India vs Sri Lanka ODI Series: T20 ಸರಣಿಯ ನಂತರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ODI ಸರಣಿಯನ್ನು ಗೆಲ್ಲುವತ್ತ ಕಣ್ಣಿಟ್ಟಿದೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಅನುಭವಿ ಆಟಗಾರರು ಟೀಂ ಇಂಡಿಯಾಕ್ಕೆ ಮರಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ಲೇಯಿಂಗ್ 11ನಲ್ಲಿ ದೊಡ್ಡ ಬದಲಾವಣೆಗಳಾಗಬಹುದು. ಶ್ರೀಲಂಕಾ ಸರಣಿಯಿಂದಲೇ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs SL: ಕೆಎಲ್ ರಾಹುಲ್ ಅಥವಾ ಇಶಾನ್ ಕಿಶನ್? ODI ಸರಣಿಯಲ್ಲಿ ವಿಕೆಟ್ ಕೀಪಿಂಗ್ ಮಾಡೋದು ಈ ಆಟಗಾರ


ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಇಶಾನ್ ಕಿಶನ್ ರೋಹಿತ್ ಶರ್ಮಾ ಜೊತೆ ಓಪನಿಂಗ್ ಮಾಡುವ ಅವಕಾಶ ಪಡೆಯಬಹುದು. ಇಶಾನ್ ಈಗಾಗಲೇ ರೋಹಿತ್ ಜೊತೆ ಓಪನಿಂಗ್ ಜವಾಬ್ದಾರಿ ನಿಭಾಯಿಸಿದ್ದಾರೆ. ಹೀಗಾದಲ್ಲಿ ಶುಭಮನ್ ಗಿಲ್ ಪಂದ್ಯವಾಡುವುದು ಸಂದೇಹ. ಇನ್ನೊಂದೆಡೆ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಇಳಿಯುವುದು ಖಚಿತವಾಗಿದೆ.


ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ನಾಯಕ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆಗಳನ್ನು ಮಾಡಬಹುದು. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್‌ಗೆ ಅವಕಾಶ ನೀಡಬಹುದು. ಕೆಲ ದಿನಗಳಿಂದ ಸೂರ್ಯ ಬ್ಯಾಟಿಂಗ್ ಅಬ್ಬರ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಇನ್ನು ಶ್ರೇಯಸ್ ಅಯ್ಯರ್ ಐದನೇ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ವಿಕೆಟ್ ಕೀಪರ್ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಗೆ ವಹಿಸಬಹುದು. ರಾಹುಲ್ ಈ ಹಿಂದೆಯೂ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದಾರೆ.


ಅನುಭವಿ ಆಟಗಾರರ ಮರಳುವಿಕೆ:


ವೇಗದ ಬೌಲಿಂಗ್ ದಾಳಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಆಡಲಿದ್ದಾರೆ. ಅರ್ಷದೀಪ್ ಸಿಂಗ್ ಅವರನ್ನು ಮೂರನೇ ವೇಗದ ಬೌಲರ್ ಆಗಿ ಆಯ್ಕೆ ಮಾಡಬಹುದು. ಸ್ಪಿನ್ನರ್‌ಗಳ ಜವಾಬ್ದಾರಿಯನ್ನು ಯುಜುವೇಂದ್ರ ಚಹಾಲ್‌ಗೆ ವಹಿಸಬಹುದು. ಆಲ್ ರೌಂಡರ್ ಆಗಿ ಅಕ್ಷರ್ ಪಟೇಲ್ ಗೆ ಅವಕಾಶ ನೀಡಬಹುದು.


ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಭಾರತದ ಶ್ರೇಷ್ಠ ಆಟಗಾರರೆಂದು ಪರಿಗಣಿಸಲ್ಪಟ್ಟಿದ್ದಾರೆ. ಭಾರತ ತಂಡಕ್ಕೆ ಸ್ವಂತ ಬಲದಿಂದ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಆದರೆ ಕೆಲವು ಸಮಯದಿಂದ ಈ ಆಟಗಾರರು ದೊಡ್ಡ ಸಂದರ್ಭಗಳಲ್ಲಿ ವಿಫಲರಾಗುತ್ತಿರುವುದು ಕಂಡುಬಂದಿದೆ.


ಇದನ್ನೂ ಓದಿ: Team India Challenges: ‘ಮಿಷನ್ ವರ್ಲ್ಡ್ ಕಪ್’ ತಯಾರಿಯಲ್ಲಿರುವ ರೋಹಿತ್-ದ್ರಾವಿಡ್ ಮುಂದಿದೆ ಈ ದೊಡ್ಡ ಸವಾಲುಗಳು


ಮೊದಲ ODIಗೆ ಸಂಭಾವ್ಯ ಪ್ಲೇಯಿಂಗ್ XI:


ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.