WTC Final 2023 IND vs AUS: ಓವಲ್ ನಲ್ಲಿ ಸತತ ಎರಡನೇ ದಿನ ಭಾರತ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. ಟ್ರಾವಿಸ್ ಹೆಡ್ ಅವರ 163 ಮತ್ತು ಸ್ಟೀವ್ ಸ್ಮಿತ್ ಅವರ 121 ರನ್ ಗಳೊಂದಿಗೆ ಅಲೆಕ್ಸ್ ಕ್ಯಾರಿ ಅವರ 48 ರನ್ ಗಳಿಂದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 469 ರನ್ ಗಳಿಸಿತು, ಆದರೆ ಭಾರತ 38 ಓವರ್ ಗಳಲ್ಲಿ ಐದು ವಿಕೆಟ್ ಗೆ 151 ರನ್ ಗಳಿಸಿದೆ. ಎರಡನೇ ದಿನದ ಆಟದಲ್ಲಿ ಟೀಂ ಇಂಡಿಯಾದ ಆಟಗಾರನೊಬ್ಬ ಸಂಪೂರ್ಣ ವಿಫಲನಾಗಿದ್ದಾನೆ. ಈ ಆಟಗಾರನ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರು.
ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಬಳಿಕ ಮದುವೆಗೂ ಮೊದಲೇ “ತಂದೆಯಾಗುತ್ತಿದ್ದೇನೆ” ಎಂದು ಘೋಷಿಸಿದ ಕ್ರಿಕೆಟಿಗ!
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 (ಡಬ್ಲ್ಯುಟಿಸಿ ಫೈನಲ್ 2023) ಫೈನಲ್‌ನಲ್ಲಿ ಭಾರತದ ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರಿಂದ ಉತ್ತಮ ಆಟದ ನಿರೀಕ್ಷೆಯನ್ನು ಅಭಿಮಾನಿಗಳು ಮಾಡಿದ್ದರು. ಆದರೆ ಚೇತೇಶ್ವರ ಪೂಜಾರ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಸಂಪೂರ್ಣ ವಿಫಲರಾಗಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಕೇವಲ 25 ಎಸೆತಗಳನ್ನು ಎದುರಿಸಿ 14 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್ ನಲ್ಲಿ 2 ಬೌಂಡರಿಗಳನ್ನು ಬಾರಿಸಿದ್ದಾರೆ.
ಹಿರಿಯ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ ಟೀಂ ಇಂಡಿಯಾದಿಂದ ಇಂಗ್ಲೆಂಡ್ ಗೆ ಮೊದಲ ಬಾರಿಗೆ ಆಗಮಿಸಿದ್ದಾರೆ. ಸ್ವಲ್ಪ ಸಮಯದವರೆಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ನಲ್ಲಿ ಸಸೆಕ್ಸ್ ಗಾಗಿ ಆಡುತ್ತಿದ್ದರು. ಚೇತೇಶ್ವರ ಪೂಜಾರ ಕೌಂಟಿ ಕ್ರಿಕೆಟ್ ನಲ್ಲಿ ಹಲವು ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಹೀಗಿರುವಾಗ ಈ ಪಂದ್ಯದಲ್ಲಿ ಚೇತೇಶ್ವರ್ ಪೂಜಾರ ಟೀಂ ಇಂಡಿಯಾಗೆ ಬಿಗ್ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಅದು ವಿಫಲವಾಯಿತು.
ಇದನ್ನೂ ಓದಿ: ಹೆಸರಿಗೆ ದಿಗ್ಗಜರು… ಆದ್ರೆ ಈ ನಾಲ್ವರಿಂದ ಟೆಸ್ಟ್ ಇತಿಹಾಸದಲ್ಲೇ ಕಳಪೆ ದಾಖಲೆ ಬರೆಯಿತು Team India
ಆಸ್ಟ್ರೇಲಿಯಾ ಇನ್ನೂ 318 ರನ್ ಗಳಿಂದ ಟೀಂ ಇಂಡಿಯಾಕ್ಕಿಂತ ಮುನ್ನಡೆ ಸಾಧಿಸಿದೆ. ಇದುವರೆಗೆ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾದ ಎಲ್ಲಾ ಐವರು ಬೌಲರ್ ಗಳು ತಲಾ ಒಂದು ವಿಕೆಟ್ ಪಡೆದಿದ್ದಾರೆ. ಭಾರತದ ಅಗ್ರ ನಾಲ್ಕು ಬ್ಯಾಟ್ಸ್ ಮನ್‌ಗಳು 15 ರನ್ ಗಡಿ ದಾಟಲು ವಿಫಲರಾಗಿದ್ದಾರೆ. ಆದರೆ ಅಜಿಂಕ್ಯ ರಹಾನೆ ಮತ್ತು ಕೆಎಸ್ ಭರತ್ ಕ್ರಮವಾಗಿ 29 ಮತ್ತು 5 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ