ನವದೆಹಲಿ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022ನೇ ಸಾಲಿನ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಯುವ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ ಭಾರತಕ್ಕೆ 3ನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: Commonwealth Games 2022: ಘಾನಾ ವಿರುದ್ಧ ಭಾರತದ ಹಾಕಿ ತಂಡಕ್ಕೆ 11-0 ಅಂತರದ ಗೆಲುವು 


ಪುರುಷರ 73 ಕೆಜಿ ವಿಭಾಗದ ಫೈನಲ್‌ನಲ್ಲಿ ಅಚಿಂತಾ ಶೆಯುಲಿ  313 ಕೆಜಿಯಷ್ಟು ಭಾರ ಎತ್ತುವ ಮೂಲಕ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಸಾಧನೆ ಮಾಡಿದರು.


CWG 2022: ದೇಶಕ್ಕೆ ಮತ್ತೊಂದು ಬಂಗಾರದ ಗರಿ: ಗಾಯವಿದ್ದರೂ ಚಿನ್ನ ಗೆದ್ದ ಜೆರೆಮಿ


ಭಾನುವಾರ ನಡೆದ ಈ ಪಂದ್ಯದಲ್ಲಿ ಅಚಿಂತಾ ಶೆಯುಲಿ ಮಹತ್ವದ ಸಾಧನೆ ಮಾಡುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಚಿನ್ನದ ಪದಕಕ್ಕೆ ಕೊರೊಳೊಡ್ಡಿದ ಅಚಿಂತಾ ಅವರಿಗೆ ಕೇವಲ 20 ವರ್ಷ. ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಇದು ಭಾರತಕ್ಕೆ ಬಂದ 6ನೇ ಪದಕ ಹಾಗೂ 3ನೇ ಚಿನ್ನದ ಪದಕವಾಗಿದೆ. 3 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಭಾರತ ಇದುವರೆಗೆ ಒಟ್ಟು 6 ಪದಕಗಳನ್ನು ತನ್ನದಾಗಿಸಿಕೊಂಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.