ಭಾರತ ಮತ್ತು ಇಂಗ್ಲೆಂಡ್ ನಡುವೆ 3ನೇ ಟಿ20 ಸರಣಿ ನಡೆಯಲಿದ್ದು, ಕ್ಲೀನ್‌ ಸ್ವೀಪ್‌ ಮಾಡಲು ರೋಹಿತ್‌ ಶರ್ಮಾ ಭರ್ಜರಿ ಪ್ಲ್ಯಾನ್‌ ಮಾಡಿದ್ದಾರೆ. ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಅಬ್ಬರದ ಶೈಲಿಯಲ್ಲಿ ಗೆದ್ದುಕೊಂಡಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 50 ರನ್ ಹಾಗೂ ಎರಡನೇ ಟಿ20 ಪಂದ್ಯದಲ್ಲಿ 49 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಇಂದು ನಡೆಯಲಿರುವ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಕ್ಲೀನ್‌ ಸ್ವೀಪ್‌ ಮಾಡುವ ಎಲ್ಲಾ ಸಿದ್ಧತೆ ನಡೆಸುತ್ತಿದೆ.  ಅಷ್ಟೇ ಅಲ್ಲದೆ ಇದಕ್ಕಾಗಿ ನಾಯಕ ರೋಹಿತ್ ಶರ್ಮಾ ಸಖತ್‌ ಪ್ಲ್ಯಾನ್‌ ರೂಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೇಶದಲ್ಲಿ ವೇಗವಾಗಿ ಹರಡುತ್ತಿದೆ ಕೊರೊನಾ: ದೆಹಲಿಯಲ್ಲಿ ಹೊಸ ರೂಪಾಂತರಿ ಪತ್ತೆ!


ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್, ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಅವರು ಯಶಸ್ವಿಯಾಗಿ ಬ್ಯಾಟಿಂಗ್‌ ಮಾಡಲು ಸಾಧ್ಯವಾಗಿಲ್ಲ. ಎರಡನೇ ಟಿ 20 ಪಂದ್ಯದಲ್ಲಿ, ರಿಷಬ್ ಪಂತ್, ರೋಹಿತ್ ಜೊತೆ ಆರಂಭಿಕ ಪಾಲುದಾರರಾಗಿ ಅಂಗಣಕ್ಕಿಳಿದರು. ಅವರೂ ಸಹ ನಿರೀಕ್ಷೆಗೆ ತಕ್ಕಂತೆ ಆಟವಾಡಿಲ್ಲ. ಈ ಹಿನ್ನೆಲೆಯಲ್ಲಿ ದೀಪಕ್ ಹೂಡಾರನ್ನು ಆರಂಭಿಕ ಪಾರ್ಟ್ನರ್‌ ಆಗಿ ಮೈದಾನಕ್ಕೆ ಇಳಿಸುವ ಸಾಧ್ಯತೆಯಿದೆ. ಇನ್ನು ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿ ಇಳಿಯುವುದು ಖಚಿತವಾಗಿದೆ.


ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆ ಸಾಧ್ಯತೆ: 
ನಾಲ್ಕನೇ ಕ್ರಮಾಂಕದಲ್ಲಿ ಮಾರಕ ಆಟಗಾರ ಶ್ರೇಯಸ್ ಅಯ್ಯರ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಬಾಲ್‌ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಭುತ ಆಟ ಪ್ರದರ್ಶಿಸುತ್ತಿರುವ ಹಾರ್ದಿಕ್‌ ಪಾಂಡ್ಯ, ಐದನೇ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ದಿನೇಶ್ ಕಾರ್ತಿಕ್ ಆರನೇ ಕ್ರಮಾಂಕಕ್ಕೆ ಅವಕಾಶ ಪಡೆಯುವ ಸಾಧ್ಯತೆಯಿದೆ. 


ಇಂಗ್ಲೆಂಡ್ ವಿರುದ್ಧದ ಎರಡೂ ಟಿ20 ಪಂದ್ಯಗಳಲ್ಲಿ ಭಾರತದ ಬೌಲರ್‌ಗಳು ಅದ್ಭುತ ಆಟ ಪ್ರದರ್ಶಿಸಿದ್ದಾರೆ. ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ವೇಗದ ಬೌಲಿಂಗ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇನ್ನು ರವೀಂದ್ರ ಜಡೇಜಾ ಎರಡನೇ ಟಿ 20 ಪಂದ್ಯದಲ್ಲಿ 46 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ. 


ಇದನ್ನೂ ಓದಿ: ಧುಮ್ಮುಕ್ಕಿ ಹರಿಯುತ್ತಿದೆ ಗೋಕಾಕ್‌ ಫಾಲ್ಸ್‌: ಜನಮನ ಸೆಳೆಯುತ್ತಿದೆ ಜಲಪಾತದ ವೈಯಾರ


ಮೂರನೇ ಟಿ20 ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI:


ರೋಹಿತ್ ಶರ್ಮಾ (ನಾಯಕ), ದೀಪಕ್ ಹೂಡಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ