Arjun Tendulkar gets bitten by Dog: ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಮತ್ತು ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರಿಗೆ ನಾಯಿ ಕಚ್ಚಿದೆಯಂತೆ. ಈ ಅವಘಡದಿಂದಾಗಿ ಅರ್ಜುನ್ ತೆಂಡೂಲ್ಕರ್ ಅವರ ಕ್ರಿಕೆಟ್ ಜೀವನ ಸ್ವಲ್ಪದರಲ್ಲೇ ಪಾರಾಗಿದೆ.
ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಮಾಡುವ ಕೈಗೆ ನಾಯಿ ಕಚ್ಚಿದೆ. ಆದರೆ ಗಾಯ ಹೆಚ್ಚಾಗಿದ್ದರೆ, ಅರ್ಜುನ್ ತೆಂಡೂಲ್ಕರ್ ಅವರ ಕ್ರಿಕೆಟ್ ವೃತ್ತಿಜೀವನವೇ ಕೊನೆಗೊಳ್ಳುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ.
ಇದನ್ನೂ ಓದಿ: ಜಡೇಜಾ ರೀತಿಯೇ Team Indiaದ ಸರ್ವಶ್ರೇಷ್ಠ ಆಟಗಾರನೀತ! ಆದ್ರೆ ವೃತ್ತಿಜೀವನ ಅಂತ್ಯಗೊಳಿಸಿದ್ದು ಅಕ್ಷರ್ ಪಟೇಲ್!
ಅರ್ಜುನ್ ತೆಂಡೂಲ್ಕರ್ ಎಡಗೈ ಬೌಲರ್. ನಾಯಿ ಈ ಕೈಯ ಬೆರಳುಗಳಿಗೆ ಕಚ್ಚಿದೆ. ಕೈ ಗಾಯದ ಕಾರಣ ಅರ್ಜುನ್ ತೆಂಡೂಲ್ಕರ್ ಪ್ರಸ್ತುತ ಬೌಲಿಂಗ್ ಮಾಡಲು ಯೋಗ್ಯವಾಗಿಲ್ಲ. ಹೀಗಾಗಿ ಇಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ಟ್ವಿಟ್ಟರ್ ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅರ್ಜುನ್ ತೆಂಡೂಲ್ಕರ್ ಲಕ್ನೋ ಸೂಪರ್ ಜೈಂಟ್ಸ್ ಆಟಗಾರರಾದ ಯುಧವೀರ್ ಸಿಂಗ್ ಚರಕ್ ಮತ್ತು ಮೊಹ್ಸಿನ್ ಖಾನ್ ಅವರನ್ನು ಭೇಟಿಯಾಗುತ್ತಾ ಈ ಬಗ್ಗೆ ಹೇಳುತ್ತಿದ್ದಾರೆ.
Mumbai se aaya humara dost. 🤝💙 pic.twitter.com/6DlwSRKsNt
— Lucknow Super Giants (@LucknowIPL) May 15, 2023
ಇಂದು ಮುಂಬೈ ಇಂಡಿಯನ್ಸ್ ತಂಡ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಐಪಿಎಲ್ ಪಂದ್ಯವನ್ನು ಆಡಲಿದೆ. ಮುಂಬೈ ಇಂಡಿಯನ್ ತಂಡ ಹಯಾತ್ ಹೋಟೆಲ್ ನಲ್ಲಿ ತಂಗಿದೆ. ಸಾಮಾನ್ಯವಾಗಿ ತಂಡದ ಆಟಗಾರರು ಹೋಟೆಲ್ ನಿಂದ ನೇರವಾಗಿ ಕ್ರೀಡಾಂಗಣಕ್ಕೆ ಬರುತ್ತಾರೆ. ಹೀಗಿರುವಾಗ ಅರ್ಜುನ್ ತೆಂಡೂಲ್ಕರ್ ಅವರಿಗೆ ಎಲ್ಲಿ ನಾಯಿ ಕಚ್ಚಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಾಕು ನಾಯಿಯೊಂದಿಗೆ ಆಟವಾಡುವಾಗ ಅರ್ಜುನ್‌ಗೆ ಕಚ್ಚಿದೆ ಎಂದು ಕೆಲವು ಮೂಲಗಳು ಹೇಳುತ್ತಿದೆ.
ಟೂರ್ನಮೆಂಟ್ ನ ಕೊನೆಯ ಹಂತದಲ್ಲಿ ಫಾರ್ಮ್ ಗೆ ಮರಳಿರುವ ಮುಂಬೈ ಇಂಡಿಯನ್ಸ್ ಇಂದು ಮಹತ್ವದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದ್ದು, ಈ ವೇಗವನ್ನು ಕಾಯ್ದುಕೊಳ್ಳುವ ಮೂಲಕ ಪ್ಲೇಆಫ್ ಗೆ ಎಂಟ್ರಿ ಪಡೆಯಲು ಕಾತುರದಿಂದ ಕಾಯುತ್ತಿದೆ.
ಮುಂಬೈ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಲಕ್ನೋ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಒಂದು ಅಂಕ ಕಡಿಮೆಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಇದನ್ನೂ ಓದಿ: Cricket: ಕ್ರಿಕೆಟ್ ಫ್ಯಾನ್ಸ್’ಗೆ ಆಘಾತಕಾರಿ ಸುದ್ದಿ! ಗಾಯದ ಕಾರಣ ಈ ಆಟಗಾರ ತಂಡದಿಂದ ಔಟ್
ಇನ್ನೂ ಎಂಟು ತಂಡಗಳು ರೇಸ್ ನಲ್ಲಿ ಇರುವುದರಿಂದ ಎರಡೂ ತಂಡಗಳು ಗೆಲುವಿನೊಂದಿಗೆ ಪ್ಲೇಆಫ್ ನತ್ತ ಮುಂದಿನ ಹೆಜ್ಜೆ ಇಡಲು ಪ್ರಯತ್ನಿಸುತ್ತವೆ. ಸೂರ್ಯಕುಮಾರ್ ಯಾದವ್ ಮುಂಬೈಗೆ ಪ್ರಚಂಡ ಫಾರ್ಮ್ ನಲ್ಲಿ ಮರಳಿದ್ದು, ಕಳೆದ ಎರಡು ಪಂದ್ಯಗಳನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಶರ್ಮಾ ಗುಜರಾತ್ ಟೈಟಾನ್ಸ್ ವಿರುದ್ಧವೂ ಲಯ ಕಂಡುಕೊಂಡಿದ್ದಾರೆ. ಈಗ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ದೊಡ್ಡ ಇನ್ನಿಂಗ್ಸ್ ಆಡಲು ಕಾಯುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l