Former cricketer Yuvraj Singh: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ಮಧ್ಯಂತರ ಜಾಮೀನು

ಜನಾಂಗೀಯ ನಿಂದನೆ ಆರೋಪದ ಮೇಲೆ ಬಂಧಿಸಲ್ಪಟ್ಟ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಕೆಲವೇ ಗಂಟೆಗಳಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Written by - Yashaswini V | Last Updated : Oct 18, 2021, 12:59 PM IST
  • ಕಳೆದ ವರ್ಷ ಇನ್‌ಸ್ಟಾಗ್ರಾಮ್ ಚಾಟ್‌ನಲ್ಲಿ ಯುವರಾಜ್ ಸಿಂಗ್ ಇನ್ನೊಬ್ಬ ಕ್ರಿಕೆಟಿಗನ ವಿರುದ್ಧ ಜಾತಿವಾದಿ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ
  • ಜಾತಿ ನಿಂದನೆ ಆಧಾರದ ಮೇಲೆ ಹನ್ಸಿ ಮೂಲದ ನಿವಾಸಿ ರಜತ್ ಕಲ್ಸನ್, ಯುವರಾಜ್ ಸಿಂಗ್ ವಿರುದ್ಧ ಐಪಿಸಿ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು
  • ಈ ಹಿನ್ನಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹೈಕೋರ್ಟ್ ಆದೇಶಕ್ಕೆ ಅನುಸಾರವಾಗಿ ಜಾತಿವಾದಿ ಹೇಳಿಕೆ ಆರೋಪದಲ್ಲಿ ಬಂಧಿಸಲಾಗಿತ್ತು
Former cricketer Yuvraj Singh: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ಮಧ್ಯಂತರ ಜಾಮೀನು title=
Former cricketer Yuvraj Singh released on interim bail

ಚಂಡೀಗಢ: ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ವಿರುದ್ಧ ಇನ್‌ಸ್ಟಾಗ್ರಾಮ್ ಲೈವ್ ವೀಡಿಯೊದಲ್ಲಿ ಜಾತಿವಾದಿ ನಿಂದನೆಯನ್ನು ಬಳಸಿದ್ದಾರೆ ಎಂಬ ದೂರಿನ ತನಿಖೆಯ ಭಾಗವಾಗಿ ಶನಿವಾರ ಬಂಧನಕ್ಕೊಳಗಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Former cricketer Yuvraj Singh) ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾತಿ ನಿಂದನೆ ಆಧಾರದ ಮೇಲೆ ಹನ್ಸಿ ಮೂಲದ ನಿವಾಸಿ ರಜತ್ ಕಲ್ಸನ್, ಯುವರಾಜ್ ಸಿಂಗ್ (Yuvaraj Singh) ವಿರುದ್ಧ ಐಪಿಸಿ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹೈಕೋರ್ಟ್ ಆದೇಶಕ್ಕೆ ಅನುಸಾರವಾಗಿ ಜಾತಿವಾದಿ ಹೇಳಿಕೆ ಆರೋಪದಲ್ಲಿ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರ್ಯಾಣ ಪೊಲೀಸರು ಭಾನುವಾರ ಹೇಳಿದ್ದಾರೆ.

"ನ್ಯಾಯಾಲಯದ ಆದೇಶದಂತೆ, ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು" ಎಂದು ಹರಿಯಾಣದ ಹನ್ಸಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ- ಜಾತಿ ನಿಂದನೆ ಆರೋಪದ ಹಿನ್ನಲೆಯಲ್ಲಿ ಕ್ರಿಕೆಟರ್ ಯುವರಾಜ್ ಸಿಂಗ್ ಬಂಧನ

ಏನಿದು ಪ್ರಕರಣ?
ಕಳೆದ ಜೂನ್ 2020 ರ ಇನ್‌ಸ್ಟಾಗ್ರಾಮ್ (Instagram) ವೀಡಿಯೊದಲ್ಲಿ, ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರೋಹಿತ್ ಶರ್ಮಾ ಅವರೊಂದಿಗಿನ ಇನ್‌ಸ್ಟಾಗ್ರಾಮ್ ಲೈವ್ ವೀಡಿಯೋದಲ್ಲಿ ಮಾತನಾಡಿದ್ದರು. ಇದರ ನಂತರ ಜಾತಿಯ ಬಗ್ಗೆ ಅಪಪ್ರಚಾರದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಗಾಗಿತ್ತು. ಇದರ ಬೆನ್ನಲ್ಲೇ, ಯುವರಾಜ್ ಸಿಂಗ್ ಕಳೆದ ವರ್ಷ ಸೋಶಿಯಲ್ ಮಿಡಿಯಾ (Social Media) ಮೂಲಕ ಸಾರ್ವಜನಿಕ ಕ್ಷಮೆ ಕೋರಿದ್ದರು. ನಂತರ ನಾನು ನನ್ನ ಸ್ನೇಹಿತರೊಂದಿಗೆ ಮಾತನಾಡುವಾಗ, ನಾನು ಉದ್ದೇಶಪೂರ್ವಕವಾಗಿ ಯಾರ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ರೀತಿ ಮಾತನಾಡಿಲ್ಲ, ಆದರೆ ಇದನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಈ ಹೇಳಿಕೆಗಳಿಗೆ ವಿಷಾದವನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅವರು ಹೇಳಿದ್ದರು. 

ಏತನ್ಮಧ್ಯೆ, ಈ ಸಂಬಂಧ ದಲಿತ ಸಂಘಟನೆಯ ಸದಸ್ಯರು ನೀಡಿದ ದೂರಿನ ಮೇರೆಗೆ ಯುವರಾಜ್ ಸಿಂಗ್ ವಿರುದ್ಧ ಚಿತ್ರಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವರಾಜ್ ಸಿಂಗ್ ಅವರನ್ನು ಬಂಧಿಸಿ ಸುಮಾರು ಮೂರು ಗಂಟೆಗಳ ವಿಚಾರಣೆಯ ನಂತರ,  ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಯುವರಾಜ್ ಸಿಂಗ್ ಅವರನ್ನು ಸೆಕ್ಷನ್ 153 ಎ  (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೂರ್ವಾಗ್ರಹದ ಕೃತ್ಯಗಳನ್ನು ಮಾಡುವುದು) ಮತ್ತು 153 ಬಿ (ಇಂಪ್ಯೂಟೇಷನ್ಸ್, ಪ್ರತಿಪಾದನೆಗಳು ಪೂರ್ವಾಗ್ರಹದ ಅಡಿಯಲ್ಲಿ ಯುವರಾಜ್ ಅವರನ್ನು ಬಂಧಿಸಲಾಗಿದೆ ಎಂದು ಉಲ್ಲೇಖಿಸಬಹುದು. ರಾಷ್ಟ್ರೀಯ ಏಕೀಕರಣಕ್ಕೆ) ಐಪಿಸಿ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ತಡೆಗಟ್ಟುವಿಕೆ ಮತ್ತು ದೌರ್ಜನ್ಯ) ಕಾಯ್ದೆಯ ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆಯ ಸಮಯದಲ್ಲಿ ತಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಮತ್ತು ಕ್ಷಮೆ ಕೋರುವುದಾಗಿ ಯುವರಾಜ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ- T20 World Cup 2021: ಬಾಂಗ್ಲಾದೇಶದ ವಿರುದ್ಧ ಸ್ಕಾಟ್ಲೆಂಡ್ ಗೆ 6 ರನ್ ಗಳ ರೋಚಕ ಗೆಲುವು

ಅದರಂತೆ ಅವರು ಈ ಪ್ರಕರಣದಲ್ಲಿ ಈಗಾಗಲೇ ಕ್ಷಮೆ ಕೇಳಿದ್ದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಪ್ರಕರಣದಲ್ಲಿ ನಿರಪರಾಧಿ ಎಂದು ಮನವಿ ಮಾಡುವಾಗ ಎಫ್ಐಆರ್ ರದ್ದುಗೊಳಿಸುವಂತೆ ಕ್ರಿಕೆಟಿಗ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News