ಟೀಂ ಇಂಡಿಯಾದ ಈ ಆಟಗಾರರ ಫಿಟ್ನೆಸ್ ಬಗ್ಗೆ ಪಾಕ್ ಆಟಗಾರ ಹೇಳಿದ್ದೇನು?
ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಇತ್ತೀಚೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಫಿಟ್‌ನೆಸ್ ಬಗ್ಗೆ ಮಾತನಾಡಿದ್ದಾರೆ. `ಫಿಟ್ನೆಸ್ ಕೊರತೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಪಂತ್ ಚೆನ್ನಾಗಿ ಬ್ಯಾಟಿಂಗ್ ಮಾಡಿಲ್ಲ. ಜೊತೆಗೆ ರೋಹಿತ್ ಅವರ ಫಿಟ್ನೆಸ್ ಕೂಡ ಉತ್ತಮವಾಗಿಲ್ಲ` ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಟೀಂ ಇಂಡಿಯಾ ಸದ್ಯ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದಲ್ಲಿದೆ. ಐರ್ಲೆಂಡ್ ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಇಂಗ್ಲೆಂಡ್ ಪ್ರವಾಸದ ಮೊದಲ ಪಂದ್ಯ ಜುಲೈ 1 ರಿಂದ ನಡೆಯಲಿದೆ. ಆದರೆ ಪಾಕಿಸ್ತಾನದ ಮಾಜಿ ಅನುಭವಿ ಆಟಗಾರರ ಟೀಂ ಇಂಡಿಯಾದ ಹಿರಿಯ ಆಟಗಾರರ ಫಿಟ್ನೆಸ್ ಬಗ್ಗೆ ಮಾತನಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ: ಮಹಾʼ ಬಿಕ್ಕಟ್ಟು: ಬಂಡಾಯ ಶಾಸಕರ ಮನವೊಲಿಸಲು ಕಣಕ್ಕಿಳಿದ ಠಾಕ್ರೆ ಪತ್ನಿ!
ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಇತ್ತೀಚೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಫಿಟ್‌ನೆಸ್ ಬಗ್ಗೆ ಮಾತನಾಡಿದ್ದಾರೆ. "ಫಿಟ್ನೆಸ್ ಕೊರತೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಪಂತ್ ಚೆನ್ನಾಗಿ ಬ್ಯಾಟಿಂಗ್ ಮಾಡಿಲ್ಲ. ಜೊತೆಗೆ ರೋಹಿತ್ ಅವರ ಫಿಟ್ನೆಸ್ ಕೂಡ ಉತ್ತಮವಾಗಿಲ್ಲ" ಎಂಬ ಹೇಳಿಕೆಯನ್ನು ನೀಡಿದ್ದಾರೆ.
"ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಫಿಟ್‌ನೆಸ್ ಕುರಿತು ಪ್ರಶ್ನೆಗಳು ಉದ್ಭವಿಸುತ್ತಲೇ ಇರುತ್ತವೆ. ಅವರ ಫಿಟ್ನೆಸ್ ಮಟ್ಟ ತುಂಬಾ ಕಡಿಮೆಯಾಗಿದೆ. ಮುಖ್ಯವಾಗಿ ಟೀಂ ಇಂಡಿಯಾದಲ್ಲಿ ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತದೆ. ಇನ್ನು ವಿರಾಟ್ ಕೊಹ್ಲಿ ತಂಡದ ನಾಯಕತ್ವ ವಹಿಸಿಕೊಂಡ ಸಂದರ್ಭದಲ್ಲಿ ಫಿಟ್ನೆಸ್‌ಗೆ ಸಂಬಂಧಿಸಿದ ಮಾನದಂಡಗಳು ಬದಲಾಗಿದ್ದವು. ಆದರೆ ರಿಷಬ್ ಪಂತ್ ವಿಕೆಟ್ ಕೀಪರ್. ಕೀಪರ್ ಆಗಿರುವುದರಿಂದ ಫಿಟ್ ನೆಸ್ ಸುಧಾರಿಸಿಕೊಳ್ಳಬೇಕಿದೆ. ಕೀಪಿಂಗ್ ಸಂದರ್ಭದಲ್ಲಿ ಅವರು ಸರಿಯಾಗಿ ಬಾಗುವುದಿಲ್ಲ ಎಂಬುದನ್ನು ನಾವು ಇತ್ತೀಚಿನ ದಿನಗಳಲ್ಲಿ ನೋಡಿದ್ದೇವೆ" ಎಂದು ಹೇಳಿದರು.
ಇದನ್ನೂ ಓದಿ: Hero Bike: ಸದ್ದಿಲ್ಲದೆ ಅಗ್ಗದ ಹೀರೋ ಬೈಕ್ ಬಿಡುಗಡೆ, ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿ
ದಿನೇಶ್ ಕಾರ್ತಿಕ್, ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ರಿಷಬ್ ಪಂತ್‌ಗೆ ಪೈಪೋಟಿ ನೀಡುತ್ತಿದ್ದಾರೆ. ಹೀಗಾಗಿ ಮುಂಬರುವ ಐಸಿಸಿ ಟೂರ್ನಮೆಂಟ್‌ಗಳಲ್ಲಿ ಅದರಲ್ಲೂ ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವುದು ಕಷ್ಟಸಾಧ್ಯವಾಗಿದೆ. ಪಂತ್ ಅವರ ಆಟ ಸಾಕಷ್ಟು ಸುಧಾರಿಸಬೇಕಿದೆ ಎಂದು ಹೇಳಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.