Kane Williamson Test Centuries: ವಿಶ್ವಕಪ್ 2023ರ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ಟೀಮ್ ಇಂಡಿಯಾದ ಅನೇಕ ಹಿರಿಯ ಕ್ರಿಕೆಟಿಗರು ವಿಶ್ರಾಂತಿಯಲ್ಲಿದ್ದಾರೆ. ಈ ನಡುವೆ ಟೆಸ್ಟ್ ಕ್ರಿಕೆಟ್‌’ನಲ್ಲಿ ಬ್ಯಾಟ್ಸ್‌ಮನ್‌ಒಬ್ಬರು ಅಬ್ಬರಿಸಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯುವ ಸಮೀಪಕ್ಕೆ ಬಂದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಒಟ್ಟು ಆಸ್ತಿ ಎಷ್ಟು ಕೋಟಿ ಗೊತ್ತಾ?


ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ 2 ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯವು ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ ಶತಕ ಸಿಡಿಸಿದ್ದರು.


ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್’ನಲ್ಲಿ 29 ಶತಕ ಸಿಡಿಸಿದ್ದಾರೆ. ಕ್ರಿಕೆಟ್‌’ನ ಎಲ್ಲಾ ಮೂರು ಸ್ವರೂಪಗಳಲ್ಲಿ ಒಟ್ಟಾರೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಎರಡನೇ ಬ್ಯಾಟ್ಸ್‌ಮನ್. ಸಚಿನ್ ತೆಂಡೂಲ್ಕರ್ (100) ನಂತರ ಕೊಹ್ಲಿ 80 ಶತಕಗಳನ್ನು ಹೊಂದಿದ್ದಾರೆ. ಇದೀಗ ಕೇನ್ ವಿಲಿಯಮ್ಸನ್ ಟೆಸ್ಟ್ ಕ್ರಿಕೆಟ್‌’ನಲ್ಲಿ ಕೊಹ್ಲಿಯ ಶತಕಗಳನ್ನು ಸರಿಗಟ್ಟಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಇನ್ನಿಂಗ್ಸ್‌’ನಲ್ಲಿ ಶತಕ ಸಿಡಿಸುವುದರೊಂದಿಗೆ ವಿಲಿಯಮ್ಸನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 29 ಶತಕಗಳನ್ನು ಪೂರೈಸಿದರು. ಇನ್ನು ಒಂದು ಶತಕ ಬಾರಿಸಿದರೆ, ಕೊಹ್ಲಿ ದಾಖಲೆ ಬ್ರೇಕ್ ಆಗುತ್ತದೆ.


ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್‌’ನ ಕೇನ್ ವಿಲಿಯಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. 205 ಎಸೆತಗಳನ್ನು ಎದುರಿಸಿದ ಅವರು 104 ರನ್‌’ಗಳ ಇನ್ನಿಂಗ್ಸ್‌ ಆಡಿದರು. 50.73 ಸ್ಟ್ರೈಕ್ ರೇಟ್‌ನೊಂದಿಗೆ 11 ಬೌಂಡರಿಗಳನ್ನು ಬಾರಿಸಿದ್ದಾರೆ.


ಇದನ್ನೂ ಓದಿ: ಬಿಳಿಕೂದಲನ್ನು ಕೇವಲ 10 ನಿಮಿಷದಲ್ಲಿ ಬುಡದಿಂದಲೇ ಶಾಶ್ವತವಾಗಿ ಕಪ್ಪಾಗಿಸುತ್ತೆ ತೆಂಗಿನಕಾಯಿ ಸಿಪ್ಪೆ


ಎರಡನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿದೆ. ವಿಲಿಯಮ್ಸನ್ ಹೊರತಾಗಿ, ಡ್ಯಾರಿಲ್ ಮಿಚೆಲ್ (41) ಮತ್ತು ಗ್ಲೆನ್ ಫಿಲಿಪ್ಸ್ (42) ಕೆಲವು ಉತ್ತಮ ಹೊಡೆತಗಳನ್ನು ಆಡಿದರು. ಮೂರನೇ ದಿನ ಕ್ರೀಸ್‌’ನಲ್ಲಿ ಕೈಲ್ ಜೇಮ್ಸನ್ (7*) ಮತ್ತು ಟಿಮ್ ಸೌಥಿ (1*) ಬ್ಯಾಟಿಂಗ್‌’ಗೆ ಇದ್ದಾರೆ. ಆದರೆ ನ್ಯೂಜಿಲೆಂಡ್ ತಂಡ ಇನ್ನೂ 44 ರನ್‌’ಗಳಿಂದ ಹಿನ್ನೆಡೆ ಅನುಭವಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ