India vs New Zealand 1st ODI: ಶ್ರೀಲಂಕಾ ವಿರುದ್ಧದ ಮೂರು ಏಕದಿನ ಸರಣಿಯನ್ನು ಗೆದ್ದ ನಂತರ ಟೀಂ ಇಂಡಿಯಾದ ಮುಂದಿನ ಗುರಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆಲ್ಲುವುದು. ಇದರ ಜೊತೆಗೆ ನಾಯಕ ರೋಹಿತ್ ಶರ್ಮಾ ಏಕದಿನ ವಿಶ್ವಕಪ್‌ಗೆ ಸರಿಯಾದ ತಂಡದ ಸಂಯೋಜನೆಯನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ. ಇದೀಗ ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ಸಿಕ್ಕಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕಿರಲಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Winter Diet: ಚಳಿಗಾಲದಲ್ಲಿ ಈ ಆಹಾರಗಳ ಸೇವನೆಯಿಂದ ರೋಗಗಳಿಂದ ದೂರ ಉಳಿಯಬಹುದು


ಕೌಟುಂಬಿಕ ಕಾರಣಗಳಿಂದಾಗಿ ನ್ಯೂಜಿಲೆಂಡ್ ಸರಣಿಯಲ್ಲಿ ಅಕ್ಷರ್ ಪಟೇಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ನ್ಯೂಜಿಲೆಂಡ್ ಸರಣಿಗಾಗಿ ಟೀಂ ಇಂಡಿಯಾಗೆ ಆಯ್ಕೆಗಾರರು ಶಹಬಾಜ್ ಅಹ್ಮದ್ ಅವರನ್ನು ಮರಳಿ ಪಡೆದಿದ್ದಾರೆ. ಶಹಬಾಜ್ 2022 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಕೊನೆಯ ODI ಆಡಿದ್ದರು. ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್‌ನಲ್ಲಿ ಪರಿಣಿತ ಆಟಗಾರ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ್ದಾರೆ.


ದೇಶಿ ಕ್ರಿಕೆಟ್‌ನಲ್ಲಿ ಶಕ್ತಿ ಪ್ರದರ್ಶನ:


ಶಹಬಾಜ್ ಅಹ್ಮದ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದವರು. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಮನ ಗೆದ್ದರು. 51.2 ಓವರ್‌ಗಳಲ್ಲಿ 4.87 ರ ಎಕಾನಮಿಯೊಂದಿಗೆ ಆರು ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಕೆಳ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿ ಎರಡು ಅರ್ಧ ಶತಕಗಳನ್ನು ಬಾರಿಸಿದ್ದಾರೆ.


ಐಪಿಎಲ್ 2022 ರಲ್ಲಿ ಶಹಬಾಜ್ ಅಹ್ಮದ್ ಅದ್ಭುತ ಪ್ರದರ್ಶನ ನೀಡಿದ್ದರು. ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಾಗಿ 16 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು ನಾಲ್ಕು ವಿಕೆಟ್ಗಳನ್ನು ಪಡೆದಿದ್ದರು. ಅವರು ಈ 16 ಪಂದ್ಯಗಳಲ್ಲಿ 219 ರನ್ ಗಳಿಸಿದ್ದಾರೆ. ಅಹ್ಮದ್ ಈ ರನ್‌ಗಳನ್ನು 27.38 ಸರಾಸರಿಯಲ್ಲಿ ಗಳಿಸಿದ್ದು, ಅವರ ಸ್ಟ್ರೈಕ್ ರೇಟ್ 120.99 ಆಗಿತ್ತು.


ಇದನ್ನೂ ಓದಿ:  ಭಾರತದೊಂದಿಗಿನ 3 ಯುದ್ಧದಿಂದ ಬಡತನ & ನಿರುದ್ಯೋಗ; ನಾವು ಪಾಠ ಕಲಿತಿದ್ದೇವೆಂದ ಶೆಹಬಾಜ್ ಷರೀಫ್


ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ:


ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಕುಲದೀಪ್ ಯಾದವ್ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.