IPL Match Fixing : IPL ನಲ್ಲಿ ಮತ್ತೆ ಸದ್ದು ಮಾಡುತ್ತಿದೆ ಮ್ಯಾಚ್ ಫಿಕ್ಸಿಂಗ್ : ಮೂವರು ಅರೆಸ್ಟ್!
ಇದೀಗ ಐಪಿಎಲ್ ಸೀಸನ್ 15ರ ಮಧ್ಯೆಯೇ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಮೂವರನ್ನು ಸಿಬಿಐ ಬಂಧಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
IPL Match Fixing : ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಐಪಿಎಲ್ (ಐಪಿಎಲ್) ಯಾವಾಗಲೂ ವಿವಾದಗಳಿಗೆ ಭಾರಿ ಹೆಸರುವಾಸಿಯಾಗಿದೆ. ಅದರಲ್ಲೂ ಐಪಿಎಲ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ಗೆ ಸಂಬಂಧಿಸಿದಂತೆ ಸದಾ ಚರ್ಚೆ ಆಗುತ್ತಲೇ ಇರುತ್ತದೆ. ಇದೀಗ ಐಪಿಎಲ್ ಸೀಸನ್ 15ರ ಮಧ್ಯೆಯೇ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಮೂವರನ್ನು ಸಿಬಿಐ ಬಂಧಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿರುವ ವ್ಯಕ್ತಿಗಳ ಜಾಲವು ಪಾಕಿಸ್ತಾನದಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಇಂಡಿಯನ್ ಪ್ರೀಮರ್ ಲೀಗ್ (ಐಪಿಎಲ್) ಪಂದ್ಯಗಳ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಸಿಬಿಐಗೆ ಮಾಹಿತಿ ಸಿಕ್ಕಿದೆ ಎಂದು ಎಫ್ಐಆರ್ ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : IPL 2022 : ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಸಿಎಸ್ಕೆ ಈ ಆಟಗಾರ
ಎಫ್‌ಐಆರ್‌ನಲ್ಲಿ ದೆಹಲಿಯ ರೋಹಿಣಿ ಮೂಲದ ದಿಲೀಪ್ ಕುಮಾರ್ ಮತ್ತು ಹೈದರಾಬಾದ್‌ನ ಗುರ್ರಂ ವಾಸು ಮತ್ತು ಗುರ್ರಂ ಸತೀಶ್ ಅವರನ್ನು ಆರೋಪಿಗಳೆಂದು ದಾಖಲಿಸಲಾಗಿದೆ. 2013 ರಿಂದ ಕಾರ್ಯನಿರ್ವಹಿಸುತ್ತಿರುವ ಈ ಜಾಲ ಸಾರ್ವಜನಿಕರನ್ನು ಬೆಟ್ಟಿಂಗ್‌ಗೆ ಪ್ರೇರೇಪಿಸುವ ಮೂಲಕ ವಂಚಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಆರೋಪಿಗಳು ನಕಲಿ ಗುರುತಿನ ದಾಖಲೆಗಳ ಮೂಲಕ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಮತ್ತು ಅಪರಿಚಿತ ಬ್ಯಾಂಕ್ ಅಧಿಕಾರಿಗಳೊಂದಿಗೆ ಶಾಮೀಲಾಗಿ ಬ್ಯಾಂಕ್ ಗ್ರಾಹಕರ ದಾಖಲೆಗಳನ್ನು ತಿಳಿದುಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.
"ಇಂತಹ ಬೆಟ್ಟಿಂಗ್ ಚಟುವಟಿಕೆಗಳ ಖಾತೆಯಲ್ಲಿ ಭಾರತದಲ್ಲಿ ಸಾರ್ವಜನಿಕರಿಂದ ಪಡೆದ ಹಣದ ಒಂದು ಭಾಗವನ್ನು ಹವಾಲಾ ವಹಿವಾಟುಗಳನ್ನು ಬಳಸಿಕೊಂಡು ವಿದೇಶದಲ್ಲಿರುವ ಅವರ ಸಹಚರರೊಂದಿಗೆ ಹಂಚಿಕೊಳ್ಳುತ್ತಿದ್ದರು" ಎಂದು ಎಫ್ಐಆರ್ ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : SRH vs KKR: ಇಂದು ಕೊಲ್ಕತ್ತಾಗೆ ಹೈದರಾಬಾದ್ ಸವಾಲು: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.