Team India probable playing XI: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡುವುದು ನಾಯಕ ರೋಹಿತ್ ಶರ್ಮಾಗೆ ಸುಲಭದ ಮಾತಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಟೆಸ್ಟ್ ತಂಡದಲ್ಲಿ ಹಲವು ಯುವ ಕ್ರಿಕೆಟಿಗರಿಗೆ ಆಯ್ಕೆದಾರರು ಅವಕಾಶ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 20 ವರ್ಷಗಳ ಬಳಿಕ ಈ ರಾಶಿಗೆ ಕೋಟ್ಯಾಧಿಪತಿ ಯೋಗ: ಉದ್ಯೋಗಿಗಳಿಗೆ ಬಡ್ತಿ- ಹೆಜ್ಜೆಹೆಜ್ಜೆಗೂ ಧನಲಕ್ಷ್ಮೀ ಜೊತೆ ನಿಲ್ಲುವಳು!


ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಜುಲೈ 12 ರಿಂದ ಡೊಮಿನಿಕಾದಲ್ಲಿ ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ನಡೆಯಲಿದೆ. ಇನ್ನು ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೇಗಿದೆ ಎಂದು ನೋಡೋಣ.


ಆರಂಭಿಕರು:


ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಬಹುದು. ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ತಮ್ಮ ವೇಗದ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾಕ್ಕೆ ಆಕ್ರಮಣಕಾರಿ ಆರಂಭವನ್ನು ನೀಡಬಲ್ಲರು. ಒಂದು ಹೀಗಾದರೆ, ರಿತುರಾಜ್ ಗಾಯಕ್ವಾಡ್ ಪ್ಲೇಯಿಂಗ್ XI ನಿಂದ ಹೊರಗುಳಿಯಬೇಕಾಗುತ್ತದೆ.


ಮಧ್ಯಮ ಕ್ರಮಾಂಕ:


ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿದ್ದರೆ, ಉಪನಾಯಕ ಅಜಿಂಕ್ಯ ರಹಾನೆ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.


ವಿಕೆಟ್ ಕೀಪರ್:


ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 6ನೇ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ಬ್ಯಾಟಿಂಗ್‌ ನಲ್ಲಿ ಸೋಲು ಅನುಭವಿಸುತ್ತಿರುವ ಕೆಎಸ್ ಭರತ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಿಂದ ಕೈಬಿಡಲಾಗಿದೆ. ಕೆಎಸ್ ಭರತ್ ಅವರ ವಿಕೆಟ್ ಕೀಪಿಂಗ್ ಕೂಡ ವಿಶೇಷವೇನಲ್ಲ. ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ 7 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹೊರಡಲಿದ್ದಾರೆ. ಜಡೇಜಾ ಬಾಲ್ ಮತ್ತು ಬ್ಯಾಟ್‌’ನಿಂದ ಟೀಮ್ ಇಂಡಿಯಾಗೆ ಶಕ್ತಿ ನೀಡುವ ಸಾಮಾರ್ಥ್ಯ ಹೊಂದಿದ್ದಾರೆ.  


ಸ್ಪಿನ್ನರ್:


ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಪಡೆದಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಮಾರಕ ಸ್ಪಿನ್ ಬೌಲಿಂಗ್ ಮತ್ತು ಸ್ಫೋಟಕ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿದ್ದಾರೆ. ಅಕ್ಷರ್ ಪಟೇಲ್ ಪ್ಲೇಯಿಂಗ್ XI ನಿಂದ ಹೊರಗುಳಿಯಬೇಕಾಗುತ್ತದೆ.


ವೇಗಿಗಳು:


ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಜಯದೇವ್ ಉನದ್ಕತ್ ವೇಗದ ಬೌಲರ್‌ ಗಳಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಲಿದ್ದಾರೆ. ಮುಖೇಶ್ ಕುಮಾರ್ ಮತ್ತು ನವದೀಪ್ ಸೈನಿ ಪ್ಲೇಯಿಂಗ್ XI ನಿಂದ ಹೊರಗುಳಿಯಬೇಕಾಗಬಹುದು.


ಇದನ್ನೂ ಓದಿ: ಇನ್ನೇಕೆ 7 ಸೀಟರ್… ಬಂದೇಬಿಡ್ತು 10 ಸೀಟರ್ ಕಾರು: ಹಿಂದೆಂದೂ ಕಂಡಿರದ ಅದ್ಭುತ ಫೀಚರ್: ಬೆಲೆಯೂ ಭಾರೀ ಅಗ್ಗ!


ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ 11:


ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಜಯದೇವ್ ಉನದ್ಕತ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.