IND vs AUS, 2nd Test: ದೆಹಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಆಸ್ಟ್ರೇಲಿಯಾಕ್ಕೆ ಅತ್ಯಂತ ಬಿರುಸಿನ ರೀತಿಯಲ್ಲಿ ಆರಂಭಿಕ ಹೊಡೆತ ನೀಡಿದ್ದಾರೆ.  


COMMERCIAL BREAK
SCROLL TO CONTINUE READING

ಆಸ್ಟ್ರೇಲಿಯ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಸೆಷನ್‌ನಲ್ಲಿ ಮೊಹಮ್ಮದ್ ಶಮಿ ಅವರ ಅಬ್ಬರದ ಬೌಲಿಂಗ್ ಮತ್ತೆ ಮರುಕಳಿಸಿದೆ. ಭಾರತ ತಂಡದ ಅಪಾಯಕಾರಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ತಮ್ಮ ‘ಮ್ಯಾಜಿಕ್ ಬಾಲ್’ ಮೂಲಕ ಆಸ್ಟ್ರೇಲಿಯಾದ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡಿದ್ದಾರೆ. ಈ ಮೂಲಕ ಸಂಚಲನ ಮೂಡಿಸಿದ್ದಾರೆ.


ಇದನ್ನೂ ಓದಿ: ZEE News Sting Operation Big Impact : ಬಣ್ಣ ಬಯಲಾಗುತ್ತಿದ್ದಂತೆ BCCI ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ರಾಜೀನಾಮೆ


ಡೇವಿಡ್ ವಾರ್ನರ್‌ ನಂತಹ ಅಪಾಯಕಾರಿ ಬ್ಯಾಟ್ಸ್‌ಮನ್ ಆಸ್ಟ್ರೇಲಿಯಾ ತಂಡದ ಅರ್ಧದಷ್ಟು ಆಟಗಾರನಿಗೆ ಸಮನಾಗಿದ್ದು, ಅವರನ್ನು ಪೆವಿಲಿಯನ್ ಗೆ ಕಳಿಸುವಲ್ಲಿ ಮೊಹಮ್ಮದ್ ಶಮಿ ಯಶಸ್ವಿಯಾಗಿದ್ದಾರೆ. ಡೇವಿಡ್ ವಾರ್ನರ್ ಡೆಲ್ಲಿಯ ಪಿಚ್‌ನಲ್ಲಿ ಉಳಿದುಕೊಂಡಿದ್ದರೆ, ಟೀಂ ಇಂಡಿಯಾಗೆ ಸಂಕಷ್ಟವನ್ನು ಸೃಷ್ಟಿಸುತ್ತಿದ್ದರು.  ಡೇವಿಡ್ ವಾರ್ನರ್ ಈ ಮೈದಾನದಲ್ಲಿ ದೆಹಲಿ ತಂಡಕ್ಕಾಗಿ ಹಲವು ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಆಸ್ಟ್ರೇಲಿಯದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡುವ ಮೂಲಕ ಮೊಹಮ್ಮದ್ ಶಮಿ ಅವರ ಈ ಮ್ಯಾಜಿಕ್ ಬಾಲ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.


ಭಾರತೀಯ ಪುಟ್ಬಾಲ್ ದಂತಕಥೆ ಬಲರಾಮ್ ಇನ್ನಿಲ್ಲ


2017 ರಲ್ಲಿ ಭಾರತದಲ್ಲಿ ಆಡಿದ ಕೊನೆಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1 ರಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಆಸ್ಟ್ರೇಲಿಯಾ ಕೊನೆಯದಾಗಿ 2004ರಲ್ಲಿ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.