Ashish Nehra on Ruturaj Gaikwad: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಶುಕ್ರವಾರ ಅಂದರೆ ಡಿಸೆಂಬರ್ 1 ರಂದು ನಡೆಯಲಿದೆ. ಮೂರನೇ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ ನಾಲ್ಕನೇ ಪಂದ್ಯದಲ್ಲಿ ತಿರುಗೇಟು ನೀಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.


COMMERCIAL BREAK
SCROLL TO CONTINUE READING

ಈ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ ತಂಡ 2-1 ಮುನ್ನಡೆ ಸಾಧಿಸಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾವನ್ನು ಸೋಲಿಸುವ ಮತ್ತೊಂದು ಉತ್ತಮ ಅವಕಾಶವಿದೆ.


ಇದನ್ನೂ ಓದಿ: Never.. Ever.. Give up.. ಕೇವಲ ಪದಗಳಲ್ಲ.. ಪರಿಶ್ರಮದ ಮೂಲಕ ಗೆದ್ದ ಖ್ಯಾತನಾಮರು -ಹಿಟ್ ಲಿಸ್ಟ್ ಇಲ್ಲಿದೆ!


ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‌’ಮನ್ ರುತುರಾಜ್ ಗಾಯಕ್ವಾಡ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ರುತುರಾಜ್ ಗಾಯಕ್ವಾಡ್ ಕೇವಲ 57 ಎಸೆತಗಳಲ್ಲಿ 123 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು. ನಾಲ್ಕನೇ ಟಿ20 ಪಂದ್ಯದಲ್ಲೂ ರುತುರಾಜ್ ಗಾಯಕ್ವಾಡ್ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ.


ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಶತಕ ಬಾರಿಸಿ ಆಸ್ಟ್ರೇಲಿಯಾ ವಿರುದ್ಧದ ಟಿ20ಯಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.


ಈ ಬಳಿಕ ಮಾತನಾಡಿದ ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ, ರುತುರಾಜ್ ಗಾಯಕ್ವಾಡ್ ಅವರನ್ನು ಹೊಗಳಿದ್ದಾರೆ. ರುತುರಾಜ್ ಗಾಯಕ್ವಾಡ್ ಭಾರತದ ಪರ ಎಲ್ಲಾ ಮೂರು ಮಾದರಿಗಳನ್ನು ಆಡಬಲ್ಲ ಆಟಗಾರ ಎಂದು ಹೇಳಿದರು.


ಆಶಿಶ್ ನೆಹ್ರಾ ಪ್ರಕಾರ, ರುತುರಾಜ್ ಇನ್ನಿಂಗ್ಸ್ ನಿಭಾಯಿಸುವ ಮತ್ತು ದೊಡ್ಡ ಹೊಡೆತಗಳನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆ. ಜೊತೆಗೆ ಏಕದಿನ ಕ್ರಿಕೆಟ್‌’ನಲ್ಲಿಯೂ ಭಾರತಕ್ಕಾಗಿ ಭವಿಷ್ಯವನ್ನೇ ಬರೆಯುವ ಸಾಮಾರ್ಥ್ಯ ಹೊಂದಿದ್ದಾನೆ.


ಇದನ್ನೂ ಓದಿ: BBK 10: ಉಲ್ಟಾ ಆಯಿತು ಪ್ರತಾಪ್ ಮಾಸ್ಟರ್‌ ಪ್ಲಾನ್‌... ಟಾಸ್ಕ್ ನಲ್ಲಿ ಬಿಗ್ ಮಿಸ್ಟೇಕ್ ಮಾಡಿದ ಡ್ರೋನ್   


ಆಸ್ಟ್ರೇಲಿಯಾದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡವು T 20 ಪಂದ್ಯದ ನಂತರ ಮೂರು ODI ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಸಹ ಆಡಲಿದೆ. ಇದಕ್ಕಾಗಿ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ