Virat Kohli Fan: ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು 317 ರನ್ಗಳಿಂದ ಸೋಲಿಸಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಶುಭಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತ್ತು. ಈ ಪಂದ್ಯದಲ್ಲಿ ಅಭಿಮಾನಿಯೊಬ್ಬರು ಕೊಹ್ಲಿಯನ್ನು ಭೇಟಿ ಮಾಡಲು ಮೈದಾನಕ್ಕೆ ಪ್ರವೇಶಿಸಿದ್ದರು.
ಇದನ್ನೂ ಓದಿ: Team India: ಟೀಂ ಇಂಡಿಯಾಗೆ ಸಿಕ್ಕೇ ಬಿಟ್ರು ಮತ್ತೊಬ್ಬ ಸೆಹ್ವಾಗ್: ಸಂತಸದಲ್ಲಿ ರೋಹಿತ್ ಪಡೆ
ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಆಟಗಾರರೆಂದು ಪರಿಗಣಿಸಲ್ಪಟ್ಟಿದ್ದಾರೆ. ಟೀಂ ಇಂಡಿಯಾ ಪರ ಕೆಲವು ಪಂದ್ಯಗಳನ್ನು ಸ್ವಂತ ಬಲದಿಂದ ಗೆದ್ದಿದ್ದಾರೆ. ಇದನ್ನು ನೋಡಿಯೇ ಅಭಿಮಾನಿಗಳಲ್ಲಿ ಅವರ ಕ್ರೇಜ್ ಹುಟ್ಟಿಕೊಂಡಿದೆ. ಅವರ ದರ್ಶನ ಪಡೆಯಲು ಕ್ರಿಕೆಟ್ ಪ್ರೇಮಿಗಳು ಕಾಯುತ್ತಿರುತ್ತಾರೆ. ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಇದೇ ರೀತಿಯ ಘಟನೆಯೊಂದು ಕಂಡುಬಂದಿದೆ.
A fan invaded the field and touched Virat Kohli's feet. pic.twitter.com/wCwHtP2H3L
— Shitheesh Unnikrishnan 🏏 (@shitheesh) January 15, 2023
ಶ್ರೀಲಂಕಾ ಇನ್ನಿಂಗ್ಸ್ ವೇಳೆ ಅಭಿಮಾನಿಯೊಬ್ಬ ಕೊಹ್ಲಿಯನ್ನು ಭೇಟಿಯಾಗಲು ಮೈದಾನಕ್ಕೆ ಪ್ರವೇಶಿಸಿದ್ದಾನೆ. ಬಳಿಕ ಈ ಅಭಿಮಾನಿ ವಿರಾಟ್ ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ್ದಾನೆ. ಆಗ ಅಭಿಮಾನಿಯ ಮೊಬೈಲ್ ನಲ್ಲಿ ಸೂರ್ಯಕುಮಾರ್ ಯಾದವ್ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ನಂತರ ಭದ್ರತಾ ಸಿಬ್ಬಂದಿ ಈತನನ್ನು ಮೈದಾನದಿಂದ ಹೊರ ಕಳುಹಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಮಾಡಿ ಮೈದಾನದಾದ್ಯಂತ ಅಬ್ಬರ ಸೃಷ್ಟಿಸಿದ್ದರು. ಇವರ ಬ್ಯಾಟಿಂಗ್ ನೋಡಿ ಎದುರಾಳಿ ಬೌಲರ್ ಗಳು ಶಾಕ್ ಆಗಿದ್ದರು. 110 ಎಸೆತಗಳಲ್ಲಿ 8 ದೀರ್ಘ ಸಿಕ್ಸರ್ಗಳನ್ನು ಒಳಗೊಂಡಂತೆ 166 ರನ್ ಬಾರಿಸಿದ್ದಾರೆ. ಇವರಿಂದಾಗಿಯೇ ಟೀಂ ಇಂಡಿಯಾ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಇದನ್ನೂ ಓದಿ: Virat Kohli : ಜನವರಿ 15ನ್ನು ʼವಿರಾಟ್ ಕೊಹ್ಲಿ ದಿನʼ ಎಂದು ಘೋಷಣೆ...!
ಸರಣಿಯಲ್ಲಿ ಕ್ಲೀನ್ ಸ್ವೀಪ್:
ಶ್ರೀಲಂಕಾ ವಿರುದ್ಧದ ಮೂರು ಏಕದಿನ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಶ್ರೀಲಂಕಾ ವಿರುದ್ಧ ಭಾರತ ಏಕದಿನ ಇತಿಹಾಸದಲ್ಲೇ ಅತಿ ದೊಡ್ಡ ಗೆಲುವು ದಾಖಲಿಸಿದೆ. ಭಾರತ 317 ರನ್ಗಳ ಜಯ ಸಾಧಿಸಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತದ ಯುವ ಆಟಗಾರರು ಉತ್ತಮ ಆಟ ಪ್ರದರ್ಶಿಸಿದ್ದಾರೆ. ಶುಭಮನ್ ಗಿಲ್, ಉಮ್ರಾನ್ ಮಲಿಕ್ ಮತ್ತು ಮೊಹಮ್ಮದ್ ಸಿರಾಜ್ ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.