MS Dhoni Long Hair Look: ಈ ಬಾರಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2024 ರಲ್ಲಿ ಉದ್ದನೆಯ ಕೂದಲಿನೊಂದಿಗೆ ಕಣಕ್ಕಿಳಿದಿದ್ದಾರೆ. ಈ ಲುಕ್ ನೋಡಿದ ಅಭಿಮಾನಿಗಳು, ಧೋನಿ ನಿವೃತ್ತಿ ನೀಡುವ ಮುನ್ಸೂಚನೆ ನೀಡುತ್ತಿದ್ದಾರಾ? ಎಂದು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಕಾರಣ ವೃತ್ತಿ ಆರಂಭದಲ್ಲೂ ಲಾಂಗ್ ಹೇರ್ ಲುಕ್’ನಲ್ಲಿ ಕಾಣಿಸಿಕೊಂಡಿದ್ದ ಮಾಹಿ, ಇದೀಗ ಮತ್ತೆ ಹಳೆ ಲುಕ್’ನಲ್ಲಿ ಮೈದಾನದಲ್ಲಿ ಕಾಣಿಸಿಕೊಂಡಿರುವುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶ್ರೇಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿ: ಯಾವೊಬ್ಬ ಭಾರತೀಯನೂ ಮಾಡಿರದ ವಿಶೇಷ ರೆಕಾರ್ಡ್ ಅದು…!


42 ವರ್ಷದ ಧೋನಿ ಉದ್ದ ಕೂದಲಿನ ಈ ಟ್ರೆಂಡಿ ಲುಕ್’ನಲ್ಲಿ ಮತ್ತಷ್ಟು ಫಿಟ್ ಆಗಿ ಕಾಣುತ್ತಿದ್ದಾರೆ. ಅವರ ಅನೇಕ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.


ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನ ಎಬಿ ಡಿವಿಲಿಯರ್ಸ್ ಕರೆಯೋದು ಹೀಗೆ… ಎಷ್ಟೊಂದು ಮುದ್ದಾಗಿದೆ ನೋಡಿ ಈ ಅಡ್ಡಹೆಸರು!


ಕಳೆದ ಋತುವಿನಲ್ಲಿ (ಐಪಿಎಲ್ 2023) ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿ ಗೆದ್ದಿತ್ತು. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಚೆನ್ನೈ ತಂಡ ಅಂದಿನ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತ್ತು. ರವೀಂದ್ರ ಜಡೇಜಾ ತಂಡಕ್ಕೆ ಗೆಲುವಿನ ಬೌಂಡರಿ ಬಾರಿಸಿದ್ದರು. 2023 ರಲ್ಲಿ, ಧೋನಿ ನಾಯಕತ್ವದಲ್ಲಿ CSK ಐದನೇ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಅಂದಹಾಗೆ ಚೆನ್ನೈ ಮೊದಲ ಬಾರಿಗೆ 2010 ರಲ್ಲಿ ಧೋನಿ ನಾಯಕತ್ವದಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ