Disney + Hotstar: ಡಿಸ್ನಿ+ ಹಾಟ್ ಸ್ಟಾರ್ ಮುಂಬರುವ ICC ಏಕದಿನ ವರ್ಲ್ಡ್ ಕಪ್ 2023 ಪ್ರಸಾರ ಮಾಡಲಿದ್ದು, ಈ ಸಂದರ್ಭವನ್ನು ಲಾಭವನ್ನಾಗಿ ಪರಿವರ್ತಿಸಲು ಮುಂದಾಗಿದೆ. ಭಾರತದಲ್ಲಿ ಅಕ್ಟೋಬರ್ 5 ರಿಂದ ನವೆಂಬರ್ 19ರವರೆಗೆ ಏಕದಿನ ವಿಶ್ವಕಪ್ ನಡೆಯಲಿದ್ದು, ಇದರಲ್ಲಿ ಅತೀ ಹೆಚ್ಚು ರೋಚಕತೆ ಸೃಷ್ಟಿಸಿರುವುದು ಭಾರತ ಪಾಕಿಸ್ತಾನ ಪಂದ್ಯ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs PAK: ಭಾರತ-ಪಾಕ್ ವಿಶ್ವಕಪ್ ಪಂದ್ಯದ ದಿನಾಂಕ ಬದಲಾವಣೆ! ಈ ದಿನದಂದು ನಡೆಯಲಿದೆ ಐತಿಹಾಸಿಕ ಮ್ಯಾಚ್


ಹಲವಾರು ಜಾಹೀರಾತು ಏಜೆನ್ಸಿಗಳು ಈಗಾಗಲೇ ಡಿಸ್ನಿ ಸ್ಟಾರ್ ಬ್ರಾಡ್‌ ಕಾಸ್ಟರ್‌ ನ ಪ್ರೈಸ್ ಕಾರ್ಡ್’ಗಳನ್ನು ಪಡೆದುಕೊಂಡಿವೆ. ಇನ್ನು ಆರಂಭಿಕ ದಿನದಲ್ಲಿ ಇಂಡೋ-ಪಾಕ್ ಪಂದ್ಯ ವೇಳೆ ಪ್ರತಿ 10 ಸೆಕೆಂಡ್​ ಗೆ 17 ರಿಂದ 18 ಲಕ್ಷಕ್ಕೆ ದರವನ್ನು ನಿಗದಿ ಮಾಡಲಾಗಿತ್ತು. ಆದರೆ ಈಗ ಪಂದ್ಯದ ಬೇಡಿಕೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ಕಾರಣ, ಇದನ್ನೇ ಬಂಡವಾಳವಾಗಿರಿಸಿಕೊಂಡ ಸಂಸ್ಥೆ ದರ ಹೆಚ್ಚಳ ಮಾಡಿದೆ.


ಪಂದ್ಯದ ದಿನಾಂಕ ಬದಲಾವಣೆ:


ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಜನರು ನೋಡಲು ಕಾತುರದಿಂದ ಕಾಯುತ್ತಿರುತ್ತಾರೆ. ಸದ್ಯ ಈ ಬಾರಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ದಿನಾಂಕವನ್ನು ಮರು ನಿಗದಿಪಡಿಸುವ ಸಾಧ್ಯತೆ ಇದೆ. ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಭಾರತ ಮತ್ತು ಪಾಕಿಸ್ತಾನ ತಮ್ಮ ಮೊದಲ ಪಂದ್ಯವನ್ನು ಅಕ್ಟೋಬರ್ 6 ಮತ್ತು 8 ರಂದು ಆಡಲಿವೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನ ಮೊದಲ ಪಂದ್ಯವನ್ನು ಆಡಲಿದೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತದ ಮೊದಲ ಪಂದ್ಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ.


ಈ ಬಾರಿ ವಿಶ್ವಕಪ್ ಮಹಾ ಪಂದ್ಯ ಭಾರತದಲ್ಲಿ ನಡೆಯುತ್ತಿದೆ. 46 ದಿನಗಳಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಆದರೆ ಭಾರತ-ಪಾಕಿಸ್ತಾನ ಪಂದ್ಯವನ್ನು ಮರು ನಿಗದಿಪಡಿಸುವ ಹೆಚ್ಚಿನ ಸಾಧ್ಯತೆಗಳಿವೆ. ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಎರಡೂ ತಂಡಗಳು ಅಕ್ಟೋಬರ್ 15 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲಿವೆ.


ಇದನ್ನೂ ಓದಿ: ವಿಂಡೀಸ್ ವಿರುದ್ಧದ ಮೊದಲ ODIಗೆ ಬೆಸ್ಟ್ ಪ್ಲೇಯಿಂಗ್ 11 ಸೂಚಿಸಿದ ವಾಸಿಂ ಜಾಫರ್: ಘಟಾನುಘಟಿಗಳಿಗಿಲ್ಲ ಸ್ಥಾನ!


ಮಾಧ್ಯಮ ವರದಿಯ ಪ್ರಕಾರ, ನವರಾತ್ರಿಯ ಮೊದಲ ದಿನದಂದು ಗುಜರಾತ್‌ ನಲ್ಲಿ ಅತಿದೊಡ್ಡ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ಹಬ್ಬದಲ್ಲಿ ರಾಜ್ಯದೆಲ್ಲೆಡೆಯಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗರ್ಬಾ ಆಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ. ಹೀಗಿರುವಾಗ ಭದ್ರತಾ ಏಜೆನ್ಸಿಗಳು ಪಂದ್ಯವನ್ನು ಮರು ನಿಗದಿಪಡಿಸುವಂತೆ ಬಿಸಿಸಿಐಗೆ ಸಲಹೆ ನೀಡಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ