈಸರ್ಸ್ ಹೈದರಾಬಾದ್ನ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಜೊತೆಗೆ ಮೈದಾನದಲ್ಲಿಯೇ ಜಗಳವಾಡಿದ್ದ ಈ ಆಟಗಾರ ಐಪಿಎಲ್ನ 13 ಪಂದ್ಯಗಳಲ್ಲಿ 14 ವಿಕೆಟ್ಗಳನ್ನ ಪಡೆಯುವ ಮೂಲಕ ತನ್ನ ಪಾದಾರ್ಪಣೆಯ ಟೂರ್ನಿಯಲ್ಲಿಯೇ ವಿಶೇಷ ಸಾಧನೆ ಮಾಡಿದ್ದಾನೆ. ಇದೀಗ ಈ ಬೌಲರ್ ಸ್ಥಳೀಯ ಟಿ20 ಪಂದ್ಯದಲ್ಲಿ ತನ್ನ ಕೈಚಳಕದಿಂದ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾನೆ. ಈ ಯುವ ಸ್ಪಿನ್ನರ್ ಒಂದ ಓವರ್ನಲ್ಲಿ ಸತತ ಐದುವಿಕೆಟ್ಗಳನ್ನು ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಕೂಡ ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ದಿಗ್ವೇಶ್ ರಾಥಿ ಕೇವಲ 5 ಎಸೆತಗಳಲ್ಲಿ ಅರ್ಧ ಎದುರಾಳಿ ತಂಡವನ್ನೇ ಪೆವಿಲಿಯನ್ಗೆ ಕಳುಹಿಸುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ.ದಿಗ್ವೇಶ್ರ ಗೂಗ್ಲಿ ಫ್ಲಿಪ್ಪರ್ ಎಸೆತಗಳನ್ನ ಧೈರ್ಯವಾಗಿ ಎದುರಿಸಲು ಬ್ಯಾಟ್ಸ್ಮನ್ಗಳಿಗೆ ಸಾಧ್ಯವಾಗಲಿಲ್ಲ. ಇನ್ನಿಂಗ್ಸ್ನ 15ನೇ ಓವರ್ ಎಸೆದ ದಿಗ್ವೇಶ್ ಸತತ ಐದು ಎಸೆತಗಳಲ್ಲಿ ಐದು ವಿಕೆಟ್ಗಳನ್ನು ಕಬಳಿಸಿದರು. ಇದರ ಇನ್ನೊಂದು ವಿಶೇಷವೆಂದರೆ .. ಆ ಐದು ವಿಕೆಟ್ಗಳಲ್ಲಿ ನಾಲ್ಕು ವಿಕೆಟ್ಗಳು ಕ್ಲೀನ್ ಬೌಲ್ಡ್ ಆಗಿದ್ದು, ಒಂದು LBW ಆಯಿತು. ಎದುರಾಳಿ ತಂಡಕ್ಕೆ ಗೆಲ್ಲಲು 6 ಓವರ್ಗಳಲ್ಲಿ 113 ರನ್ಗಳು ಬೇಕಾಗಿದ್ದ ಕಠಿಣ ಪರಿಸ್ಥಿತಿಯಲ್ಲಿ ಬೌಲಿಂಗ್ ಮಾಡಲು ಬಂದ ದಿಗ್ವೇಶ್ ಎದುರಾಳಿ ತಂಡಕ್ಕೆ ದೊಡ್ಡ ಆಘಾತವನ್ನ ನೀಡಿದರು. ಒಟ್ಟಾರೆ ಈ ಪಂದ್ಯದಲ್ಲಿ ದಿಗ್ವೇಶ್ 7 ವಿಕೆಟ್ಗಳನ್ನು ಕಬಳಿಸುವ ಮೂಲಕ ಮಿಂಚಿದರು.
ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದಿದ್ದರೆ, ದ್ವಿಗೇಶ್ ಇದೀಗ ಸ್ಥಳೀಯ ಟಿ-20 ಪಂದ್ಯದಲ್ಲಿ ಐದು ವಿಕೆಟ್ಗಳನ್ನ ಪಡೆದ ಸಾಧನೆ ಮಾಡಿದ್ದಾರೆ. ಒಂದೇ ಓವರ್ನಲ್ಲಿ ದಿಗ್ವೇಶ್ ಐದು ವಿಕೆಟ್ ಪಡೆದಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Stumbled upon this clip of Digvesh Rathi taking 5 in 5 in a local T20 game. Just a glimpse of the talent that made him a breakout star for @LucknowIPL in IPL 2025. pic.twitter.com/i8739cjxpk
— Dr. Sanjiv Goenka (@DrSanjivGoenka) June 16, 2025
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ