Champions Trophy 2025: ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ದೇಶಗಳಲ್ಲಿ ಕ್ರಿಕೆಟ್ ಆಡುವುದಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತದ ಎಲ್ಲಾ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಡಲಾಗುತ್ತದೆ. ಇನ್ನು ಪಾಕಿಸ್ತಾನ ತಂಡ ಕೂಡ 2027ರವರೆಗೆ ಯಾವುದೇ ಟೂರ್ನಿಗಾಗಿ ಭಾರತಕ್ಕೆ ಬರುವುದಿಲ್ಲ. ಇದರ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿಯೂ ನಡೆಯಲಿವೆ.
ಇದನ್ನೂ ಓದಿ: ನಿಮ್ಮ ಬಿಳಿ ಕೂದಲಿನಿಂದ ತ್ವರಿತ ಪರಿಹಾರಕ್ಕಾಗಿ ಬ್ಲಾಕ್ ಟೀ ಒಮ್ಮೆ ಟ್ರೈ ಮಾಡಿ
ಐಸಿಸಿಯ ಈ ನಿರ್ಧಾರದ ಬಗ್ಗೆ ಗುರುವಾರ ಮಾಹಿತಿ ಹೊರಬಿದ್ದಿದೆ ಬೆಳಕಿಗೆ ಬಂದಿದೆ. ಈ ಹಿಂದೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. 2025ರ ಮಹಿಳಾ ಏಕದಿನ ವಿಶ್ವಕಪ್ ಭಾರತದಲ್ಲಿ, 2026ರಲ್ಲಿ ಟಿ-20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.
ಈ ಹಿಂದೆ, ಐಸಿಸಿಯು 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ತಿಳಿಸಿದಾಗ, ಪಿಸಿಬಿ ತಂಡವನ್ನು ಭಾರತಕ್ಕೆ ಕಳುಹಿಸದಂತೆ ಐಸಿಸಿ ಮುಂದೆ ಬೇಡಿಕೆಯನ್ನು ಮುಂದಿಟ್ಟಿತ್ತು. ಅದನ್ನು ಈಗ ಒಪ್ಪಿಕೊಂಡಿದೆ.
ಪಾಕಿಸ್ತಾನದಲ್ಲಿ ಮಹಿಳಾ ವಿಶ್ವಕಪ್ 2028ರ ಪಂದ್ಯಗಳನ್ನು ಆಡಲಾಗುವುದು ಎಂದು ICC ಮಂಡಳಿಯು ದೃಢಪಡಿಸಿದೆ. ಈ ಟೂರ್ನಿಯಲ್ಲೂ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿವೆ.
ಎಲ್ಲಾ 15 ಸದಸ್ಯರು ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದ್ದಾರೆ. ಡಿಸೆಂಬರ್ 5 ರಂದು ಐಸಿಸಿಯ ಹೊಸ ಅಧ್ಯಕ್ಷ ಜಯ್ ಶಾ ಅವರ ಸಮ್ಮುಖದಲ್ಲಿ ಎಲ್ಲಾ ಮಂಡಳಿಯ ಸದಸ್ಯರ ಸಭೆ ನಡೆಯಿತು. ಶಾ ಇದೇ ತಿಂಗಳು ದುಬೈನ ಪ್ರಧಾನ ಕಚೇರಿಗೂ ಬಂದಿದ್ದರು. ಸಭೆಯಲ್ಲಿ, ಎಲ್ಲಾ 15 ಮಂಡಳಿಯ ಸದಸ್ಯರು ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದ್ದು, ಸಭೆಯಲ್ಲಿ ಈ ನಿರ್ಧಾರಕ್ಕೆ ಪಾಕಿಸ್ತಾನವೂ ವಿರೋಧ ವ್ಯಕ್ತಪಡಿಸಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.