WTC Final 2023 IND vs AUS: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023ರ ಅಂತಿಮ ಪಂದ್ಯವು ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್’ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಈ ಅಂತಿಮ ಪಂದ್ಯಕ್ಕೆ ಉಭಯ ತಂಡಗಳನ್ನು ಇನ್ನೂ ಪ್ರಕಟ ಮಾಡಿಲ್ಲ. ಇವೆಲ್ಲದರ ನಡುವೆ ಇದೀಗ ಹೊಸ ಸುದ್ದಿಯೊಂದು ಹೊರಬಿದ್ದಿದ್ದು, ಕ್ರಿಕೆಟ್ ಪ್ರಿಯರಲ್ಲಿ ಆತಂಕ ಸೃಷ್ಟಿಸಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ರ ಅಂತಿಮ ಪಂದ್ಯದ ನಂತರ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಆಶಸ್ ಸರಣಿಯನ್ನು ಆಡಬೇಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್’ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ನ್ಯೂಸ್ ಕಾರ್ಪ್ ವರದಿಯ ಪ್ರಕಾರ, ಡೇವಿಡ್ ವಾರ್ನರ್ ಫೈನಲ್ ಹೊರತುಪಡಿಸಿ ಆಶಸ್ ಸರಣಿಯ ಮೊದಲ 2 ಟೆಸ್ಟ್’ಗಳಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯಬಹುದು. ಅದಾದ ನಂತರ, ಮ್ಯಾಟ್ ರೆನ್ಶಾ ಮತ್ತು ಮಾರ್ಕಸ್ ಹ್ಯಾರಿಸ್ ಕೂಡ ಆರಂಭಿಕರಾಗಿ ತಂಡದಲ್ಲಿ ಸೇರ್ಪಡೆಗೊಳ್ಳಬಹುದು. ಒಂದು ವೇಳೆ ಡೇವಿಡ್ ವಾರ್ನರ್ ವಿಫಲವಾದರೆ, ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ತೀರಾ ಹೆಚ್ಚಿದೆ. ಅವರ ಸ್ಥಾನವನ್ನು ಮಾರ್ಕಸ್ ಹ್ಯಾರಿಸ್ ಅಥವಾ ಮ್ಯಾಟ್ ರೆನ್ಶಾ ಅವರು ತುಂಬಬಹುದು ಎಂದು ಹೇಳಲಾಗುತ್ತಿದೆ.
ಕಳೆದ ಕೆಲ ಸಮಯದಿಂದ ಡೇವಿಡ್ ವಾರ್ನರ್ ಕಳಪೆ ಪ್ರದರ್ಶನ ತೋರುತ್ತಿದ್ದಾರೆ. ಸದ್ಯ ಐಪಿಎಲ್ 2023ರ ಸೀಸನ್ 16ರಲ್ಲಿ ಡೆಲ್ಲಿ ಪರವಾಗಿ ಆಟವಾಡುತ್ತಿದ್ದಾರೆ. ಆದರೆ ಮೊಣಕೈ ಗಾಯದ ಕಾರಣದಿಂದ ಅವರು ಚಿಕಿತ್ಸೆಗೆಂದು ತೆರಳಿದ್ದಾರೆ. ಇನ್ನು ಐಪಿಎಲ್’ನ ಮೊದಲು ಮೂರು ಇನ್ನಿಂಗ್ಸ್’ಗಳಲ್ಲಿ ಅವರು ಗಳಿಸಿದ ರನ್ 1, 10 ಮತ್ತು 15.
ಎಡಗೈ ಬ್ಯಾಟ್ಸ್’ಮನ್ ಡೇವಿಡ್ ವಾರ್ನರ್ 2019ರಲ್ಲಿ ಕೊನೆಯ ಇಂಗ್ಲೆಂಡ್ ಪ್ರವಾಸದಲ್ಲಿ ಕೇವಲ 9.5 ಸರಾಸರಿಯಲ್ಲಿ ರನ್ ಗಳಿಸಿದ್ದರು. ಇಂಗ್ಲೆಂಡ್’ನಲ್ಲಿ ಆಡಿದ 25 ಟೆಸ್ಟ್ ಇನ್ನಿಂಗ್ಸ್’ಗಳಲ್ಲಿ ಅವರು ಒಂದೇ ಒಂದು ಶತಕ ಬಾರಿಸಿಲ್ಲ. ಟೆಸ್ಟ್ ಪಂದ್ಯಗಳಲ್ಲಿ ಕಳೆದ 15 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಅರ್ಧಶತಕ ಸಿಡಿಸಿದ್ದಾರಷ್ಟೇ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್’ನಲ್ಲಿ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಫೈನಲ್’ಗೆ ಲಗ್ಗೆ ಇಟ್ಟಿದೆ. ಆದರೆ ಕಳೆದ ಬಾರಿ ಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲು ಅನುಭವಿಸಬೇಕಾಯಿತು. ಹೀಗಿರುವಾಗ ಈ ಬಾರಿ ಹೇಗಾದರೂ ಮಾಡಿ ಟ್ರೋಫಿ ಎತ್ತಿಹಿಡಿಯಲೇ ಬೇಕು ಎಂದು ಟೀಮ್ ಇಂಡಿಯಾ ಪಣತೊಟ್ಟಿದೆ.
ಇದನ್ನೂ ಓದಿ: IPLನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಕೊನೆಯಾಯ್ತು ಈ ಆಟಗಾರರ ವೃತ್ತಿಜೀವನ! ಕಾರಣ ಶಾಕಿಂಗ್
ಟೀಮ್ ಇಂಡಿಯಾ 2013 ರಿಂದ ಯಾವುದೇ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಆದ್ದರಿಂದ ಈ ಫೈನಲ್ ಟೀಮ್ ಇಂಡಿಯಾಕ್ಕೆ ತುಂಬಾ ವಿಶೇಷವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.