128 ವರ್ಷಗಳ ನಂತರ ಒಲಿಂಪಿಕ್ಸ್’ಗೆ ಕ್ರಿಕೆಟ್ ಸೇರ್ಪಡೆ! ಐಸಿಸಿಯ 2 ವರ್ಷಗಳ ಪರಿಶ್ರಮಕ್ಕೆ ಸಿಕ್ಕೇಬಿಡ್ತು ಫಲ

Cricket in Olympics: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಲಾಸ್ ಏಂಜಲೀಸ್ 2028 ಒಲಿಂಪಿಕ್ಸ್‌’ನ ಸಂಘಟಕರು ಆಟಗಳಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಶಿಫಾರಸು ಮಾಡುವುದರ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Written by - Bhavishya Shetty | Last Updated : Oct 10, 2023, 12:01 AM IST
    • 2028ರಲ್ಲಿ ಲಾಸ್ ಏಂಜಲೀಸ್’ನಲ್ಲಿ ನಡೆಯಲಿರುವ ಒಲಿಂಪಿಕ್ಸ್
    • ಒಲಿಂಪಿಕ್ಸ್’ನಲ್ಲಿ ಕ್ರಿಕೆಟ್ ಸೇರ್ಪಡೆಯಾಗುವುದು ಬಹುತೇಕ ಖಚಿತ
    • ಇದಕ್ಕೂ ಮೊದಲು 1900ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿತ್ತು
128 ವರ್ಷಗಳ ನಂತರ ಒಲಿಂಪಿಕ್ಸ್’ಗೆ ಕ್ರಿಕೆಟ್ ಸೇರ್ಪಡೆ! ಐಸಿಸಿಯ 2 ವರ್ಷಗಳ ಪರಿಶ್ರಮಕ್ಕೆ ಸಿಕ್ಕೇಬಿಡ್ತು ಫಲ title=
Cricket in Olympics

Cricket in Olympics: 2028ರಲ್ಲಿ ಲಾಸ್ ಏಂಜಲೀಸ್’ನಲ್ಲಿ ನಡೆಯಲಿರುವ ಒಲಿಂಪಿಕ್ಸ್’ನಲ್ಲಿ ಕ್ರಿಕೆಟ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಇದರ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಲಾಸ್ ಏಂಜಲೀಸ್ 2028 ಒಲಿಂಪಿಕ್ಸ್‌’ನ ಸಂಘಟಕರು ಆಟಗಳಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಶಿಫಾರಸು ಮಾಡುವುದರ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ನಿರೂಪಣೆಗೆ ಬಂದಿದ್ದ ಪಾಕ್ ನಿರೂಪಕಿ ಭಾರತದಿಂದ ಗಡಿಪಾರು!

ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಹೇಳಿಕೆ ನೀಡಿರುವಂತೆ 'ಒಲಿಂಪಿಕ್ಸ್‌’ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು LA28 ಶಿಫಾರಸು ಮಾಡಿರುವುದು ನಮಗೆ ಸಂತಸ ತಂದಿದೆ. ಇದು ಅಂತಿಮ ನಿರ್ಧಾರವಲ್ಲವಾದರೂ, ಒಂದು ಶತಮಾನಕ್ಕೂ ಹೆಚ್ಚು ಸಮಯದ ನಂತರ ಮೊದಲ ಬಾರಿಗೆ ಒಲಿಂಪಿಕ್ಸ್‌’ನಲ್ಲಿ ಕ್ರಿಕೆಟ್ ನೋಡುವುದು ಖುಷಿಯ ಸಂಗತಿ. ಒಂದು ವೇಳೆ ಕ್ರಿಕೆಟ್ ಸೇರ್ಪಡೆ ಖಚಿತವಾದಲ್ಲಿ, ಅದು 128 ವರ್ಷಗಳ ನಂತರ ಪುನರಾಗಮನವಾಗಲಿದೆ. ಇದಕ್ಕೂ ಮೊದಲು 1900ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿತ್ತು.

"ಕಳೆದ ಎರಡು ವರ್ಷಗಳಲ್ಲಿ ಹೊಸ ಕ್ರೀಡಾ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅವರ ಬೆಂಬಲಕ್ಕಾಗಿ ನಾನು LA28 ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌’ನಲ್ಲಿ ಮುಂದಿನ ವಾರ ಭಾರತದಲ್ಲಿ ನಡೆಯುವ ಐಒಸಿ ಅಧಿವೇಶನದಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ನಾವು ಎದುರು ನೋಡುತ್ತಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ವರ್ಷದ ಕೊನೆಯ ಸೂರ್ಯಗ್ರಹಣ ಮುಗಿಯುತ್ತಿದ್ದಂತೆ ಈ ರಾಶಿಯವರ ಬಾಳಲ್ಲಿ ಹರುಷ: ಸಂಪತ್ತಿನ ಮಳೆ ಸುರಿಸಲಿದ್ದಾನೆ ರಾಹು!

ಬ್ರಿಟನ್ನಿನ ‘ದಿ ಗಾರ್ಡಿಯನ್’ ಪತ್ರಿಕೆಯ ವರದಿಯಲ್ಲಿ ಈ ಬಗ್ಗೆ ಹೇಳಲಾಗಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌’ನಲ್ಲಿ ಪುರುಷರ ಮತ್ತು ಮಹಿಳೆಯರ T-20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಭಾನುವಾರದಿಂದ ಮುಂಬೈನಲ್ಲಿ ಆರಂಭವಾಗಲಿರುವ ಐಒಸಿಯ 141ನೇ ಅಧಿವೇಶನದಲ್ಲಿ ಕ್ರಿಕೆಟ್ ಸೇರ್ಪಡೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಲಾಗುವುದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News