Cricketer Death: ಪಾಕಿಸ್ತಾನಿ ಮೂಲದ ಕ್ಲಬ್ ಮಟ್ಟದ ಕ್ರಿಕೆಟಿಗ ಜುನೈಲ್ ಜಾಫರ್ ಖಾನ್, ಬಿಸಿಲಿನ ತಾಪ ತಾಳಲಾರದೆ ಪ್ರಾಣ ಬಿಟ್ಟಿದ್ದಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ 40 ವರ್ಷದ ಜುನೈಲ್ ಜಾಫರ್ ಖಾನ್, ಕಳೆದ ಶನಿವಾರ ಅಡಿಲೇಡ್‌ನ ಕಾನ್ಕಾರ್ಡಿಯಾ ಕಾಲೇಜಿನಲ್ಲಿ ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕಾಲೇಜಿಯನ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಓಲ್ಡ್ ಕಾನ್ಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಪರ ಆಡಿದ್ದರು.
ಸುಡುವ ಬಿಸಿಲಿನಲ್ಲಿ 40 ಓವರ್‌ಗಳ ಕಾಲ ಫೀಲ್ಡಿಂಗ್ ಮಾಡಿದ ನಂತರ, ಅವರು 7 ರನ್‌ಗಳ ವೈಯಕ್ತಿಕ ಸ್ಕೋರ್‌ನೊಂದಿಗೆ ಬ್ಯಾಟಿಂಗ್ ಮಾಡುವಾಗ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿಯಲಿಲ್ಲ. ಪಂದ್ಯವು 40 ಡಿಗ್ರಿ ಸೆಲ್ಸಿಯಸ್ ಶಾಖದಲ್ಲಿ ನಡೆಯುತ್ತಿದ್ದಾಗ, ಸಂಜೆ 4 ಗಂಟೆಗೆ ಜುನೈಲ್ ಜಾಫರ್ ಖಾನ್ ಕುಸಿದು ಬಿದ್ದರು ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ.
ಕಳೆದ ಕೆಲವು ದಿನಗಳಿಂದ ದಕ್ಷಿಣ ಆಸ್ಟ್ರೇಲಿಯಾ ತೀವ್ರ ಶಾಖವನ್ನು ಅನುಭವಿಸುತ್ತಿದೆ. ಅಲ್ಲಿನ ಹವಾಮಾನ ಇಲಾಖೆಯು ಅತ್ಯಧಿಕ ತಾಪಮಾನ ದಾಖಲಾಗುತ್ತಿದೆ ಎಂದು ತಿಳಿಸಿದೆ. ಅಡಿಲೇಡ್ ಟರ್ಫ್ ಕ್ರಿಕೆಟ್ ಅಸೋಸಿಯೇಷನ್ ನಿಯಮಗಳ ಪ್ರಕಾರ, ತಾಪಮಾನವು 42 ಡಿಗ್ರಿ ಸೆಲ್ಸಿಯಸ್ ಮೀರಿದರೆ ಪಂದ್ಯಗಳನ್ನು ರದ್ದುಗೊಳಿಸಲಾಗುತ್ತದೆ.
"ಓಲ್ಡ್ ಕಾನ್ಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್‌ನ ಸದಸ್ಯರೊಬ್ಬರು ಸಾವನ್ನಪ್ಪಿರುವುದು ನಮಗೆ ತುಂಬಾ ದುಃಖ ತಂದಿದೆ. ಕಾನ್ಕಾರ್ಡಿಯಾ ಕಾಲೇಜ್ ಓವಲ್‌ನಲ್ಲಿ ಆಡುವಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಅವರ ಜೀವ ಉಳಿಸಲಾಗಲಿಲ್ಲ".
"ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ" ಎಂದು ಖಾನ್ ಕ್ಲಬ್ ಹೇಳಿಕೆಯಲ್ಲಿ ತಿಳಿಸಿದೆ. ಜುನೈಲ್ ಜಾಫರ್ ಖಾನ್ 2013 ರಲ್ಲಿ ಪಾಕಿಸ್ತಾನದಿಂದ ಅಡಿಲೇಡ್‌ಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಲು ಬಂದಿದ್ದರು ಎಂದು ವರದಿಯಾಗಿದೆ. ಇದೀಗ ಕ್ರಿಕೆಟ್ ಆಡುವ ಬಿಸಿಲಿನ ಕಾರಣಕ್ಕೆ ಒಬ್ಬ ಆಟಗಾರ ಪ್ರಾಣ ಕಳೆದುಕೊಂಡಿರುವುದು ಕ್ರೀಡಾ ಲೋಕಕ್ಕೆ ಆಘಾತವನ್ನುಂಟು ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









