ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಈ ದಾಂಡಿಗನೇ ಟಾಪ್ ಸ್ಕೋರರ್ : T20I ನಲ್ಲಿ ಹೀಗಿದೆ ಟೀಂ ಇಂಡಿಯಾ ರೆಕಾರ್ಡ್
India T20I Records in M Chinnaswamy Stadium : ಈ ಮೈದಾನದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ದಾಖಲೆ ಏನು? ಬೌಲರ್ ಅಥವಾ ಬ್ಯಾಟ್ಸ್‌ಮನ್, ಯಾರಿಗೆ ಪಿಚ್ ಸಹಾಯಕವಾಗಿದೆ? ಇಲ್ಲಿ ಹೆಚ್ಚು ರನ್ ಗಳಿಸಿದವರು ಯಾರು? ಈ ಎಲ್ಲಾ ಮಾಹಿತಿ ಇಲ್ಲಿದೆ.
India T20I Records in M Chinnaswamy Stadium : ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಅಫ್ಘಾನಿಸ್ತಾನದ ಹೆಡೆಮುರಿ ಕಟ್ಟಲು ಮುಂದಾಗಿದೆ ಭಾರತ. ಈ ಪಂದ್ಯ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಮೈದಾನ ಹೈ ಸ್ಕೋರಿಂಗ್ ಪಂದ್ಯಗಳಿಗೆ ಹೆಸರುವಾಸಿಯಾಗಿದೆ. ಈ ಮೈದಾನದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ದಾಖಲೆ ಏನು? ಬೌಲರ್ ಅಥವಾ ಬ್ಯಾಟ್ಸ್‌ಮನ್, ಯಾರಿಗೆ ಪಿಚ್ ಸಹಾಯಕವಾಗಿದೆ? ಇಲ್ಲಿ ಹೆಚ್ಚು ರನ್ ಗಳಿಸಿದವರು ಯಾರು? ಈ ಎಲ್ಲಾ ಮಾಹಿತಿ ಇಲ್ಲಿದೆ.
7 ಪಂದ್ಯಗಳನ್ನು ಆಡಿದ ಭಾರತ :
ಭಾರತ ಇದುವರೆಗೆ ಬೆಂಗಳೂರಿನಲ್ಲಿ 7 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಈ ಪಂದ್ಯಗಳಲ್ಲಿ ಭಾರತ 3ರಲ್ಲಿ ಗೆದ್ದಿದ್ದರೆ, 3ರಲ್ಲಿ ಸೋತಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿರಲಿಲ್ಲ. ಈ ಮೈದಾನದಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಪಂದ್ಯಗಳನ್ನು ಭಾರತ ಗೆದ್ದಿದೆ. ಆಸ್ಟ್ರೇಲಿಯಾ ಒಂದು ಪಂದ್ಯದಲ್ಲಿ ಸೋತಿದ್ದು, ಭಾರತ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧವೂ ಇಲ್ಲಿ ಸೋತಿದೆ. 2023ರಲ್ಲಿ ಭಾರತ ಈ ಮೈದಾನದಲ್ಲಿ ಆಸ್ಟ್ರೇಲಿಯಾವನ್ನು 6 ರನ್‌ಗಳಿಂದ ಸೋಲಿಸಿತ್ತು.
ಇದನ್ನೂ ಓದಿ : Rohit Sharma: ಕೇವಲ ಒಂದು ಗೆಲುವು… ಧೋನಿಯ ದಾಖಲೆ ಮುರಿದು ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ
ವಿರಾಟ್ ಕೊಹ್ಲಿಯೇ ಭಾರತದ ಟಾಪ್ ಸ್ಕೋರರ್ :
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿರುವ ಕೊಹ್ಲಿ 116 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ ಅಜೇಯ 72 ರನ್ ಆಗಿತ್ತು. ಭಾರತದ ಅಗ್ರ ಸ್ಕೋರರ್‌ಗಳ ಪೈಕಿ ಎರಡನೇ ಸ್ಥಾನದಲ್ಲಿದ್ದವರು ಭಾರತದ ಮಾಜಿ ನಾಯಕ ಮತ್ತು ಲೆಜೆಂಡರಿ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ. ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಈ ಮೈದಾನದಲ್ಲಿ ಅತಿ ಹೆಚ್ಚು ಟಿ20 ಅಂತಾರಾಷ್ಟ್ರೀಯ ರನ್ ಗಳಿಸಿದ ಬ್ಯಾಟ್ಸ್‌ಮನ್.ಮ್ಯಾಕ್ಸ್‌ವೆಲ್ 2 ಪಂದ್ಯಗಳಲ್ಲಿ 1 ಶತಕದೊಂದಿಗೆ 139 ರನ್ ಗಳಿಸಿದ್ದಾರೆ.
ಬೆಂಗಳೂರಿನ ಪಿಚ್ ಹೇಗಿದೆ?:
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬ್ಯಾಟ್ಸ್‌ಮನ್‌ಗಳಿಗೆ ಅತ್ಯುತ್ತಮವೆಂದು ಹೇಳಲಾಗಿದೆ. ಇದು ಫಾಸ್ಟ್ ಬೌಲರ್‌ಗಳಿಗೆ ನೆರವಾಗಲಿದೆ. ಸಣ್ಣ ಬೌಂಡರಿಯಿಂದಾಗಿ, ಈ ಮೈದಾನದಲ್ಲಿ ಬ್ಯಾಟ್ಸ್‌ಮನ್‌ಗಳು ಇಲ್ಲಿ ಬಿಗ್ ಹಿಟ್ ಗಳತ್ತ ಹೆಚ್ಚು ಗಮನ ಹರಿಸುತ್ತಾರೆ.
ಇದನ್ನೂ ಓದಿ : 16 ಸಿಕ್ಸರ್, 137 ರನ್… ಅಂದು RCB ಕೈಬಿಟ್ಟಿದ್ದ 24ರ ಹರೆಯದ ಈ ಬ್ಯಾಟ್ಸ್’ಮನ್ ಇಂದು ಟಿ20ಯಲ್ಲಿ ಅಬ್ಬರಿಸಿಯೇಬಿಟ್ಟ!
ಅತಿ ಹೆಚ್ಚು ಸಿಕ್ಸರ್‌ಗಳು ಕೂಡಾ ಕೊಹ್ಲಿ ಹೆಸರಿನಲ್ಲಿ :
ಈ ಮೈದಾನದಲ್ಲಿ ಭಾರತೀಯ ಆಟಗಾರರ ಪೈಕಿ ವಿರಾಟ್ ಕೊಹ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ್ದಾರೆ.ಕೊಹ್ಲಿ ಹೆಸರಿನಲ್ಲಿ 7 ಸಿಕ್ಸರ್‌ಗಳಿವೆ.ಈ ಮೈದಾನದಲ್ಲಿ ಟಿ20ಯಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. 2017ರಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 75 ರನ್‌ಗಳಿಂದ ಸೋಲಿಸಿದ್ದು ಈ ನೆಲದಲ್ಲಿ ತಂಡದ ಅತಿ ದೊಡ್ಡ ಗೆಲುವಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.