Team India World Record: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ವಿಶಾಖಪಟ್ಟಣದ ಡಾ. ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್‌’ಗಳ ಜಯ ಸಾಧಿಸಿದೆ. ಈಗ ಈ ಸರಣಿಯ ಎರಡನೇ ಪಂದ್ಯವು ನವೆಂಬರ್ 26 ರಂದು ತಿರುವನಂತಪುರಂ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಒಂದು ವಿಷಯದಲ್ಲಿ ವಿಶ್ವದ ನಂಬರ್ 1 ತಂಡವಾಗಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಡೇಟಿಂಗ್ ಮಾಡ್ತಿರೋದು ಶುಭ್ಮನ್ ಜೊತೆ ಅಲ್ಲ…! ಆತನ ಗೆಳೆಯನ ಜೊತೆಯಂತೆ


ಇದೀಗ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ತಂಡ ಪಾಕಿಸ್ತಾನ. ಪಾಕಿಸ್ತಾನ ಇದುವರೆಗೆ ಗರಿಷ್ಠ 135 ಟಿ20 ಪಂದ್ಯಗಳನ್ನು ಗೆದ್ದಿದೆ. ಕಳೆದ ಪಂದ್ಯವನ್ನು ಗೆದ್ದು ಭಾರತ 134 ತಲುಪಿದೆ. ಒಂದು ವೇಳೆ ಟೀಂ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಪಾಕಿಸ್ತಾನದೊಂದಿಗೆ ಜಂಟಿಯಾಗಿ ಈ ಸ್ವರೂಪದಲ್ಲಿ ಅತಿ ಹೆಚ್ಚು ಗೆಲುವುಗಳನ್ನು ದಾಖಲಿಸಿದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡೂ ತಂಡಗಳು 135 ಗೆಲುವು ದಾಖಲಿಸಲಿವೆ. ಪಾಕಿಸ್ತಾನದ ಈ ದಾಖಲೆಯನ್ನು ಮುರಿಯಲು ಭಾರತ ಮುಂದಿನ ಎರಡು ಪಂದ್ಯಗಳನ್ನು ಗೆಲ್ಲಲೇಬೇಕು.


ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ


  • ಪಾಕಿಸ್ತಾನ - 135 ಗೆಲುವುಗಳು

  • ಭಾರತ - 134 ಗೆಲುವುಗಳು

  • ನ್ಯೂಜಿಲೆಂಡ್ - 102 ಗೆಲುವುಗಳು

  • ದಕ್ಷಿಣ ಆಫ್ರಿಕಾ - 95 ಗೆಲುವುಗಳು

  • ಆಸ್ಟ್ರೇಲಿಯಾ - 94 ಗೆಲುವುಗಳು


ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಬ್ಯಾಟಿಂಗ್ ಅಬ್ಬರ:


ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ನಾಯಕರಾಗಿದ್ದಾರೆ. ತಮ್ಮ ಚೊಚ್ಚಲ ನಾಯಕತ್ವದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಾ ಸಿಕ್ಸರ್-ಬೌಂಡರಿಗಳ ಸುರಿಮಳೆಗೈದಿದ್ದಾರೆ. 42 ಎಸೆತಗಳಲ್ಲಿ 80 ರನ್‌’ಗಳ ಇನಿಂಗ್ಸ್‌ ಆಡಿದ ಅವರು 9 ಬೌಂಡರಿ ಮತ್ತು 4 ಸಿಕ್ಸರ್‌’ಗಳನ್ನು ಸಿಡಿಸಿದ್ದಾರೆ. ಈ ಪಂದ್ಯದ ಗೆಲುವಿಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ಹೊರತಾಗಿ, ಇಶಾನ್ ಕಿಶನ್ ಕೂಡ 39 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 58 ರನ್ ಗಳಿಸಿದರು. ಅಂತಿಮವಾಗಿ ರಿಂಕು ಸಿಂಗ್ 14 ಎಸೆತಗಳಲ್ಲಿ 22 ರನ್ ಗಳಿಸುವ ಮೂಲಕ ಪಂದ್ಯವನ್ನು ತಂಡದ ಪರವಾಗಿ ತಿರುಗಿಸಿದರು.


ಇದನ್ನೂ ಓದಿ: ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಈ ಇಬ್ಬರು ಪ್ಲೇಯರ್ಸ್ ಔಟ್! 2ನೇ ಕದನಕ್ಕೆ ಭಾರತದ ಪ್ಲೇಯಿಂಗ್ 11 ಹೀಗಿರಲಿದೆ


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/-l9UZYUp33o?si=_K0khSS1BDeQ7ypt

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ