Cricket in Olympics 2028: ಇನ್ಮುಂದೆ ಒಲಿಂಪಿಕ್ಸ್‌’ನಲ್ಲೂ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. 128 ವರ್ಷಗಳ ಬಳಿಕ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು, ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸವಾಲೆಸೆದ ಪಾಕಿಸ್ತಾನವನ್ನು ಸದೆಬಡಿದ ಸಚಿನ್, 2015ರಲ್ಲಿ ಮೊದಲ ಪೆಟ್ಟು ನೀಡಿದ ಕೊಹ್ಲಿ, 2019ರಲ್ಲಿ ರೋಹಿತ್; ಈ ಬಾರಿ ಯಾರು? 


2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌’ಗಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಶುಕ್ರವಾರ ಕ್ರಿಕೆಟ್‌ ಅಧಿಕೃತ ಸೇರ್ಪಡೆಗೆ ಅನುಮೋದನೆ ನೀಡಿದೆ. ಐಒಸಿ ಅಧ್ಯಕ್ಷ ಥಾಮಸ್ ಬಾಷ್ ಈ ವಿಷಯವನ್ನು ಪ್ರಕಟಿಸಿದ್ದಾರೆ. ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕಾರಿ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಥಾಮಸ್ ಬಾಷ್ ವಹಿಸಿದ್ದರು.


ಐಒಸಿ ಕ್ರೀಡಾ ನಿರ್ದೇಶಕ ಕಿಟ್ ಮೆಕ್‌ ಕಾನ್ನೆಲ್, “ಲಾಸ್ ಏಂಜಲೀಸ್ ಸಮಿತಿಯು ಒಲಿಂಪಿಕ್ಸ್‌’ನ ಭಾಗವಾಗಬಹುದಾದ 5 ಕ್ರೀಡೆಗಳನ್ನು ಪ್ರಸ್ತಾಪಿಸಿದೆ. ಇದರಲ್ಲಿ ಕ್ರಿಕೆಟ್ ಕೂಡ ಸೇರಿದೆ. ಈ ವಿಷಯವನ್ನು ಇಬಿ (ಕಾರ್ಯಕಾರಿ ಮಂಡಳಿ) ಸಭೆಯಲ್ಲಿ ಪ್ರಸ್ತಾಪಿಸಲಾಗುವುದು. ಲಾಸ್ ಏಂಜಲೀಸ್ 2028 ರ ಒಲಿಂಪಿಕ್ಸ್‌’ನ ಸಂಘಟಕರು ಸೋಮವಾರ 128 ವರ್ಷಗಳ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಶಿಫಾರಸು ಮಾಡಿದ್ದಾರೆ. 1900 ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿತ್ತು” ಎಂದಿದ್ದಾರೆ.


ಇದನ್ನೂ ಓದಿ: ಕ್ಯಾಬ್ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದಕ್ಕೆ ಮಹಿಳೆಗೆ ಅಶ್ಲೀಲ ಫೋಟೋ ಕಳುಹಿಸಿದ ಟ್ಯಾಕ್ಸಿ ಚಾಲಕ!


40 ವರ್ಷಗಳ ನಂತರ ಭಾರತದಲ್ಲಿ IOC ಅಧಿವೇಶನ:


ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಕ್ಟೋಬರ್ 9 ರಂದು ಅಧಿಕೃತ ಹೇಳಿಕೆಯನ್ನು ನೀಡಿದ್ದು, ಸಮ್ಮರ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸುವ ಪ್ರಸ್ತಾಪದ ಬಗ್ಗೆ ಮಾಹಿತಿ ನೀಡಿದೆ. ಈ ಸಮಯದಲ್ಲಿ, ಎರಡು ವರ್ಷಗಳ ಪ್ರಕ್ರಿಯೆಯಲ್ಲಿ ಐಸಿಸಿ ಲಾಸ್ ಏಂಜಲೀಸ್-2028 ಸಮಿತಿಯೊಂದಿಗೆ ನಿಕಟವಾಗಿ ಕೆಲಸ ಮಾಡಿದೆ ಎಂದು ಹೇಳಲಾಗಿದೆ. ಸುಮಾರು 40 ವರ್ಷಗಳ ನಂತರ ಭಾರತವು IOC ಅಧಿವೇಶನವನ್ನು ಆಯೋಜಿಸುತ್ತಿದೆ. ಐಒಸಿಯ 86ನೇ ಅಧಿವೇಶನ 1983ರಲ್ಲಿ ದೆಹಲಿಯಲ್ಲಿ ನಡೆದಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ