Tokyo Olympics 2020: ಮೀರಾಬಾಯಿ ಚಾನುಗೆ ಜೀವನಪೂರ್ತಿ ಉಚಿತ ಪಿಜ್ಜಾ ಘೋಷಿಸಿದ ಡೊಮಿನೊಸ್
ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನುಗೆ ಜೀವನಪೂರ್ತಿ ಉಚಿತ ಪಿಜ್ಜಾ
ನವದೆಹಲಿ: ಟೋಕಿಯೊ ಒಲಂಪಿಕ್ಸ್ ಕ್ರೀಟಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಸೈಖೋಮ್ ಮೀರಾಬಾಯಿ ಚಾನುಗೆ ಜೀವನಪೂರ್ತಿ ಉಚಿತವಾಗಿ ಪಿಜ್ಜಾ ನೀಡುವುದಾಗಿ ಡೊಮಿನೊಸ್ ಇಂಡಿಯಾ ಘೋಷಿಸಿದೆ.
ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ವೇಟ್ ಲಿಫ್ಟರ್ ಮೀರಾಬಾಯಿ ಚಾನು(Mirabai Chanu) ಬೆಳ್ಳಿ ಪದಕ ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದರು. ಬಳಿಕ ನಡೆದ ಸಂದರ್ಶನವೊಂದರಲ್ಲಿ ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಮ್ಮೆ ತಂದಿರುವ ನೀವು ಭಾರತಕ್ಕೆ ಮರಳಿದ ಬಳಿಕ ಮಾಡುವ ಮೊದಲ ಕೆಲಸವೇನು ಎಂದು ಅವರಿಗೆ ಪ್ರಶ್ನಿಸಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಅವರು ಪಿಜ್ಜಾ ತಿನ್ನುತ್ತೇನೆ ಎಂದಿದ್ದರು.
ಇದನ್ನೂ ಓದಿ: India vs England 2021: ಬೆರಳಿನ ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ವಾಷಿಂಗ್ಟನ್ ಸುಂದರ್ ಹೊರಕ್ಕೆ
Viral News: ಬೀಡಿ ಪ್ಯಾಕೆಟ್ ಮೇಲಿನ ಲಿಯೊನೆಲ್ ಮೆಸ್ಸಿ ಫೋಟೋ ವೈರಲ್!
ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟ(Tokyo Olympic 2020)ದ ಮಹಿಳೆಯರ 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 4 ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ (ಸ್ನ್ಯಾಚ್ನಲ್ಲಿ 87 ಕೆಜಿ ಮತ್ತು ಕ್ಲೀನ್ ಹಾಗೂ ಜರ್ಕ್ನಲ್ಲಿ 115 ಕೆಜಿ) ತೂಕವನ್ನು ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡು ಹೊಸ ದಾಖಲೆ ಸೃಷ್ಟಿಸಿದ್ದರು. ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ 194 ಕೆಜಿ ತೂಕ ಎತ್ತುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ