IND vs NZ 3rd ODI: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಸರಣಿಯಲ್ಲಿ ಟೀಂ ಇಂಡಿಯಾ 0-1 ಹಿನ್ನಡೆಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವುದು ಅತೀ ಮುಖ್ಯವಾಗಿದೆ. ಆದರೆ ಈಗ ಈ ಏಕದಿನ ಪಂದ್ಯದ ಮೇಲೆ ಬಿಕ್ಕಟ್ಟಿನ ಮೋಡಗಳು ಸುಳಿದಾಡುತ್ತಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Indian Cricket Team Ranking: ಟೀ ಇಂಡಿಯಾ ಈ ವರ್ಷ ಏಕದಿನದಲ್ಲಿ ನಂಬರ್-1 ತಂಡವಾಗಲಿದೆಯೇ? ಈ ಕೆಲಸ ಮಾಡಿದ್ರೆ ಇದು ಸಾಧ್ಯ


ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಇಂದು ಮುಂಜಾನೆ 7 ಗಂಟೆಗೆ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ. ಹವಾಮಾನ ವರದಿ ಪ್ರಕಾರ ಬುಧವಾರ ಕ್ರೈಸ್ಟ್ ಚರ್ಚ್ ನಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಪಂದ್ಯದಲ್ಲಿ ಶೇ.76ರಷ್ಟು ಮಳೆಯಾಗುವ ಸಾಧ್ಯತೆ ಇದೆ. ತಾಪಮಾನವು 16 ರಿಂದ 18 ಡಿಗ್ರಿ ಸೆಲ್ಸಿಯಸ್ ನಡುವೆ ಉಳಿಯಬಹುದು. ಮೂರನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾದರೆ, ಟೀಂ ಇಂಡಿಯಾ 0-1 ಅಂತರದಲ್ಲಿ ಸರಣಿಯನ್ನು ಕಳೆದುಕೊಳ್ಳುತ್ತದೆ.


ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು 300 ಕ್ಕೂ ಹೆಚ್ಚು ರನ್ ಗಳಿಸಿದ್ದರು ಆದರೆ ಈ ಗುರಿಯಲ್ಲಿ ನ್ಯೂಜಿಲ್ಯಾಂಡ್ ತಂಡ ಸುಲಭವಾಗಿ ಪೇರಿಸಿತ್ತು. ಹೀಗಿರುವಾಗ ಈ ಬಾರಿ ಬೌಲರ್‌ಗಳು ವಿಕೆಟ್‌ ಕಬಳಿಸುವ ಜವಾಬ್ದಾರಿ ಹೊರಬೇಕು. ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಯುಜ್ವೇಂದ್ರ ಚಹಾಲ್ ಸ್ಪಿನ್‌ನಲ್ಲಿ ಲಯಕ್ಕೆ ಮರಳಬೇಕಾಗುತ್ತದೆ. ಹಾಗಾದಾಗ ಮಾತ್ರ ಟೀಂ ಇಂಡಿಯಾ ಸರಣಿ ಉಳಿಸಲು ಸಾಧ್ಯವಾಗುತ್ತದೆ.


ಟೀಂ ಇಂಡಿಯಾ ಪರ ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್, ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅರ್ಧಶತಕ ಸಿಡಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿದ್ದ ಸೂರ್ಯಕುಮಾರ್ ಯಾದವ್ ಮತ್ತು ರಿಷಬ್ ಪಂತ್ ರನ್ ಗಳಿಸಲು ಪರದಾಡಿದ್ದರು.


ಭಾರತ-ನ್ಯೂಜಿಲೆಂಡ್ ತಂಡ:


ಭಾರತ ತಂಡ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್, ಯುಜ್ವೇಂದ್ರ ಚಾಹಲ್, ಅರ್. , ಶಾರ್ದೂಲ್ ಠಾಕೂರ್ ಮತ್ತು ಉಮ್ರಾನ್ ಮಲಿಕ್.


ಇದನ್ನೂ ಓದಿ: Pakistan:“ನನ್ನ ಕೈಯಲ್ಲಿ ಬಟ್ಟೆ, ಬೂಟು ಸ್ವಚ್ಚಗೊಳಿಸುತ್ತಿದ್ದ, ಮಸಾಜ್ ಮಾಡಿಸಿಕೊಳ್ಳುತ್ತಿದ್ದ”: ಕ್ರಿಕೆಟಿಗನ ಗಂಭೀರ ಆರೋಪ


ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್, ಫಿನ್ ಅಲೆನ್, ಡೆವಿನ್ ಕಾನ್ವೇ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.