IND vs AUS 3rd T20I Match: ಗೆಲ್ಲುವ ಪಂದ್ಯ ಸೋಲಲು ಈ ಆಟಗಾರನೇ ಕಾರಣ !
IND vs AUS 3rd T20I Match:ಒಂದು ಹಂತದಲ್ಲಿ ಮೂರನೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಗೆಲುವು ಬಹುತೇಕ ಖಚಿತ ಎನಿಸಿತ್ತು. ಆದರೆ ಕೊನೆಯ ಓವರ್ ಪಂದ್ಯದ ಫಲಿತಾಂಶವನ್ನು ಬದಲಾಯಿಸಿತು.
IND vs AUS 3rd T20I Match : ಮಂಗಳವಾರ ಗುವಾಹಟಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದೆ. ಈ ಸೋಲಿಗೆ ಕಾರಣವಾಗಿದ್ದು ಈ ಒಬ್ಬ ಆಟಗಾರ ಎನ್ನುವುದು ಕ್ರಿಕೆಟ್ ಪಂಡಿತರ ಮಾತು. ಆಸ್ಟ್ರೇಲಿಯ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿ 222 ರನ್ ಗಳಿಸಿದ್ದರೂ ಟೀಂ ಇಂಡಿಯಾ ಪಂದ್ಯದಲ್ಲಿ ಸೋಲು ಕಂಡಿದೆ. ಒಂದು ಹಂತದಲ್ಲಿ ಈ ಪಂದ್ಯದಲ್ಲಿ ಭಾರತದ ಗೆಲುವು ಬಹುತೇಕ ಖಚಿತ ಎನಿಸಿತ್ತು. ಆದರೆ ಫಾಸ್ಟ್ ಬೌಲರ್ ಪ್ರಸಿದ್ಧ್ ಕೃಷ್ಣ ಅವರ ಕೊನೆಯ ಓವರ್ ಪಂದ್ಯದ ಫಲಿತಾಂಶವನ್ನು ಬದಲಾಯಿಸಿತು.
ಗೆಲುವಿನ ಸನಿಹದಲ್ಲಿತ್ತು ಭಾರತ :
ಈ ಪಂದ್ಯವನ್ನು ಗೆಲ್ಲಲು ಆಸ್ಟ್ರೇಲಿಯಾಕ್ಕೆ ಕೊನೆಯ 12 ಎಸೆತಗಳಲ್ಲಿ 43 ರನ್‌ಗಳ ಅಗತ್ಯವಿತ್ತು. ಈ ಹೊತ್ತಿನಲ್ಲಿ ಟೀಮ್ ಇಂಡಿಯಾ ಸುಲಭವಾಗಿ ಗೆಲುವು ದಾಖಲಿಸಲಿದೆ ಎಂದೇ ಭಾವಿಸಲಾಗಿತ್ತು. ಆದರೆ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಮ್ಯಾಥ್ಯೂ ವೇಡ್ ಆಗ ಕ್ರೀಸ್ ನಲ್ಲಿದ್ದರು. ಆಸ್ಟ್ರೇಲಿಯಾ ಇನ್ನಿಂಗ್ಸ್‌ನ 19ನೇ ಓವರ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮ್ಯಾಥ್ಯೂ ವೇಡ್ ಒಟ್ಟಾಗಿ 22 ರನ್ ಗಳಿಸಿದರು. ಭಾರತದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಈ ಓವರ್‌ನಲ್ಲಿ ಈ ರನ್‌ಗಳನ್ನು ನೀಡಿದ್ದರು. ಆಸ್ಟ್ರೇಲಿಯಾ ಗೆಲುವಿಗೆ ಕೊನೆಯ 6 ಎಸೆತಗಳಲ್ಲಿ 21 ರನ್‌ಗಳ ಅಗತ್ಯವಿತ್ತು.
ಇದನ್ನೂ ಓದಿ : T20ಯಲ್ಲಿ ಪಂದ್ಯ ಸೋತ ಬಳಿಕ ಸೂರ್ಯ ಕುಮಾರ್ ಯಾದವ್ ಪದೇ ಪದೇ ತೆಗೆದುಕೊಂಡಿದ್ದು ಈ ಆಟಗಾರನ ಹೆಸರನ್ನು
ಈ ಆಟಗಾರನ ವೈಫಲ್ಯದಿಂದಲೇ ಸೋಲು :
ಫಾಸ್ಟ್ ಬೌಲರ್ ಪ್ರಸಿದ್ಧ್ ಕೃಷ್ಣ ಕೊನೆಯ ಓವರ್‌ನಲ್ಲಿ 21 ರನ್ ನೀಡುವುದಿಲ್ಲ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಎಲ್ಲರ ನಿರೀಕ್ಷೆ ಸುಳ್ಳಾಯಿತು. ಪ್ರಸಿದ್ಧ್ ಕೃಷ್ಣ ಅವರ ಈ ಓವರ್‌ನ ಮೊದಲ ಎಸೆತದಲ್ಲಿ ಮ್ಯಾಥ್ಯೂ ವೇಡ್ ಬೌಂಡರಿ ಬಾರಿಸಿದರು. ನಂತರ ಅವರು ಓವರ್‌ನ ಎರಡನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಂಡು ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಸ್ಟ್ರೈಕ್ ನೀಡಿದರು. ಇದಾದ ಬಳಿಕ ಗ್ಲೆನ್ ಮ್ಯಾಕ್ಸ್ ವೆಲ್ ಪ್ರಸಿದ್ಧ್ ಕೃಷ್ಣ ಅವರ ಸತತ 4 ಎಸೆತಗಳಲ್ಲಿ 6, 4, 4, 4 ರನ್ ಬಾರಿಸಿ ಆಸ್ಟ್ರೇಲಿಯಾಕ್ಕೆ ಜಯ ತಂದುಕೊಟ್ಟರು. ಪ್ರಸಿದ್ಧ್ ಕೃಷ್ಣ ಪಂದ್ಯದ ಕೊನೆಯ ಓವರ್‌ನಲ್ಲಿ 23 ರನ್ ನೀಡಿದರು. ಇದೇ ಈ ಪಂದ್ಯದ ಸೋಲಿಗೆ ಕಾರಣವಾಯಿತು.
ದೊಡ್ಡ ತಿರುವು :
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 222 ರನ್ ಗಳಿಸಿ ಆಸ್ಟ್ರೇಲಿಯಾಕ್ಕೆ 223 ರನ್ ಗುರಿ ನೀಡಿದೆ. ಇದಕ್ಕುತ್ತರವಾಗಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 225 ರನ್ ಗಳಿಸಿ ಜಯ ಸಾಧಿಸಿತು. ಗ್ಲೆನ್ ಮ್ಯಾಕ್ಸ್‌ವೆಲ್ 48 ಎಸೆತಗಳಲ್ಲಿ 104 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದರು. ಪ್ರಸಿದ್ಧ್ ಕೃಷ್ಣ 4 ಓವರ್‌ಗಳಲ್ಲಿ 68 ರನ್ ನೀಡಿ ಒಂದೂ ವಿಕೆಟ್ ಪಡೆಯಲಿಲ್ಲ. ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್ ಈ ಪಂದ್ಯದ ದಿಕ್ಕನ್ನೇ ಬದಲಾಯಿಸಿಬಿಟ್ಟಿತು.
ಇದನ್ನೂ ಓದಿ : ಈ ವಿಚಾರದಲ್ಲಿ ಫುಟ್ಬಾಲ್ ದಿಗ್ಗಜರಾದ ರೊನಾಲ್ಡೋ-ಮೆಸ್ಸಿಯನ್ನೇ ಹಿಂದಿಕ್ಕಿದ ವಿರಾಟ್-ರೋಹಿತ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ