Indian Premier League 2025: ಸ್ಫೋಟಕ ಅರ್ಧಶತಕದ ಮೂಲಕ ಕನ್ನಡಿಗ ಕರುಣ್ ನಾಯರ್ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕರುಣ್ ಭರ್ಜರಿ ಅರ್ಧಶತಕ ಸಿಡಿಸಿದ್ದಾರೆ.
ಟಾಸ್ ಗೆದ್ದ ದೆಹಲಿ ತಂಡದ ನಾಯಕ ಅಕ್ಸರ್ ಪಟೇಲ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್‌ಗಳ ಬೃಹತ್ ಮೊತ್ತವನ್ನ ಪೇರಿಸಿತು.
ಇದನ್ನೂ ಓದಿ: ಗಂಡಿಂದ ಸುಂದರ ಹೆಣ್ಣಾಗಿ ಬದಲಾದ ಸ್ಟಾರ್ ಕ್ರಿಕೆಟಿಗನ ಮಗ..! ಫೋಟೋಸ್ ನೋಡಿ "ಸಖತ್ ಹಾಟ್" ಎಂದು ನೆಟಿಜನ್ಸ್..
Nair fire against Bumrah ?pic.twitter.com/3D6kjyR5lx
— Delhi Capitals (@DelhiCapitals) April 13, 2025
ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನತ್ತಿದ ದೆಹಲಿಗೆ ದೀಪಕ್ ಚಹಾರ್ ಆರಂಭಿಕ ಆಘಾತ ನೀಡಿದರು. ಮೊದಲ ಎಸೆತದಲ್ಲಿಯೇ ಜೇಕ್ ಫ್ರೇಸರ್-ಮೆಕ್‌ಗುರ್ಕ್ ವಿಲ್ ಜಾಕ್ಸ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ನಂತರ ಅಭಿಷೇಕ್ ಪೊರೆಲ್ ಜೊತೆಗೆ ಕರುಣ್ ನಾಯರ್ ಸ್ಫೋಟಕ ಆಟವಾಡಿದರು. ಮುಂಬೈ ಬೌಲರ್‌ಗಳಿಗೆ ಬೆವರಿಳಿಸಿದ ಕರುಣ್ ಕೇವಲ 22 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದರು. ಈ ಮೂಲಕ ಅವರು ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿದರು.
ಕನ್ನಡಿಗ ಕರುಣ್ ನಾಯರ್ 2022ರಿಂದ ಐಪಿಎಲ್ ಟೂರ್ನಿ ಆಡಿರಲಿಲ್ಲ. ಇದೀಗ ಭರ್ಜರಿ ಕಮ್‌ಬ್ಯಾಕ್ ಮಾಡಿದ ಕುರುಣ್ ಮುಂಬೈ ವಿರುದ್ಧ ಅಕ್ಷರಶಃ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕರುಣ್ ಮುಂಬೈ ವಿರುದ್ಧ ಅಮೋಘ ಇನ್ನಿಂಗ್ಸ್ ಆಡಿದ್ದು, ಕೇವಲ 40 ಎಸೆತಗಳಲ್ಲಿ 12 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 89 ರನ್ ಗಳಿಸಿ ಔಟಾದರು.
ಇದನ್ನೂ ಓದಿ: ʻನಾನು ಯಾವಾಗಲೂ ಕನ್ನಡದಲ್ಲೇ ಮಾತಾಡೋದುʼ : ಕೆ.ಎಲ್ ರಾಹುಲ್ ಕನ್ನಡ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ
ಬೃಹತ್ ಮೊತ್ತ ಪೇರಿಸಿದ ಮುಂಬೈ!
ಮೊದಲ ಬ್ಯಾಟಿಂಗ್ ಮಾಡಿದ ಮುಂಬೈ ಪರ ತಿಲಕ್ ವರ್ಮಾ (59) ಆಕರ್ಷಕ ಅರ್ಧಶತಕ ಸಿಡಿಸಿದರು. ಇನ್ನುಳಿದಂತೆ ರಯಾನ್ ರಿಕೆಲ್ಟನ್ (41), ಸೂರ್ಯಕುಮಾರ್ ಯಾದವ್ (40), ನಮನ್ ಧೀರ್ (38) ಮತ್ತು ರೋಹಿತ್ ಶರ್ಮಾ (18) ರನ್ ಗಳಿಸಿದರು. ದೆಹಲಿ ಪರ ವಿಪ್ರಜ್ ನಿಗಮ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಮುಕೇಶ್ ಕುಮಾರ್ ಒಂದು ವಿಕೆಟ್ ಕಬಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









