DC vs RR, IPL 2022: ದೆಹಲಿ ಕ್ಯಾಪಿಟಲ್ಸ್ ಗೆ ರಾಜಸ್ಥಾನ್ ರಾಯಲ್ಸ್ ಸವಾಲು!

ದೆಹಲಿ ಮತ್ತು ರಾಜಸ್ಥಾನ್ ತಂಡಗಳು ಈವರೆಗೆ ಐಪಿಎಲ್​ ನಲ್ಲಿ ಒಟ್ಟು 24 ಬಾರಿ ಮುಖಾಮುಖಿಯಾಗಿದ್ದು, ಸಮಬಲದ ಹೋರಾಟ ನಡೆಸಿವೆ.

Written by - Puttaraj K Alur | Last Updated : Apr 22, 2022, 02:00 PM IST
  • ಇಂದು ಬಲಿಷ್ಠ ರಾಜಸ್ಥಾನ್ ರಾಯಲ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಸೆಣಸಾಟ
  • ಸಮಬಲದ ಹೋರಾಟ ನಡೆಸಿರುವ ತಂಡಗಳಲ್ಲಿ ಯಾರಿಗೆ ಸಿಗುತ್ತೆ ಗೆಲುವು?
  • ಗೆಲುವಿನ ತವಕದಲ್ಲಿರುವ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಪಡೆ
DC vs RR, IPL 2022: ದೆಹಲಿ ಕ್ಯಾಪಿಟಲ್ಸ್ ಗೆ ರಾಜಸ್ಥಾನ್ ರಾಯಲ್ಸ್ ಸವಾಲು! title=
ರಾಜಸ್ಥಾನ್ ಮತ್ತು ದೆಹಲಿ ಸೆಣಸಾಟ

ಮುಂಬೈ: 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 34ನೇ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 7.30ಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ರಾಜಸ್ಥಾನ್ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ತವಕದಲ್ಲಿದೆ. ದೆಹಲಿ ಕೂಡ ಮತ್ತೊಂದು ಗೆಲುವಿನ ಮೇಲೆ ಕಣ್ಣಿಟ್ಟಿದೆ. ಉಭಯ ತಂಡಗಳು ಬಲಿಷ್ಠವಾಗಿರುವುದರಿಂದ ಗೆಲುವಿಗಾಗಿ ಭರ್ಜರಿ ಪೈಪೋಟಿ ನಡೆಯುವ ನಿರೀಕ್ಷೆ ಇದೆ.

ಆಡಿರುವ 6 ಪಂದ್ಯಗಳಲ್ಲಿ ರಾಜಸ್ಥಾನ್ ತಂಡವು 4ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಅದೇ ರೀತಿ ದೆಹಲಿ ಆಡಿರುವ 6 ಪಂದ್ಯಗಳಲ್ಲಿ ಕೇವಲ 3 ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಎರಡೂ ತಂಡಗಳಿಗೂ ಗೆಲುವು ಬಹುಮುಖ್ಯವಾಗಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ತಂಡದಲ್ಲಿ ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕರುಣ್ ನಾಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ನವದೀಪ್ ಸೈನಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಇದನ್ನೂ ಓದಿ: Viral Video: ಯುಜ್ವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ಡ್ಯಾನ್ಸ್ ಗೆ ಜೋಸ್ ಬಟ್ಲರ್ ಫಿದಾ!

ಅದರಂತೆ ರಿಷಬ್ ಪಂತ್ ನೇತೃತ್ವದ ದೆಹಲಿ ತಂಡದಲ್ಲಿ ಪೃಥ್ವಿ ಶಾ, ಡೇವಿಡ್ ವಾರ್ನರ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್, ಮನ್‌ದೀಪ್ ಸಿಂಗ್, ಶ್ರೀಕರ್ ಭರತ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಎರಡೂ ತಂಡಗಳು ತುಂಬಾ ಬಲಿಷ್ಠವಾಗಿವೆ. ಹೀಗಾಗಿ ಇಂದಿನ ಪಂದ್ಯ ರಣರೋಚಕತೆಯಿಂದ ಕೂಡಿರಲಿದೆ ಎಂದು ಕ್ರೀಡಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಮತ್ತು ರಾಜಸ್ಥಾನ್ ತಂಡಗಳು ಈವರೆಗೆ ಐಪಿಎಲ್​ ನಲ್ಲಿ ಒಟ್ಟು 24 ಬಾರಿ ಮುಖಾಮುಖಿಯಾಗಿದ್ದು, ಸಮಬಲದ ಹೋರಾಟ ನಡೆಸಿವೆ. ಡೆಹಲಿ 12 ಬಾರಿ ಮತ್ತು ರಾಜಸ್ಥಾನ್ 12 ಬಾರಿ ಗೆದ್ದಿದೆ. ಇಂದಿನ ಪಂದ್ಯವು ಹೆಚ್ಚು ನಿರೀಕ್ಷೆ ಹುಟ್ಟಿಸಿದ್ದು, ಯಾರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Mumbai Indians : ಮುಂಬೈ ಟೀಂ ಮುಂದಿನ ಕ್ಯಾಪ್ಟನ್ ಪಟ್ಟಿಯಲ್ಲಿ ಈ 3 ಆಟಗಾರರ ಹೆಸರು!

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ದೆಹಲಿ ಕ್ಯಾಪಿಟಲ್ಸ್ : ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ, ಶ್ರೀಕರ್ ಭರತ್, ಸರ್ಫರಾಜ್ ಖಾನ್, ಲುಂಗಿ ಎನ್‍ಜಿಡಿ, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್‌, ಕೆ.ಸಿ.ಕಾರಿಯಪ್ಪ, ಡೇರಿಲ್ ಮಿಚೆಲ್, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ನಾಥನ್ ಕೌಲ್ಟರ್-ನೈಲ್, ಧ್ರುವ್ ಜುರೆಲ್, ಶುಭಂ ಗರ್ವಾಲ್

ಐಪಿಎಲ್‌ ಪಂದ್ಯ: 34

ರಾಜಸ್ಥಾನ್ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್

ದಿನಾಂಕ: ಏಪ್ರಿಲ್ 22, ಶುಕ್ರವಾರ

ಸ್ಥಳ: ಮುಂಬೈನ ವಾಂಖೆಡೆ ಸ್ಟೇಡಿಯಂ

ಸಮಯ: ಸಂಜೆ 7.30ಕ್ಕೆ

=====================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News