Dwayne Bravo Retirement : ಐಪಿಎಲ್‌ಗೆ ಗುಡ್ ಬೈ ಹೇಳಿದ ಡ್ವೇನ್ ಬ್ರಾವೋ..!

Dwayne Bravo Retirement : ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಮಾಜಿ ಆಟಗಾರ ಡ್ವೇನ್ ಬ್ರಾವೋ ಅವರನ್ನು ಫ್ರಾಂಚೈಸಿಗೆ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ. 4 ಬಾರಿ ಐಪಿಎಲ್ ವಿಜೇತ ಫ್ರಾಂಚೈಸ್ ತಮ್ಮ ಅಧಿಕೃತ ವೆಬ್‌ಸೈಟ್ ಮೂಲಕ ಸುದ್ದಿಯನ್ನು ಖಚಿತಪಡಿಸಿದೆ.

Written by - Channabasava A Kashinakunti | Last Updated : Dec 2, 2022, 03:08 PM IST
  • ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡ
  • ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ
  • ಬ್ರಾವೋ ಐಪಿಎಲ್ ಗೆ ನಿವೃತ್ತಿ ಘೋಷಿಸಿದ್ದಾರೆ
Dwayne Bravo Retirement : ಐಪಿಎಲ್‌ಗೆ ಗುಡ್ ಬೈ ಹೇಳಿದ ಡ್ವೇನ್ ಬ್ರಾವೋ..! title=

ನವದೆಹಲಿ : ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಸಿಎಸ್‌ಕೆ ಟೀಂನಿಂದ ಹೊಸ ಜವಾಬ್ದಾರಿಯೊಂದನ್ನು ಹೊತ್ತು ಕೊಂಡಿದ್ದಾರೆ. 

ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಮಾಜಿ ಆಟಗಾರ ಡ್ವೇನ್ ಬ್ರಾವೋ ಅವರನ್ನು ಫ್ರಾಂಚೈಸಿಗೆ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ. 4 ಬಾರಿ ಐಪಿಎಲ್ ವಿಜೇತ ಫ್ರಾಂಚೈಸ್ ತಮ್ಮ ಅಧಿಕೃತ ವೆಬ್‌ಸೈಟ್ ಮೂಲಕ ಸುದ್ದಿಯನ್ನು ಖಚಿತಪಡಿಸಿದೆ.

ಇದನ್ನೂ ಓದಿ : India vs Bangladesh : ಬಾಂಗ್ಲಾ ಟೀಂಗೆ ಬಿಗ್ ಶಾಕ್ : ಸರಣಿಯಿಂದ ವೇಗದ ಬೌಲರ್ ಔಟ್!

ಈ ಬಗ್ಗೆ ಪ್ರತಿಕ್ರಿಯೆ ನೀಡಿದ 39 ವರ್ಷ ವಯಸ್ಸಿನ ಬ್ರಾವೋ, "ನಾನು ಈ ಹೊಸ ಪ್ರಯಾಣಕ್ಕಾಗಿ ಎದುರು ನೋಡುತ್ತಿದ್ದೇನೆ. ಏಕೆಂದರೆ, ನಾನು ಬೌಲರ್‌ಗಳೊಂದಿಗೆ ಕೆಲಸ ಮಾಡುವುದನ್ನು ಆನಂದಿಸುತ್ತೇನೆ. ಈ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ. ಆಟಗಾರನಿಂದ ಕೋಚ್‌ ಹುದ್ದೆಗೆ, ನಾನು ಹೆಚ್ಚು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ನಾನು ಭಾವಿಸುವುದಿಲ್ಲ ಏಕೆಂದರೆ ನಾನು ಆಡುತ್ತಿರುವಾಗ, ನಾನು ಯಾವಾಗಲೂ ಬೌಲರ್‌ಗಳೊಂದಿಗೆ ಕೆಲಸ ಮಾಡುತ್ತೇನೆ ಮತ್ತು ಬ್ಯಾಟ್ಸ್‌ಮನ್‌ಗಳಿಗಿಂತ ಒಂದು ಹೆಜ್ಜೆ ಮುಂದೆ ಇರಲು ಪ್ಲಾನ್ ಮತ್ತು ಆಲೋಚನೆಗಳೊಂದಿಗೆ ಬರಲು ಪ್ರಯತ್ನಿಸುತ್ತೇನೆ. ಒಂದೇ ವ್ಯತ್ಯಾಸವೆಂದರೆ ನಾನು ಇನ್ನು ಮುಂದೆ ಮಿಡ್-ಆನ್ ಅಥವಾ ಮಿಡ್-ಆಫ್‌ನಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, "ಐಪಿಎಲ್ ಇತಿಹಾಸದಲ್ಲಿ ನಾನು ಪ್ರಮುಖ ವಿಕೆಟ್ ಟೇಕರ್ ಆಗುತ್ತೇನೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಆದರೆ ಐಪಿಎಲ್ ಇತಿಹಾಸದ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕೆಎಸ್ ವಿಶ್ವನಾಥನ್, “ಐಪಿಎಲ್‌ನಲ್ಲಿ ಅದ್ಭುತ ವೃತ್ತಿಜೀವನಕ್ಕಾಗಿ ಡ್ವೇನ್ ಬ್ರಾವೊಗೆ ಅಭಿನಂದನೆಗಳು. ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಸೂಪರ್ ಕಿಂಗ್ಸ್ ಕುಟುಂಬದ ನಿರ್ಣಾಯಕ ಸದಸ್ಯರಾಗಿದ್ದಾರೆ ಮತ್ತು ನಾವು ಟೀಂನಲ್ಲಿ ಮುಂದುವರಿಸಲು ಉತ್ಸುಕರಾಗಿದ್ದೇವೆ. ಬ್ರಾವೋ ಅವರ ಅಪಾರ ಅನುಭವವು ನಮ್ಮ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಪಾರ ಮೌಲ್ಯಯುತವಾಗಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಬೌಲಿಂಗ್ ಟೀಂ ಸುಧಾರಣೆಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Team India : ಟೀಂ ಇಂಡಿಯಾದಲ್ಲಿ ಈ ಆಟಗಾರನ ವೃತ್ತಿಜೀವನ ಬಹುತೇಕ ಅಂತ್ಯ! 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News