ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಎಲ್ಲಾ ಭಾರತೀಯ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭಾರತ ತಂಡದಲ್ಲಿ ಹಲವು ಸ್ಟಾರ್ ಆಟಗಾರರಿದ್ದಾರೆ. ರಿಷಭ್ ಪಂತ್ ಪ್ರಸ್ತುತ ಭಾರತಕ್ಕೆ ನಂಬರ್ ಒನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದಾರೆ, ಆದರೆ ಅವರು ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯುತ್ತಾರೆಯೇ ಎಂಬ ಅನುಮಾನ ಕಾಡುತ್ತಿದೆ. ಹೌದು ಇದಕ್ಕೆ ಕಾರಣ ದಿನೇಶ್ ಕಾರ್ತಿಕ್ ಅವರು ನೀಡುತ್ತಿರುವ ಕಠಿಣ ಪೈಪೋಟಿ. ಈಗ ಇಬ್ಬರೂ ಆಟಗಾರರ ಪೈಕಿ ಯಾರು ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬುದಕ್ಕೆ ರಿಷಬ್ ಪಂತ್ ಉತ್ತರ ನೀಡಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಯಾವಾಗ ಪ್ರಾರಂಭವಾಗುತ್ತೆ 5G? ಈ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ!
ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಮಾತನಾಡಿದ್ದು, 'ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ. ನಾವು ವೈಯಕ್ತಿಕವಾಗಿ ಯಾವಾಗಲೂ ನಮ್ಮ 100 ಪ್ರತಿಶತವನ್ನು ತಂಡಕ್ಕೆ ನೀಡಲು ಬಯಸುತ್ತೇವೆ. ಉಳಿದವು ಕೋಚ್ ಮತ್ತು ನಾಯಕನ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಹೇಳಿದ್ದಾರೆ. ಸದ್ಯ ಪಂತ್ ಕಳೆದ ಕೆಲವು ವರ್ಷಗಳಿಂದ ತಮ್ಮ ಬ್ಯಾಟಿಂಗ್ ಶೈಲಿಯಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದಾರೆ.
ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಅಪಾಯಕಾರಿ ಬ್ಯಾಟಿಂಗ್‌ನಲ್ಲಿ ಪರಿಣಿತ ಆಟಗಾರರು. ಈ ಇಬ್ಬರೂ ಆಟಗಾರರು ಲಯದಲ್ಲಿದ್ದರೆ ಕೆಲವೇ ಎಸೆತಗಳಲ್ಲಿ ಪಂದ್ಯದ ಹಾದಿಯೇ ಬದಲಾಗಬಹುದು. ಇಬ್ಬರೂ ಆಟಗಾರರು ಹಲವಾರು ಸಂದರ್ಭಗಳಲ್ಲಿ ಪ್ಲೇಯಿಂಗ್ XI ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾ ಪರ ಪಂತ್ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನು, ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾದ ಫಿನಿಶರ್ ಆಗಿ ಹೊರಹೊಮ್ಮಿದ್ದಾರೆ.
ಇದನ್ನೂ ಓದಿ: 6 ಗಂಟೆ ತಡವಾಗಿ ವಿಮಾನ ಹಾರಾಡಲು ಕಾರಣವಾಗಿದ್ದು ಜೋಡಿಯ ಮೊಬೈಲ್ ಚಾಟ್!
ಏಷ್ಯಾಕಪ್‌ನಲ್ಲಿ ಶಕ್ತಿ ಪ್ರದರ್ಶನ: ರಿಷಬ್ ಪಂತ್ ಭಾರತಕ್ಕಾಗಿ ಎಲ್ಲಾ ಮೂರು ಸ್ವರೂಪಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲದೆ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯ ನಂತರ ಅವರು ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ ದಿನೇಶ್ ಕಾರ್ತಿಕ್ ಐಪಿಎಲ್ 2022 ರಲ್ಲಿ ತಮ್ಮ ಆಟದ ಬಲದ ಮೇಲೆ ಮರಳಿದ್ದಾರೆ. ಟಿ20 ವಿಶ್ವಕಪ್‌ಗೆ ಟಿಕೆಟ್ ಪಡೆಯಬೇಕಾದರೆ ಏಷ್ಯಾಕಪ್‌ನಲ್ಲಿ ತಮ್ಮ ಶಕ್ತಿ ಪ್ರದರ್ಶನ ಮಾಡುವ ಅಗತ್ಯ ಇದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.