ನವದೆಹಲಿ: ಇತ್ತೀಚಿಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಭರ್ಜರಿ ಗೆಲುವು ಸಾಧಿಸಿದೆ.
ಆದರೆ ಈಗ ಭಾರತ ತಂಡಕ್ಕೆ ಹಿರಿಯ ಆಟಗಾರರ ಫಾರ್ಮ್ ಚಿಂತೆಗೀಡು ಮಾಡುವಂತೆ ಮಾಡಿದೆ.ಅದರಲ್ಲೂ ಅಜಿಂಕ್ಯಾ ರಹಾನೆ, ಚೇತೆಶ್ವರ್ ಪೂಜಾರ, ವಿರಾಟ್ ಕೊಹ್ಲಿ ಅವರು ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.
ಇದನ್ನೂ ಓದಿ: Job and Career: ಈ ಜಿಲ್ಲೆಗಳ ರೈತರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸುವರ್ಣಾವಕಾಶ...!
ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಸರನ್ ದೀಪ್ ಸಿಂಗ್ 'ನಮ್ಮ ಬ್ಯಾಟಿಂಗ್ ವಿಭಾಗವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ ಕೆಎಲ್ ರಾಹುಲ್ ಮಾತ್ರ ಪ್ರಮುಖ ಅಂಶವಾಗಿದೆ.ಆದರೆ ನಾವು ಅವರನ್ನು ಮತ್ತು ವಿರಾಟ್ ಕೊಹ್ಲಿಯನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ, ಆದರೆ ಇಲ್ಲಿ ನಾನು ಪೂಜಾರ ಬಗ್ಗೆ ಮಾತನಾಡಲು ಬಯಸುತ್ತೇನೆ, ಏಕೆಂದರೆ ಶ್ರೇಯಸ್ ಅಯ್ಯರ್ ಅವರಂತವರು ರನ್ ಗಳಿಸಬೇಕಾಗಿದೆ.ನೀವು ಹಿರಿಯ ಆಟಗಾರರಾಗಿದ್ದೀರಿ, ನಿಮ್ಮ ಫ್ಲಾಪ್ ಶೋ ಹಾಗೆಯೇ ಮುಂದುವರಿದರೆ ನೀವು ಶೀಘ್ರದಲ್ಲೇ ವಿಶ್ರಾಂತಿ ಪಡೆಯಬೇಕಾಗುತ್ತದೆ" ಎಂದು ಅವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಪ್ರವೇಶ: ಅರ್ಜಿ ಆಹ್ವಾನ
ಭಾರತ ತಂಡವು ಸೆಂಚುರಿಯನ್ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಈ ಸಾಧನೆ ಮಾಡಿದ ಏಷ್ಯಾದ ಮೊದಲ ದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.