ನವದೆಹಲಿ: ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯತ್ತಿರುವ ವಿಶ್ವಕಪ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ಟಾಸ್ ನಿರ್ಧಾರ ಸರಿ ಎನ್ನುವಂತೆ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರಾದ ಜೇಸನ್ ರಾಯ್ ಅಜೇಯ 57 ಹಾಗೂ ಜಾನಿ ಬೇರ್ ಸ್ಟೋ ಅವರ 68 ರನ್ ಗಳ ನೆರವಿನಿಂದ 18 ಓವರ್ ಗಳಲ್ಲಿ ಇಂಗ್ಲೆಂಡ್ ತಂಡವು 131 ರನ್ ಗಳನ್ನು ಗಳಿಸಿದೆ.
ಇಂಗ್ಲೆಂಡ್ ತಂಡಕ್ಕೆ ಈ ಪಂದ್ಯ ನಿರ್ಣಾಯಕವಾಗಿದ್ದು ಗೆಲ್ಲಲೇಬೇಕಾದ ಪರಿಸ್ಥಿತಿಯಲ್ಲಿದೆ. ಟೂರ್ನಿಯುದ್ಧಕ್ಕೂ ಉತ್ತಮ ಪ್ರದರ್ಶನ ನೀಡಿದ್ದ ಭಾರತದ ಬೌಲರ್ ಗಳು ಇಂಗ್ಲೆಂಡ್ ತಂಡದ ಆರಂಭಿಕ ಜೋಡಿಗಳನ್ನು ಔಟ್ ಮಾಡಲು ಪರದಾಡಿದರು. ಭಾರತದ ಪರ ಜಸ್ಪ್ರೀತ್ ಬುಮ್ರಾ ಉತ್ತಮ ಬೌಲಿಂಗ್ ಮಾಡಿದರಾದರು ಕೂಡ ವಿಕೆಟ್ ತೆಗೆಯುವಲ್ಲಿ ಯಶಸ್ವಿಯಾಗಿಲ್ಲ.
ಈ ಪಂದ್ಯದ ಫಲಿತಾಂಶ ಭಾರತಕ್ಕೆ ಅಷ್ಟೇ ಅಲ್ಲದೆ ಪಾಕಿಸ್ತಾನ ತಂಡದ ಮೇಲೆಯೂ ಪರಿಣಾಮ ಬೀರಲಿದೆ ಎನ್ನಲಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ತಂಡವು ಗೆದ್ದದ್ದೆ ಆದಲ್ಲಿ ಪಾಕ್ ತಂಡಕ್ಕೆ ಸೆಮಿಫೈನಲ್ ಪ್ರವೇಶ ಸಾಧ್ಯತೆ ತೆರೆದುಕೊಳ್ಳುತ್ತದೆ. ಇಲ್ಲದೆ ಹೋದಲ್ಲಿ ಅವರು ಟೂರ್ನಿಯಿಂದ ಹೊರಬಿಳಲಿದ್ದಾರೆ.