Rohit Sharma: ಮೈದಾನದಲ್ಲಿ ರೋಹಿತ್ ಶರ್ಮಾ ಮಾಡಿದ ಈ ಕೆಲಸಕ್ಕೆ ಫಿದಾ ಆದ ಕೋಟ್ಯಂತರ ಕ್ರಿಕೆಟ್ ಫ್ಯಾನ್ಸ್..!
Rohit Sharma Video: ನಾಯಕ ರೋಹಿತ್ ಶರ್ಮಾ ಇಂದು ಮಾಡಿದ ಈ ಕೆಲಸವನ್ನು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಯಾವುದೇ ಕ್ರಿಕೆಟ್ ಅಭಿಮಾನಿಗಳು ಸಹ ಮರೆಯಲು ಸಾಧ್ಯವಿಲ್ಲ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
Rohit Sharma Video: ರಾಯ್‌ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೈದಾನದಲ್ಲಿ ಈ ಒಂದು ಕೆಲಸವನ್ನು ಮಾಡಿದ್ದಾರೆ. ಇದರಿಂದಾಗಿ ಟೀಮ್ ಇಂಡಿಯಾದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.
ನಾಯಕ ರೋಹಿತ್ ಶರ್ಮಾ ಇಂದು ಮಾಡಿದ ಈ ಕೆಲಸವನ್ನು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಯಾವುದೇ ಕ್ರಿಕೆಟ್ ಅಭಿಮಾನಿಗಳು ಸಹ ಮರೆಯಲು ಸಾಧ್ಯವಿಲ್ಲ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ICC Men’s ODI Ranking: ಐತಿಹಾಸಿಕ ಸಾಧನೆಗೆ ಒಂದೇ ಮೆಟ್ಟಿಲು: ಮೂರು ಸ್ವರೂಪದಲ್ಲೂ ಅಗ್ರಸ್ಥಾನ ಪಡೆಯುತ್ತಾ ಟೀಂ ಇಂಡಿಯಾ?
ಟೀಂ ಇಂಡಿಯಾ ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ ಐದನೇ ಎಸೆತವನ್ನು ಆಡಲು ತಯಾರಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಹಿಟ್‌ಮ್ಯಾನ್‌ನ ಸಣ್ಣ ಅಭಿಮಾನಿಯೊಬ್ಬರು ಭದ್ರತಾ ಕವಚವನ್ನು ಮುರಿದು ಮೈದಾನಕ್ಕೆ ಬಂದು ರೋಹಿತ್ ಶರ್ಮಾ ಅವರನ್ನು ತಬ್ಬಿಕೊಂಡರು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಇದ್ದಕ್ಕಿದ್ದಂತೆ ತನ್ನ ಬಳಿ ಬಾಲಕ ಬರುತ್ತಿರುವುದನ್ನು ಕಂಡು ಆಶ್ಚರ್ಯಚಕಿತರಾದರು. ಇದಾದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಆತನನ್ನು ತಬ್ಬಿಕೊಂಡಿದ್ದು, ಅಷ್ಟರಲ್ಲಿ ಭದ್ರತಾ ಸಿಬ್ಬಂದಿ ಬಂದು ಹಿಂದಿನಿಂದ ಬಾಲಕನನ್ನು ಹಿಡಿದು ಬಲವಾಗಿ ಎಳೆಯಲು ಯತ್ನಿಸಿದ್ದಾರೆ.
IND vs NZ: ಬೌಲಿಂಗ್-ಬ್ಯಾಟಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ: ಕೀವೀಸ್ ವಿರುದ್ಧ ಗೆದ್ದು ಸರಣಿ ವಶಪಡಿಸಿಕೊಂಡ ರೋಹಿತ್ ಪಡೆ
ತವರಿನಲ್ಲಿ ಟೀಂ ಇಂಡಿಯಾ ಸತತ ಏಳನೇ ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದು, ಕಳೆದ ನಾಲ್ಕು ವರ್ಷಗಳಿಂದ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ತಂಡ ಸೋತಿರಲಿಲ್ಲ. ತವರಿನಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿತ್ತು. 2018-19ರಲ್ಲಿ ಕಾಂಗರೂ ತಂಡ ಭಾರತದ ನೆಲದಲ್ಲಿ ಏಕದಿನ ಸರಣಿಯನ್ನು 3-2ರಿಂದ ಗೆದ್ದುಕೊಂಡಿತ್ತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ