Indian Premier League 2025: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು.
163 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಆರ್‌ಸಿಬಿ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಬೆಂಗಳೂರು ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಂಡಿದೆ.
ಇದನ್ನೂ ಓದಿ: RCB Playoff: ಪ್ಲೇ ಆಫ್ ತಲುಪಲು RCB ಇನ್ನೂ ಎಷ್ಟು ಪಂದ್ಯ ಗೆಲ್ಲಬೇಕು..?
ಆರ್‌ಸಿಬಿಗೆ ಆರಂಭಿಕ ಆಘಾತ!!
ಗೆಲುವಿನ ಉತ್ಸಾಹದಲ್ಲಿಯೇ ಕಣಕ್ಕಿಳಿದ ಆರ್‌ಸಿಬಿಗೆ ದೆಹಲಿ ಕ್ಯಾಪ್ಟನ್ ಅಕ್ಸರ್ ಪಟೇಲ್ ಆರಂಭಿಕ ಆಘಾತ ನೀಡಿದರು. ಅಕ್ಸರ್ ಪಟೇಲ್ ಬೌಲಿಂಗ್‌ನಲ್ಲಿ 12 ರನ್ ಗಳಿಸಿದ್ದ ಜಾಕೋಬ್ ಬೆಥೆಲ್ ಅವರು ಕರುಣ್ ನಾಯರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್ ಶೂನ್ಯಕ್ಕೆ ಬೌಲ್ಡ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಕೂಡ 6 ಗಳಿಸಿ ರನೌಟ್‌ಗೆ ಬಲಿಯಾದರು. ಹೀಗೆ ಆರ್‌ಸಿಬಿ 26 ರನ್‌ಗೆ 3 ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡು ದೊಡ್ಡ ಸಂಕಷ್ಟಕ್ಕೆ ಸಿಲುಕಿತು.
ಕಮಾಲ್ ಮಾಡಿದ ಕೃನಾಲ್ & ಕೊಹ್ಲಿ!!
? ? ? ? ? ? ? ? ? - II
6 consecutive away wins, most for any team in the history of IPL ?#PlayBold #ನಮ್ಮRCB #IPL2025 #DCvRCB pic.twitter.com/f9pIy09q2q— Royal Challengers Bengaluru (@RCBTweets) April 27, 2025
ವಿರಾಟ್ ಕೊಹ್ಲಿ ಜೊತೆಗೂಡಿದ ಕೃನಾಲ್ ಪಾಂಡ್ಯ ಕಮಾಲ್ ಮಾಡಿದರು. ತಾಳ್ಮೆಯುತ ಬ್ಯಾಟಿಂಗ್ ಮಾಡಿದ ಈ ಜೋಡಿ ಅದ್ಭುತ ಜೊತೆಯಾಟವಾಡಿತು. 4ನೇ ವಿಕೆಟ್‌ಗೆ ಈ ಜೋಡಿ 119 ರನ್‌ಗಳ ಜೊತೆಯಾಟವಾಡಿತು. 47 ಎಸೆತಗಳಲ್ಲಿ 4 ಬೌಂಡರಿ ಇದ್ದ 51 ರನ್ ಗಳಿಸಿದ ಕೊಹ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ನೆರವಾದರು. ಇನ್ನು ಕೊನೆವರೆಗೂ ಔಟಾಗದೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಕೃನಾಲ್ ಪಾಂಡ್ಯ ತಂಡದ ಗೆಲುವಿಗೆ ನೆರವಾದರು. 47 ಎಸೆತಗಳಲ್ಲಿ ಕೃನಾಲ್ 5 ಬೌಂಡರಿ ಮತ್ತು 4 ಸಿಕ್ಸರ್ ಇದ್ದ 73 ರನ್ ಗಳಿಸಿ ಔಟಾಗದೆ ಉಳಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ ಟಿಮ್ ಡೇವಿಡ್ 19 ರನ್ ಗಳಿಸಿ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ದೆಹಲಿ ಪರ ಅಕ್ಸರ್ ಪಟೇಲ್ 2 ವಿಕೆಟ್ ಪಡೆದರೆ, ದುಷ್ಮಂತ ಚಮೀರ 1 ವಿಕೆಟ್ ಪಡೆದರು.
Ladies & Gentlemen, he’d like his cap ?.
It’s time. ? pic.twitter.com/CEGRJvOxVu
— Royal Challengers Bengaluru (@RCBTweets) April 27, 2025
ಆರ್‌ಸಿಬಿ ಸಂಘಟಿತ ಬೌಲಿಂಗ್!!
ಆರ್‌ಸಿಬಿ ಸಂಘಟಿತ ಬೌಲಿಂಗ್ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತತ್ತರಿಸಿತು. ತವರಿನಲ್ಲಿ ಬಿಗ್ ಸ್ಕೋರ್ ಕಲೆ ಹಾಕುವ ನಿರೀಕ್ಷೆಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ನಿರಾಸೆ ಅನುಭವಿಸಿತು. ದೆಹಲಿ ಪರ ಕೆ.ಎಲ್.ರಾಹುಲ್ (41), ಟ್ರಿಸ್ಟಾನ್ ಸ್ಟಬ್ಸ್ (34), ಅಭಿಷೇಕ್ ಪೊರೆಲ್ (28), ಫಾಫ್ ಡು ಪ್ಲೆಸಿಸ್ (22), ಅಕ್ಸರ್ ಪಟೇಲ್ (15), ವಿಪ್ರಜ್ ನಿಗಮ್ (12) ರನ್ ಗಳಿಸಿದರು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರೆ, ಜೋಶ್ ಹ್ಯಾಜಲ್‌ವುಡ್ 2 ವಿಕೆಟ್ ಪಡೆದು ಮಿಂಚಿದರು. ಯಶ್ ದಯಾಳ್ ಮತ್ತು ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಅಂಕಪಟ್ಟಿಯಲ್ಲಿ ಆರ್‌ಸಿಬಿಗೆ ಅಗ್ರಸ್ಥಾನ!!
ಇನ್ನು ದೆಹಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯದಲ್ಲಿ 7 ಗೆಲುವು ಮತ್ತು ಮೂರು ಸೋಲು ಕಂಡಿರುವ ಆರ್‌ಸಿಬಿ 14 ಅಂಕಗಳನ್ನ ಕಲೆಹಾಕುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಎರಡನೇ ಸ್ಥಾನದಲ್ಲಿ ಗುಜರಾತ್, ಮೂರನೇ ಸ್ಥಾನದಲ್ಲಿ ಮುಂಬೈ ಮತ್ತು ನಾಲ್ಕನೇ ಸ್ಥಾನದಲ್ಲಿ ದೆಹಲಿ ಇವೆ.
ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಆರ್‌ಸಿಬಿ ಪಾಲು!!
ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ಕಬಳಿಸಿಕೊಂಡಿದ್ದಾರೆ. ಕೊಹ್ಲಿ 10 ಪಂದ್ಯಗಳಲ್ಲಿ ಒಟ್ಟು 434 ರನ್ ಗಳಿಸಿದ್ದಾರೆ. ಅದೇ ರೀತಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಿಗೆ ನೀಡುವ ಪರ್ಪಲ್ ಕ್ಯಾಪ್ ಕೂಡ ಆರ್‌ಸಿಬಿ ಪಾಲಾಗಿದೆ. ಜೋಶ್ ಹ್ಯಾಜಲ್‌ವುಡ್ 10 ಪಂದ್ಯಗಳಲ್ಲಿ ಒಟ್ಟು 18 ವಿಕೆಟ್‌ಗಳನ್ನ ಗಳಿಸಿದ್ದು ಪರ್ಪಲ್ ಕ್ಯಾಪ್ ತಮ್ಮ ಬಳಿ ಉಳಿಸಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









