IND vs SA: ಟೀಂ ಇಂಡಿಯಾಗೆ ಭಾರೀ ಆಘಾತ: ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಬಿದ್ದ ಆಲ್ ರೌಂಡರ್!

ಟೀಂ ಇಂಡಿಯಾದ ಸ್ಫೋಟಕ ಆಲ್‌ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ. ದೀಪಕ್ ಹೂಡಾ ಇತ್ತೀಚೆಗೆ ಬೆನ್ನುನೋವಿಗೆ ಒಳಗಾಗಿದ್ದರು. ಈ ಬಗ್ಗೆ ಸ್ವತಃ ಬಿಸಿಸಿಐ ಮಾಹಿತಿ ನೀಡಿದೆ.

Written by - Bhavishya Shetty | Last Updated : Sep 26, 2022, 10:12 PM IST
    • ಟೀಂ ಇಂಡಿಯಾದ ಸ್ಫೋಟಕ ಆಲ್‌ರೌಂಡರ್ ದೀಪಕ್ ಹೂಡಾ
    • ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ
    • ಈ ಬಗ್ಗೆ ಸ್ವತಃ ಬಿಸಿಸಿಐ ಮಾಹಿತಿ ನೀಡಿದೆ
IND vs SA: ಟೀಂ ಇಂಡಿಯಾಗೆ ಭಾರೀ ಆಘಾತ: ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಬಿದ್ದ ಆಲ್ ರೌಂಡರ್!  title=
Deepak Hooda

ದಕ್ಷಿಣ ಆಫ್ರಿಕಾ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ತಂಡದ ಸ್ಟಾರ್ ಆಲ್ ರೌಂಡರ್ ಗಾಯದ ಕಾರಣದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಈ ಆಟಗಾರ ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾದ ಭಾಗವಾಗಿದ್ದಾರೆ. ಈ ಕೆಟ್ಟ ಸುದ್ದಿ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದೆ. ಈ ಆಟಗಾರ ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: ಅಯ್ಯಯ್ಯೋ…ಇಂಗ್ಲೆಂಡ್ ನಲ್ಲಿ ಕಳ್ಳತನವಾಯ್ತು ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಬ್ಯಾಗ್, ನಗದು!

ಟೀಂ ಇಂಡಿಯಾಗೆ ದೊಡ್ಡ ಹೊಡೆತ

ಟೀಂ ಇಂಡಿಯಾದ ಸ್ಫೋಟಕ ಆಲ್‌ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ. ದೀಪಕ್ ಹೂಡಾ ಇತ್ತೀಚೆಗೆ ಬೆನ್ನುನೋವಿಗೆ ಒಳಗಾಗಿದ್ದರು. ಈ ಬಗ್ಗೆ ಸ್ವತಃ ಬಿಸಿಸಿಐ ಮಾಹಿತಿ ನೀಡಿದೆ. ದೀಪಕ್ ಹೂಡಾ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ 20 ಸರಣಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು, ಆದರೆ ಅವರು ಪಂದ್ಯದ ಪ್ಲೇಯಿಂಗ್ 11 ಭಾಗವಾಗಲು ಸಾಧ್ಯವಾಗಲಿಲ್ಲ. ಟಿ20 ವಿಶ್ವಕಪ್‌ಗಾಗಿ ಭಾರತದ 15 ಜನರ ತಂಡದಲ್ಲಿ ದೀಪಕ್ ಹೂಡಾ ಅವರನ್ನು ಸೇರಿಸಲಾಗಿದೆ.

ದೀಪಕ್ ಹೂಡಾ ಬದಲಿಗೆ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಶ್ರೇಯಸ್ ಅಯ್ಯರ್ ತಮ್ಮ ಬಲಿಷ್ಠ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಶ್ರೇಯಸ್ ಅಯ್ಯರ್ ತಮ್ಮ ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ 7 ಆಗಸ್ಟ್ 2022 ರಂದು ಆಡಿದ್ದರು. ಶ್ರೇಯಸ್ ಅಯ್ಯರ್ ಇದುವರೆಗೆ ಟೀಂ ಇಂಡಿಯಾ ಪರ 5 ಟೆಸ್ಟ್ ಪಂದ್ಯಗಳು, 30 ODIಗಳು ಮತ್ತು 46 T20 ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ: Jasprit Bumrah: ಸಿಕ್ಸರ್ & ಬೌಂಡರಿ ಮೇಲಿನ ಕೋಪ ನಿಯಂತ್ರಿಸಿದ ಜಸ್ಪ್ರೀತ್ ಬುಮ್ರಾ!

ದೀಪಕ್ ಹೂಡಾ ಗಾಯಗೊಂಡಿರುವುದು ಟೀಂ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀಪಕ್ ಹೂಡಾ ಕಡಿಮೆ ವೃತ್ತಿಜೀವನದಲ್ಲಿ ಟೀಮ್ ಇಂಡಿಯಾದಲ್ಲಿ ವಿಭಿನ್ನ ಸ್ಥಾನವನ್ನು ಗಳಿಸಿದ್ದಾರೆ. ದೀಪಕ್ ಹೂಡಾ ಇದುವರೆಗೆ ಟೀಂ ಇಂಡಿಯಾ ಪರ 8 ಏಕದಿನ ಪಂದ್ಯಗಳಲ್ಲಿ 28.2 ಸರಾಸರಿಯಲ್ಲಿ 141 ರನ್ ಗಳಿಸಿದ್ದರೆ, 12 ಟಿ20 ಪಂದ್ಯಗಳಲ್ಲಿ 41.86 ಸರಾಸರಿಯಲ್ಲಿ 293 ರನ್ ಗಳಿಸಿದ್ದಾರೆ. ಇದರಲ್ಲಿ ಶತಕವೂ ಸೇರಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News