ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ವೈಫಲ್ಯ ಅನುಭವಿಸಿದ ಪಂಜಾಬ್ ಕಿಂಗ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ ಗೆ ಸುಲಭ ತುತ್ತಾಯಿತು. ಮುಂಬೈನ ಬ್ರರ್ಬೌನ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 32 ಪಂದ್ಯದಲ್ಲಿ ಪಂಜಾಬ್ ವಿರುದ್ಧ ದೆಹಲಿ 9 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿತು.


COMMERCIAL BREAK
SCROLL TO CONTINUE READING

ಟಾಸ್ ಗೆದ್ದ ದೆಹಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಂಜಾಬ್ ತಂಡ ದೆಹಲಿ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿಹೋಯಿತು. ನಿಗದಿತ 20 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 115 ರನ್‍ಗಳ ಸಾಧಾರಣ ಮೊತ್ತ ಗಳಿಸಿತು. 116 ರನ್‍ಗಳ ಸುಲಭ ಗುರಿ ಬೆನ್ನತ್ತಿದ ದೆಹಲಿ ಕೇವಲ ಕೇವಲ 1 ವಿಕೆಟ್ ಕಳೆದುಕೊಂಡು 10 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.


ದೆಹಲಿ ನಿಖರ ಬೌಲಿಂಗ್ ದಾಳಿಗೆ ಪಂಜಾಬ್ ತತ್ತರ!


ಡೇವಿಡ್ ವಾರ್ನರ್(ಔಟಾಗದೆ 60) ಮೊದಲ ವಿಕೆಟ್‍ಗೆ 83 ರನ್‍ಗಳ ಜೊತೆಯಾಟವಾಡಿದರು. ಇನ್ನುಳಿದಂತೆ ಸರ್ಫರಾಜ್ ಖಾನ್(ಅಜೇಯ 12) ರನ್ ಗಳಿಸಿದರು. ದೆಹಲಿ ಕೇವಲ 10.3 ಓವರ್‍ಗಳಲ್ಲಿ 1 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತಲ್ಲದೆ, 9 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ದೆಹಲಿ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಉತ್ತಮಪಡಿಸಿಕೊಂಡಿದ್ದು, 6ನೇ ಸ್ಥಾನಕ್ಕೇರಿದೆ. ಅದರಂತೆ ಪಂಜಾಬ್ 8ನೇ ಸ್ಥಾನಕ್ಕೆ ಕುಸಿದಿದೆ.   


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.