ಧೋನಿ IPLನಿಂದ‌ ನಿವೃತ್ತರಾಗ್ತಾರಾ? ಸಂಚಲನಕಾರಿ ಹೇಳಿಕೆ ನೀಡಿದ ಸಿಎಸ್‌ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್

CSK coach Stephen Fleming statement on Dhoni retirement: ಶನಿವಾರ ಚೆಪಾಕ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಸಮಯದಲ್ಲಿ ಧೋನಿ ಪೋಷಕರು (ಪಾನ್ ಸಿಂಗ್ ಮತ್ತು ದೇವಕಿ ದೇವಿ) ಹಾಜರಿದ್ದು, ಅವರ ನಿವೃತ್ತಿಯ ಬಗ್ಗೆ ಮತ್ತೊಮ್ಮೆ ಊಹಾಪೋಹಗಳಿಗೆ ಕಾರಣವಾಗಿತ್ತು.

Written by - Bhavishya Shetty | Last Updated : Apr 6, 2025, 07:57 AM IST
    • ದೆಹಲಿ ವಿರುದ್ಧದ ಪಂದ್ಯದಲ್ಲಿ 25 ರನ್‌ಗಳಿಂದ ಸೋತ ಸಿಎಸ್‌ಕೆ
    • ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್
    • ಧೋನಿ ನಿವೃತ್ತಿ ಬಗ್ಗೆ ಸಂಚಲನಕಾರಿ ಹೇಳಿಕೆ ನೀಡಿದ ಸಿಎಸ್‌ಕೆ ಕೋಚ್
ಧೋನಿ IPLನಿಂದ‌ ನಿವೃತ್ತರಾಗ್ತಾರಾ? ಸಂಚಲನಕಾರಿ ಹೇಳಿಕೆ ನೀಡಿದ ಸಿಎಸ್‌ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್
CSK coach Stephen Fleming statement on Dhoni retirement

CSK coach Stephen Fleming statement on Dhoni retirement: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮಹೇಂದ್ರ ಸಿಂಗ್ ಧೋನಿ ಇನ್ನೂ ಬಲಿಷ್ಠವಾಗಿ ಆಡುತ್ತಿದ್ದು, ಅವರ ವೃತ್ತಿಜೀವನವನ್ನು ಕೊನೆಗೊಳಿಸುವ ಪಾತ್ರವನ್ನು ನನಗೆ ನೀಡಲಾಗಿಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. 

Add Zee News as a Preferred Source

ಇದನ್ನೂ ಓದಿ: ಹೇರ್‌ ಕಲರ್‌ ಅವಶ್ಯಕತೆಯೇ ಇಲ್ಲ.. ಈ ಎಲೆ ಕುದಿಸಿ ಹಚ್ಚಿದ್ರೆ ಶಾಶ್ವತವಾಗಿ ಕಪ್ಪಾಗುತ್ತವೆ ಬಿಳಿಕೂದಲು! ತಲೆಹೊಟ್ಟಿಗೂ ಇದೇ ಮದ್ದು..

ಶನಿವಾರ ಚೆಪಾಕ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಸಮಯದಲ್ಲಿ ಧೋನಿ ಪೋಷಕರು (ಪಾನ್ ಸಿಂಗ್ ಮತ್ತು ದೇವಕಿ ದೇವಿ) ಹಾಜರಿದ್ದು, ಅವರ ನಿವೃತ್ತಿಯ ಬಗ್ಗೆ ಮತ್ತೊಮ್ಮೆ ಊಹಾಪೋಹಗಳಿಗೆ ಕಾರಣವಾಗಿತ್ತು.

ದೆಹಲಿ ವಿರುದ್ಧದ ಪಂದ್ಯದಲ್ಲಿ 25 ರನ್‌ಗಳಿಂದ ಸೋತ ಬಳಿಕ ಸ್ಟೀಫನ್ ಫ್ಲೆಮಿಂಗ್ ಮಾತನಾಡಿ, "ಇಲ್ಲ, ಅವರ ಪ್ರಯಾಣವನ್ನು ಕೊನೆಗೊಳಿಸುವುದು ನನ್ನ ಕೆಲಸವಲ್ಲ" ಎಂದು ಹೇಳಿದರು. "ನನಗೆ ಏನೂ ಗೊತ್ತಿಲ್ಲ. ನಾನು ಅವರೊಂದಿಗೆ ಕೆಲಸ ಮಾಡುವುದನ್ನು ಆನಂದಿಸುತ್ತಿದ್ದೇನೆ. ಅವರು ಇನ್ನೂ ಬಲಶಾಲಿಯಾಗಿದ್ದಾರೆ" ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋರಂಟಿ ಅಲ್ಲ.. ಈ ಎಲೆಯ ಪುಡಿ ತೆಂಗಿನೆಣ್ಣೆಯಲ್ಲಿ ಬೆರೆಸಿ ತಲೆಗೆ ಹಚ್ಚಿ, ಬಿಳಿಕೂದಲು 10 ನಿಮಿಷದಲ್ಲೇ ಗಾಢ ಕಪ್ಪಾಗುವುದು!

ಇದಕ್ಕೂ ಮೊದಲು, ಮಹೇಂದ್ರ ಸಿಂಗ್ ಧೋನಿ ಅವರನ್ನು ಒಂಬತ್ತನೇ ಕ್ರಮಾಂಕದಲ್ಲಿ ಕಳುಹಿಸುವ ನಿರ್ಧಾರವನ್ನು ತೀವ್ರವಾಗಿ ಟೀಕಿಸಲಾಗಿತ್ತು. ಆದರೆ ಶನಿವಾರ ದೆಹಲಿ ವಿರುದ್ಧದ ಪಂದ್ಯದಲ್ಲಿ ಅನುಭವಿ ಕ್ರಿಕೆಟಿಗ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದರು. ಆ ಸಂದರ್ಭದಲ್ಲಿ 26 ಎಸೆತಗಳಲ್ಲಿ 30 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು. ಆದರೆ ತಂಡವನ್ನು ಸತತ ಮೂರನೇ ಸೋಲಿನಿಂದ ಪಾರು ಮಾಡುವಲ್ಲಿ ವಿಫಲರಾದರು. ಇನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸ್ಟೀಫನ್ ಫ್ಲೆಮಿಂಗ್, ಧೋನಿಯನ್ನು ಸಮರ್ಥಿಸಿಕೊಂಡು ಆ ಸಮಯದಲ್ಲಿ ಬ್ಯಾಟಿಂಗ್ ಮಾಡುವುದು ನಿಜವಾಗಿಯೂ ಕಷ್ಟಕರವಾಗಿತ್ತು ಎಂದು ಹೇಳಿದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News