Rohit Sharmas health condition: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಪಂದ್ಯಕ್ಕೂ ಮುನ್ನ ನಡೆಸಿದ ಅಭ್ಯಾಸದ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಇದೀಗ ಅವರ ಆರೋಗ್ಯ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ವೇಗದ ಬೌಲರ್ ಆಕಾಶದೀಪ್ ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಚಳಿಗಾಲದಲ್ಲಿ ಖರ್ಜೂರ ಸೇವಿಸಿದ್ರೆ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ; ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತೆ!


ಡಿಸೆಂಬರ್ 26 ರಂದು ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮೊದಲು ಭಾರತ ತಂಡವು ಯಾವುದೇ ಫಿಟ್ನೆಸ್ ಸಮಸ್ಯೆಯನ್ನು ಎದುರಿಸುತ್ತಿಲ್ಲ ಎಂದು ಆಕಾಶದೀಪ್ ಹೇಳಿದ್ದಾರೆ.


ರೋಹಿತ್ ಶರ್ಮಾಗೆ ಎಡ ಮೊಣಕಾಲಿಗೆ ಗಾಯವಾಗಿತ್ತು. ಇದರ ಹೊರತಾಗಿಯೂ ಬ್ಯಾಟಿಂಗ್ ಅಭ್ಯಾಸವನ್ನು ಮುಂದುವರೆಸಿದ್ದರು. ಅದಾದ ಬಳಿಕ ಫಿಸಿಯೋ ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಇನ್ನು ಅವರ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ಇದು ಅಭ್ಯಾಸದ ಸಮಯದಲ್ಲಿ ಉಂಟಾದ ಸಣ್ಣ ಗಾಯವಾಗಿದೆ ಎಂದು ಆಕಾಶ್ ಹೇಳಿದ್ದಾರೆ.


ಇದನ್ನೂ ಓದಿ: ಆಸ್ಪತ್ರೆಯಲ್ಲಿ ಡಾಕ್ಟರ್‌, ಸಿನಿಮಾದಲ್ಲಿ ಹಾಟ್ ಆ್ಯಕ್ಟರ್..! ಈಕೆಯನ್ನ ನೋಡಿದ್ರೆ ಗೊತ್ತಾಗುತ್ತೆ.. ಹೆಣ್ಮಕ್ಳೇ ಸ್ಟ್ರಾಂಗು ಗುರು..


"ಕ್ರಿಕೆಟ್ ಆಡುವಾಗ ಇಂತಹ ಸಣ್ಣಪುಟ್ಟ ಗಾಯಗಳು ಸಾಮಾನ್ಯ" ಎಂದು ಆಕಾಶದೀಪ್ ಹೇಳಿದರು. "ಅಭ್ಯಾಸದ ಸಮಯದಲ್ಲಿ ಇಂತಹ ಗಾಯಗಳು ಸಾಮಾನ್ಯ. ಗಾಯದ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ"  ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ