ನವದೆಹಲಿ: ವಿರಾಟ್ ಕೊಹ್ಲಿ ಅಂತೂ ಇಂತು ತಮ್ಮ ಎಂದಿನ ಬ್ಯಾಟಿಂಗ್ ಲಯಕ್ಕೆ ಮರಳಿದ್ದಾರೆ. ಅಚ್ಚರಿ ಎಂದರೆ ಅವರು ತಮ್ಮ ಟಿ20 ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಒಟ್ಟಾರೆಯಾಗಿ 71 ಮತ್ತು 72 ಶತಕವನ್ನು ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದಲ್ಲಿಯೇ ಸಿಡಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.
ಒಂದೆಡೆಗೆ ಸ್ವತಃ ಕೆ.ಎಲ್.ರಾಹುಲ್ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದರೆ ಇಶಾನ್ ಕಿಶನ್ ಜೊತೆಗೂಡಿದ ವಿರಾಟ್ ಕೊಹ್ಲಿ ಭರ್ಜರಿ 113 ರನ್ ಗಳನ್ನು ಗಳಿಸುವ ಮೂಲಕ ತಮ್ಮ ಶತಕದ ಬರವನ್ನು ನಿಗಿಸಿದ್ದಾರೆ. ಅಷ್ಟೇ ಅಲ್ಲದೆ ಇಶಾನ್ ಕಿಶನ್ ಅವರ ಜೊತೆ ದಾಖಲೆಯ 290 ರನ್ ಗಳ ಜೊತೆಯಾಟವಾಡಿದ್ದಾರೆ.
Virat Kohli's last 2 Hundred has come under KL Rahul's Captaincy.
71st Century vs Afg 🇦🇫
72nd Century vs Ban 🇧🇩Via: @iShivani_Shukla#ViratKohli𓃵 #BANvIND #indvban #INDvsBAN #viratkohli #RohitSharma #rohitsharma264 #ishankishan #CricketTwitter #cricket pic.twitter.com/k8432uxmsz
— Top Edge Cricket (@topedge_cricket) December 10, 2022
ಮೂಲಕ ಬಾಂಗ್ಲಾದೇಶದ ವಿರುದ್ಧದ ಅಂತಿಮ ಪಂದ್ಯದಲ್ಲಿ ಭರ್ಜರಿ 113 ರನ್ ಗಳನ್ನು ಗಳಿಸುವ ಮೂಲಕ ತಮ್ಮ ಶತಕದ ಬರವನ್ನು ನಿಗಿಸಿದ್ದಾರೆ.ಅಷ್ಟೇ ಅಲ್ಲದೆ ರಿಕ್ಕಿ ಪಾಂಟಿಂಗ್ ಅವರ ಒಟ್ಟು 71 ಶತಕಗಳ ದಾಖಲೆಯನ್ನು ಮುರಿಯುವ ಮೂಲಕ ಈಗ ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಶತಕಗಳನ್ನು ದಾಖಲಿಸಿದ ವಿಶ್ವದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿಶೇಷವೆಂದರೆ ವಿರಾಟ್ ಕೊಹ್ಲಿ ತಮ್ಮ 71ನೇ ಶತಕವನ್ನು ಅಫ್ಘಾನಿಸ್ತಾನದ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ದಾಖಲಿಸಿದ್ದರು.ಆಗಲೂ ಕೂಡ ಕೆ.ಎಲ್ ರಾಹುಲ್ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡಿದ್ದರು.
ಒಟ್ಟಾರೆ ಏನೇ ಹೇಳಿ,ಶತಕದ ಬರವನ್ನು ಅನುಭವಿಸಿದ್ದ ಕಿಂಗ್ ಕೊಹ್ಲಿಗೆ ಕನ್ನಡಿಗ ನಾಯಕತ್ವ ಒಂದು ರೀತಿಯಲ್ಲಿ ಅದೃಷ್ಟವಾಗಿ ಪರಿಣಮಿಸಿದೆ ಎಂದು ಹೇಳಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.