ನವದೆಹಲಿ: 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್(CSK vs KKR) ನಡುವೆ ಫೈನಲ್ ಫೈಟ್ ನಡೆಯಲಿದೆ. 9ನೇ ಬಾರಿ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿರುವ ಎಂ.ಎಸ್.ಧೋನಿ ನೇತೃತ್ವದ ಚೆನ್ನೈ 3 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೋಲ್ಕತ್ತಾ ವಿರುದ್ಧ ಗೆಲುವಿನ ಉತ್ಸಾಹದಲ್ಲಿರುವ ಧೋನಿ ಪಡೆ 4ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.


COMMERCIAL BREAK
SCROLL TO CONTINUE READING

ಕಳೆದ ವರ್ಷದ ಟೂರ್ನಿಯಲ್ಲಿ ಚೆನ್ನೈ(Chennai Super Kings) ತಂಡವು ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್ ಹಂತದಲ್ಲಿಯೇ ಹೊರಬೀಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಆದರೆ ತನ್ನ ಹಳೆಯ ತಪ್ಪುಗಳನ್ನು ಸರಿಪಡಿಸಿಕೊಂಡು ಪ್ರಸಕ್ತ ಟೂರ್ನಿಯ ಆರಂಭದಿಂದಲೇ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಚೆನ್ನೈ ಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿರುವ ಚೆನ್ನೈ ಇಂದಿನ ಪಂದ್ಯದಲ್ಲಿ ಕೋಲ್ಕತ್ತಾ ಮೇಲೆ ಸವಾರಿ ಮಾಡಿ ಮತ್ತೊಮ್ಮೆ ಟ್ರೋಫಿ ಎತ್ತಿಹಿಡಿಯುವ ಹುಮ್ಮಸ್ಸಿನಲ್ಲಿದೆ.


IPL: ಧೋನಿ ವಿನ್ನಿಂಗ್ ಶಾಟ್ ಕಂಡು ಪತ್ನಿ ಸಾಕ್ಷಿ ಪ್ರತಿಕ್ರಿಯೆ, ವಿಡಿಯೋ ವೈರಲ್


ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ನಂತರವೂ ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ.ಎಸ್.ಧೋನಿ(MS Dhoni) ವರ್ಚಸ್ಸು ಒಂದಿಷ್ಟು ಕುಂದಿಲ್ಲ ಎಂಬುವುದಕ್ಕೆ ಪ್ರಸಕ್ತ ಸಾಲಿನ ಟೂರ್ನಿ ಸಾಕ್ಷಿಯಾಗಿದೆ. ಕಳೆದ ಪಂದ್ಯದಲ್ಲಿ ದೆಹಲಿ ವಿರುದ್ಧದ ಪಂದ್ಯದಲ್ಲಿ ಧೋನಿಯವರ ಅಮೋಘ ಪ್ರದರ್ಶನವೇ ಇದಕ್ಕೆ ನಿದರ್ಶನವಾಗಿದೆ. ಬಲಿಷ್ಠ ತಂಡಗಳಿಗೆ ಮಣ್ಣುಮುಕ್ಕಿಸುವ ಅವರ ಚಾಣಾಕ್ಷ ತಂತ್ರಗಳು ಹಳಿತಪ್ಪಿದ್ದ ಚೆನ್ನೈ ತಂಡ ಮತ್ತೆ ಸರಿದಾರಿಗೆ ಬರುವಂತೆ ಮಾಡಿವೆ. ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸ್ಸಿಸ್, ಅಂಬಾಟಿ ರಾಯುಡು, ಮೋಯಿನ್ ಅಲಿ, ರಾಬಿನ್ ಉತ್ತಪ್ಪ ಚೆನ್ನೈ ತಂಡದ ಬ್ಯಾಟಿಂಗ್ ಬಲವಾಗಿದ್ದಾರೆ. ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಮತ್ತು ಡ್ವೆನ್ ಬ್ರಾವೊ ಅವರ ಆಲ್‌ರೌಂಡರ್ ಆಟ ಕೂಡ ಚೆನ್ನೈ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಧೋನಿ ಪಡೆಯ ಬೌಲಿಂಗ್ ಕೂಡ ಎದುರಾಳಿ ತಂಡವನ್ನು ಮಣಿಸುವ ಸಾಮರ್ಥ್ಯವನ್ನು ಹೊಂದಿದೆ.


ಇನ್ನು ಎಲಿಮಿನೇಟರ್ ಪಂದ್ಯಗಳಲ್ಲಿ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಕ್ಕೆ ಮಣ್ಣುಮುಕ್ಕಿಸಿ ಫೈನಲ್ ಪ್ರವೇಶಿಸುರುವ ಕೋಲ್ಕತ್ತಾ(Kolkata Knight Riders) ಕೂಡ ಮತ್ತೊಂದು ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಉತ್ಸಾಹದಲ್ಲಿದೆ. 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಕೋಲ್ಕತ್ತಾ ತಂಡ ಕಳೆದ ಋತುವಿನಲ್ಲಿ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಈ ಬಾರಿ ಗಮನಾರ್ಹ ಪ್ರದರ್ಶನ ನೀಡುವ ಮೂಲಕ ಇಯಾನ್ ಮಾರ್ಗನ್ ಪಡೆ 4ನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿತ್ತು.


ಇದನ್ನೂ ಓದಿ: T20 ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಆಡುವ ಏಳು ಆಟಗಾರಗಾರರು ಇವರು, ಈ ಆಟಗಾರ ಒಂದು ಕಾಲದಲ್ಲಿ ಊಟವಿಲ್ಲದೇ ಮಲಗುತ್ತಿದ್ದರಂತೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ