England Women vs India Women, 1st ODI: ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ 7 ವಿಕೆಟ್ ಗಳ ಭರ್ಜರಿ ಗೆಲುವು

ಇಲ್ಲಿನ ಕೌಂಟಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : Sep 18, 2022, 11:55 PM IST
  • ಭಾರತದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಮೃತಿ ಮಂದಾನಾ 91, ಯಸ್ತಿಕಾ ಭಾಟಿಯಾ 50,ಹರ್ಮನ್ ಪ್ರೀತ್ ಕೌರ್ 74 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿದರು.
England Women vs India Women, 1st ODI: ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ 7 ವಿಕೆಟ್ ಗಳ ಭರ್ಜರಿ ಗೆಲುವು title=
Photo Courtsey: Twitter

ಹೊವೇ: ಇಲ್ಲಿನ ಕೌಂಟಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತೀಯ ಮಹಿಳಾ ತಂಡವು ಇಂಗ್ಲೆಂಡ್ ತಂಡವನ್ನು 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 227 ರನ್ ಗಳಿಗೆ ಕಟ್ಟಿ ಹಾಕಿತು.ಇಂಗ್ಲೆಂಡ್ ಮಹಿಳಾ ತಂಡದ ಪರವಾಗಿ ಡೇವಿಡ್ಸನ್  ರಿಚರ್ಡ್ಸ್ ಅಜೇಯ 50 ಹಾಗೂ ಡಿ.ವ್ಯಾಟ್ 43 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಭಾರತೀಯ ಮಹಿಳಾ ತಂಡದ ಪರವಾಗಿ ದೀಪ್ತಿ ಶರ್ಮಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು.

ಇಂಗ್ಲೆಂಡ್ ಮಹಿಳಾ ತಂಡವು ನೀಡಿದ 228 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತೀಯ ಮಹಿಳಾ ತಂಡವು ಕೇವಲ ಮೂರು ವಿಕೆಟ್ ನಷ್ಟಕ್ಕೆ 44.2 ಓವರ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸಿತು. ಭಾರತದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಮೃತಿ ಮಂದಾನಾ 91, ಯಸ್ತಿಕಾ ಭಾಟಿಯಾ 50,ಹರ್ಮನ್ ಪ್ರೀತ್ ಕೌರ್ 74 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News