IND W vs UAE W Highlights: 2024ರ ಮಹಿಳಾ ಏಷ್ಯಾ ಕಪ್ʼನಲ್ಲಿ ಭಾನುವಾರ ರಣಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ ಭಾರತ 78 ರನ್‌ಗಳ ಸುಲಭ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಭಾರತಕ್ಕೆ ಇದು ಸತತ ಎರಡನೇ ಗೆಲುವು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ.
ಮಹಿಳಾ ಕ್ರಿಕೆಟ್ ತಂಡದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದೊಡ್ಡ ವರ್ಚಸ್ಸು ಕಾಣಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತವು 201 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಲು ಮುಂದಾದ ಯುಎಇ ತಂಡವು ಸಂಪೂರ್ಣ ಓವರ್‌ನಲ್ಲಿ ಕೇವಲ 123 ರನ್‌ಗಳನ್ನು ತಲುಪಲು ಸಾಧ್ಯವಾಯಿತು.
ಇದನ್ನೂ ಓದಿ: ಇತಿಹಾಸ ಸೃಷ್ಟಿಗೆ ಎರಡೇ ಹೆಜ್ಜೆ ದೂರ... 'ಶತಕ'ಗಳ ಶ್ರೇಷ್ಠ ದಾಖಲೆಯತ್ತ ರೋಹಿತ್ ಶರ್ಮಾ ಚಿತ್ತ
ಪವರ್‌ಪ್ಲೇʼಯಲ್ಲಿ ಭಾರತ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಹರ್ಮನ್‌ಪ್ರೀತ್ ಕೌರ್ ಮತ್ತು ರಿಚಾ ಘೋಷ್ ಐದನೇ ವಿಕೆಟ್ʼಗೆ 45 ಎಸೆತಗಳಲ್ಲಿ 75 ರನ್ ಸೇರಿಸಿದರು. ಭಾರತದ ಸ್ಕೋರ್ ಅನ್ನು 20 ಓವರ್ʼಗಳಲ್ಲಿ 201/5 ಗೆ ಕೊಂಡೊಯ್ದರು. ಭಾರತ ಮಹಿಳಾ ಕ್ರಿಕೆಟ್ ತಂಡದ ಇತಿಹಾಸದಲ್ಲಿ ಯಾವುದೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 200 ರನ್ʼಗಳ ಗಡಿ ದಾಟಿದ್ದು ಇದೇ ಮೊದಲು. ಇದಕ್ಕೂ ಮೊದಲು, ಭಾರತದ ಅತ್ಯುತ್ತಮ ಸ್ಕೋರ್ 198/4 ಆಗಿತ್ತು. ಇದು 2018 ರಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಟಿ 20 ಅಂತರಾಷ್ಟ್ರೀಯ ಪಂದ್ಯದಲ್ಲಿ.
35 ವರ್ಷದ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ವೇಳೆ ಸಂಪೂರ್ಣ ಪ್ರಾಬಲ್ಯ ಮೆರೆದರು. ತಮ್ಮ 47 ಎಸೆತಗಳ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಮತ್ತು ಒಂದು ಸಿಕ್ಸರ್‌ಗಳನ್ನು ಬಾರಿಸಿದ್ದರು. ಈ ರೀತಿಯಾಗಿ, ಹರ್ಮನ್‌ಪ್ರೀತ್ ತನ್ನ 12 ನೇ ಅರ್ಧಶತಕವನ್ನು T20 ಇಂಟರ್‌ನ್ಯಾಶನಲ್‌ನಲ್ಲಿ ಗಳಿಸಿದರು, ಇದು ನಾಯಕಿಯಾಗಿ ಅವರ 11 ನೇ ಅರ್ಧಶತಕವಾಗಿದೆ.
ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಜಯ್ ಶಾ!
7 ಬಾರಿಯ ಚಾಂಪಿಯನ್ ಭಾರತ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ತನ್ನ ಸತತ ಎರಡನೇ ಗೆಲುವಿನೊಂದಿಗೆ ಸೆಮಿಫೈನಲ್ ತಲುಪಲು ಒಂದು ಹೆಜ್ಜೆ ದೂರದಲ್ಲಿದೆ. ಎರಡು ಗೆಲುವಿನೊಂದಿಗೆ, ಭಾರತವು 4 ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಇದರಲ್ಲಿ ನೆಟ್ ರನ್ ರೇಟ್ +3.298 ಆಗಿದೆ. ಮಂಗಳವಾರ ನಡೆಯಲಿರುವ ತನ್ನ ಮೂರನೇ ಹಾಗೂ ಅಂತಿಮ ಗುಂಪಿನ ಪಂದ್ಯದಲ್ಲಿ ಭಾರತ ನೇಪಾಳವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ, ಟೀಂ ಇಂಡಿಯಾ ಅಧಿಕೃತವಾಗಿ ಸೆಮಿಫೈನಲ್ ಟಿಕೆಟ್ ಪಡೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.