Dinesh Karthik : ಟೀಂ ಇಂಡಿಯಾ ಮುಂದೆ ಇದ್ದಕ್ಕಿದ್ದಂತೆ ಈ ಬೇಡಿಕೆ ಇಟ್ಟ ದಿನೇಶ್ ಕಾರ್ತಿಕ್!
Dinesh Karthik : ಕಳೆದ ದಶಕದಿಂದ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ನಂಬರ್-3 ಸ್ಟಾರ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ. ಭಾರತ ತಂಡಕ್ಕೆ ಸ್ವಂತ ಬಲದಿಂದ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಅವರು ಯಾವುದೇ ಬೌಲಿಂಗ್ ದಾಳಿಯನ್ನು ಪುಡಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.
Dinesh Karthik : ಕಳೆದ ದಶಕದಿಂದ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ನಂಬರ್-3 ಸ್ಟಾರ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ. ಭಾರತ ತಂಡಕ್ಕೆ ಸ್ವಂತ ಬಲದಿಂದ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಅವರು ಯಾವುದೇ ಬೌಲಿಂಗ್ ದಾಳಿಯನ್ನು ಪುಡಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ನ್ಯೂಜಿಲೆಂಡ್ ವಿರುದ್ಧದ ಈ ಜವಾಬ್ದಾರಿಯನ್ನು ರಾಹುಲ್ ತ್ರಿಪಾಠಿ ವಹಿಸಿಕೊಂಡರು, ಆದರೆ ಕಿವೀ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಖಾತೆ ತೆರೆಯಲು ಅವರಿಗೆ ಸಾಧ್ಯವಾಗಲಿಲ್ಲ. ಇದೀಗ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮೂರನೇ ಕ್ರಮಾಂಕದಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ನೀಡುವ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ದಿನೇಶ್ ಕಾರ್ತಿಕ್ ಈ ಹೇಳಿದ್ದು ಹೀಗೆ
ಈ ಬಗ್ಗೆ ಮಾತನಾಡಿರುವ ದಿನೇಶ್ ಕಾರ್ತಿಕ್, ಭಾರತ ತಂಡವು ದೀಪಕ್ ಹೂಡಾ ಅವರನ್ನು ಮೊದಲು ಕಳುಹಿಸುವ ಮೂಲಕ ಅವರ ಲಾಭವನ್ನು ಪಡೆದುಕೊಳ್ಳಬೇಕು, ದೀಪಕ್ ಟಿ 20 ನಲ್ಲಿ ನಂಬರ್ -3 ನಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸಬಹುದು. ಅವರನ್ನು ಬ್ಯಾಟಿಂಗ್‌ಗೆ ಕಳುಹಿಸಬೇಕು. ಅವರು ಐಪಿಎಲ್‌ನಲ್ಲಿ 3 ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರನ್ನು ಫಿನಿಶರ್ ಆಗಿ ಪ್ರಯತ್ನಿಸಬಹುದು, ಆದರೆ ಅವರು ಅಗ್ರ ಕ್ರಮಾಂಕದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು.
ಇದನ್ನೂ ಓದಿ : Sourav Ganguly : ಏಕದಿನ ವಿಶ್ವಕಪ್ ಗೆಲ್ಲಬೇಕಾದರೆ ಈ ಕೆಲಸ ಮಾಡಬೇಕು : ರೋಹಿತ್‌ಗೆ ಗಂಗೂಲಿ ಸಲಹೆ
ಪ್ಲೇಯಿಂಗ್ XI ಬದಲಾವಣೆ ಕುರಿತು ಮಾತನಾಡಿದ ದಿನೇಶ್ ಕಾರ್ತಿಕ್, ಜಿತೇಶ್ ಶರ್ಮಾಗೆ 6ನೇ ಕ್ರಮಾಂಕದಲ್ಲಿ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ಅವರು ಸ್ಫೋಟಕ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿರುವ ಆಟಗಾರ. ಜಿತೇಶ್ ಶರ್ಮಾ ಐಪಿಎಲ್‌ನಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಅನೇಕ ಪಂದ್ಯಗಳನ್ನು ಸ್ವಂತವಾಗಿ ಗೆದ್ದಿದ್ದಾರೆ.
ಟೀಂ ಇಂಡಿಯಾ ಸರಣಿಯಲ್ಲಿ ಹಿಂದೆ ಬಿದ್ದಿದೆ
ನ್ಯೂಜಿಲೆಂಡ್ ವಿರುದ್ಧದ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 21 ರನ್‌ಗಳಿಂದ ಸೋಲನುಭವಿಸಿತ್ತು. ಭಾರತದ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಅತ್ಯಂತ ಕಳಪೆ ಆಟ ಪ್ರದರ್ಶಿಸಿದರು. ಈ ಕಾರಣದಿಂದ ಟೀಂ ಇಂಡಿಯಾ ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆ ಕಂಡಿದೆ. ಎರಡನೇ ಟಿ20 ಪಂದ್ಯ ಜನವರಿ 29 ರಂದು ಲಕ್ನೋದ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರ ಕ್ರಮಾಂಕ ಉತ್ತಮ ಪ್ರದರ್ಶನ ನೀಡಬೇಕಿದೆ.
ಇದನ್ನೂ ಓದಿ : IND vs NZ: 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲು ಈ 3 ಆಟಗಾರರು ಬಹಳ ಮುಖ್ಯ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.