ಹೈದಾರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಪಂದ್ಯದಲ್ಲಿ ಹೈದಾರಾಬಾದ್ ತಂಡವು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಗೆಲುವು ಸಾಧಿಸಿದೆ.



COMMERCIAL BREAK
SCROLL TO CONTINUE READING

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ತಂಡವು 20 ಓವರ್ ಗಳಲ್ಲಿ ಸಂಜು ಸ್ಯಾಮ್ಸನ್ ಅವರ ಅಜೇಯ 102  ಹಾಗೂ ಅಜಿಂಕ್ಯಾ ರಹಾನೆಯವರ 70 ರನ್ ಗಳ ನೆರವಿನಿಂದ ಎರಡು ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು.



ನಂತರ 199 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಹೈದರಾಬಾದ್ ತಂಡವು ಡೇವಿಡ್ ವಾರ್ನರ್ 69,ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 19 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.ಆ ಮೂಲಕ  ರಾಜಸ್ತಾನ್ ತಂಡದ ಪರ ವೇಗದ ಶತಕ ಗಳಿಸಿದ್ದ ಸಂಜು ಸ್ಯಾಮ್ಸನ್ ಅವರ ಆಟ ವ್ಯರ್ಥವಾಯಿತು.